ಮೈಸೂರು (ಫೆ. 16): ಬೀದಿ ನಾಯಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮೈಸೂರಿನಲ್ಲಿ ಯುವಕನನ್ನು ಬಂಧಿಸಲಾಗಿದೆ. ಮೈಸೂರಿನ ವಿವಿ ಪುರಂ ಪೋಲೀಸರಿಂದ ಯುವಕನನ್ನು ಬಂಧಿಸಲಾಗಿದ್ದು, ಆ ಯುವಕನ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಪೀಪಲ್ ಫಾರ್ ಅನಿಮಲ್ ಸಂಸ್ಥೆಯ ಸದಸ್ಯರು ನೀಡಿದ ದೂರಿನ ಅನ್ವಯ ಹಾಗೂ ವಿಡಿಯೋ ಆಧಾರದ ಮೇಲೆ ಆ ಯುವಕನನ್ನು ಬಂಧಿಸಲಾಗಿದೆ.
ಫೆ. 11ರ ರಾತ್ರಿ 11 ಗಂಟೆ ವೇಳೆ ಈ ಘಟನೆ ನಡೆದಿದೆ. ಮೈಸೂರಿನ ಗೋಕುಲಂನ ಗಣಪತಿ ದೇವಾಲಯದ ರಸ್ತೆ ಬಳಿ ಈ ಘಟನೆ ನಡೆದಿದ್ದು, ಹೆಣ್ಣುನಾಯಿಯೊಂದನ್ನು ಹಿಡಿದು ಲೈಂಗಿಕ ಕಿರುಕುಳ ನೀಡುತ್ತಿದ್ದ ಯುವಕನ ಕೃತ್ಯವನ್ನು ಸ್ಥಳೀಯರೊಬ್ಬರು ವಿಡಿಯೋ ಮಾಡಿದ್ದರು. ಆ ವಿಡಿಯೋ ಆಧಾರದ ಮೇಲೆ ಪೀಪಲ್ ಫಾರ್ ಅನಿಮಲ್ ಸಂಸ್ಥೆಯ ಕೆ.ಬಿ. ಹರೀಶ್ ದೂರು ನೀಡಿದ್ದಾರೆ.
FASTag: ಇಂದಿನಿಂದ ಫಾಸ್ಟ್ಟ್ಯಾಗ್ ಕಡ್ಡಾಯ; ಇಲ್ಲದಿದ್ದರೆ ಟೋಲ್ನಲ್ಲಿ ಕಟ್ಟಬೇಕು ದುಪ್ಪಟ್ಟು ಶುಲ್ಕ!
ವಿಡಿಯೋ ಸಾಕ್ಷಿಯ ಆಧಾರದ ಮೇಲೆ ಯುವಕನ ಮೇಲೆ ದೂರು ದಾಖಲಿಸಿ, ಬಂಧಿಸಲಾಗಿದೆ. ಪೀಪಲ್ ಫಾರ್ ಅನಿಮಲ್ ಸಂಸ್ಥೆಯ ಸದಸ್ಯ ಕೆ.ಬಿ. ಹರೀಶ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ನಾಯಿಯ ವೈದ್ಯಕೀಯ ಪರೀಕ್ಷೆಗೆ ಮುಂದಾದ ಪೊಲೀಸರು ವರದಿ ಬಂದ ನಂತರ ಯುವಕನ ಮೇಲೆ ಕಾನೂನು ಕ್ರಮ ಜರುಗಿಸಲು ನಿರ್ಧಾರ ಮಾಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ