Jamboo Savari 2019: ಜಂಬೂ ಸವಾರಿಯೊಂದಿಗೆ ಐತಿಹಾಸಿಕ ಮೈಸೂರು ದಸರಾಗೆ ತೆರೆ

Mysore Dasara 2019 Live:ಚಾಮುಂಡೇಶ್ವರಿ ಉತ್ಸವಮೂರ್ತಿಯನ್ನು ಹೊತ್ತ ಅರ್ಜುನ ಗಾಂಭೀರ್ಯದಿಂದ ಹೆಜ್ಜೆಹಾಕಿದ್ದಾನೆ. ತಾಯಿ ಚಾಮುಂಡೇಶ್ವರಿಗೆ ಜೈಕಾರ ಹಾಕುತ್ತಾ ಮೈಸೂರಿನ ಜನರು ಸಂಭ್ರಮದಿಂದ ಜಂಬೂಸವಾರಿಯನ್ನು ಕಣ್ತುಂಬಿಕೊಂಡಿದ್ದಾರೆ.

Sushma Chakre | news18-kannada
Updated:October 8, 2019, 10:01 PM IST
Jamboo Savari 2019: ಜಂಬೂ ಸವಾರಿಯೊಂದಿಗೆ ಐತಿಹಾಸಿಕ ಮೈಸೂರು ದಸರಾಗೆ ತೆರೆ
ಮೈಸೂರು ಜಂಬೂಸವಾರಿಗೆ ತೆರೆ
  • Share this:
ಮೈಸೂರು (ಅ. 8): ವಿಶ್ವವಿಖ್ಯಾತ ಮೈಸೂರು ದಸರಾ ಸಂಭ್ರಮದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯನ್ನು ಲಕ್ಷಾಂತರ ಜನರು ಕಣ್ತುಂಬಿಕೊಂಡಿದ್ದಾರೆ.  ಬಣ್ಣಗಳ ಚಿತ್ತಾರದಿಂದ ಅಲಂಕೃತನಾದ ಅರ್ಜುನ ಆನೆಯ ಮೇಲೆ ಹೊರಟ ಚಿನ್ನದ ಅಂಬಾರಿ ಮೈಸೂರಿನ ಮುಖ್ಯರಸ್ತೆಗಳಲ್ಲಿ ಸಾಗಿ ಬನ್ನಿ ಮಂಟಪವನ್ನು ತಲುಪಿದೆ.

ಅರ್ಜುನನ ಮೇಲಿರುವ 750 ಕೆ.ಜಿ. ತೂಕದ ಚಿನ್ನದ ಅಂಬಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುಷ್ಪನಮನ ಸಲ್ಲಿಸಿ ಐತಿಹಾಸಿಕ ಜಂಬೂಸವಾರಿಗೆ ಚಾಲನೆ ನೀಡಿದ್ದರು. ಚಾಮುಂಡೇಶ್ವರಿ ಉತ್ಸವಮೂರ್ತಿಯನ್ನು ಹೊತ್ತ ಅರ್ಜುನ ಗಾಂಭೀರ್ಯದಿಂದ ಹೆಜ್ಜೆಹಾಕಿದ್ದಾನೆ. ತಾಯಿ ಚಾಮುಂಡೇಶ್ವರಿಗೆ ಜೈಕಾರ ಹಾಕುತ್ತಾ ಮೈಸೂರಿನ ಜನರು ಸಂಭ್ರಮದಿಂದ ಜಂಬೂಸವಾರಿಯನ್ನು ಕಣ್ತುಂಬಿಕೊಂಡಿದ್ದಾರೆ.

ಇಂದು ಬೆಳಗ್ಗೆಯಿಂದ ಅನೇಕ ಸ್ಪರ್ಧೆಗಳು ನಡೆದಿದ್ದು, ವಜ್ರಮುಷ್ಠಿ ಕಾಳಗದಲ್ಲಿ ರಾಮನಗರ ನರಸಿಂಹ ಜಟ್ಟಿ, ಬೆಂಗಳೂರಿನ ನಾರಾಯಣ ಜಟ್ಟಿ, ಚಾಮರಾಜನಗರ ಗಿರೀಶ್ ಜಟ್ಟಿ, ಮೈಸೂರಿನ ಬಲರಾಮ ಜಟ್ಟಿ ನಡುವೆ ಕಾಳಗ ನಡೆದಿದೆ. ಬೆಳಗ್ಗೆ ಆಯುಧಗಳಿಗೆ ಪೂಜೆ ನೆರವೇರಿಸಿದ ಯದುವೀರ್ ಒಡೆಯರ್ ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದ್ದಾರೆ. ರಾಜಪೋಷಾಕಿನಲ್ಲಿ ಕಂಗೊಳಿಸಿದ ಯದುವೀರ ಒಡೆಯರ್ ಕುಟುಂಬಸ್ಥರೊಂದಿಗೆ ಜಂಬೂಸವಾರಿಯನ್ನು ಕಣ್ತುಂಬಿಕೊಂಡಿದ್ದಾರೆ.

Mysore Dasara 2019: ವಿಶ್ವವಿಖ್ಯಾತ ಜಂಬೂ ಸವಾರಿಗೆ ಕ್ಷಣಗಣನೆ; ಅರಮನೆಯಲ್ಲಿ ವಿಜಯದಶಮಿ ಸಂಭ್ರಮ

ಜಂಬೂಸವಾರಿ ಮೂಲಕ ಇಂದು ದಸರಾಗೆ ತೆರೆಬಿದ್ದಿದ್ದು, ವೈಭವದ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಜನರು ಅರಮನೆಯ ಮುಂದಿನ ರಸ್ತೆಗಳಲ್ಲಿ ನೆರೆದಿದ್ದರು. ಕ್ಯಾಪ್ಟನ್ ಅರ್ಜುನ 8 ಬಾರಿ ಅಂಬಾರಿ ಹೊತ್ತು ಜಂಬೂ ಸವಾರಿ ಯಶಸ್ವಿಗೊಳಿಸಿದ್ದಾನೆ.  ಕ್ಯಾಪ್ಟನ್ ಅರ್ಜುನನಿಗೆ 59 ವರ್ಷವಾಗಿದ್ದು ಜಂಬೂ ಸವಾರಿ ಮೆರವಣಿಗೆಯಲ್ಲಿ ಅರ್ಜುನನನ್ನ ಮಾವುತ ವಿನು ,ಕಾವಾಡಿ ಮಧು ಮುನ್ನಡೆಸಲಿದ್ದಾರೆ. ಅರ್ಜುನ ಕಳೆದ 19-20 ವರ್ಷಗಳಿಂದ ದಸರಾ ಮಹೋತ್ಸವದಲ್ಲಿ ಭಾಗಿಯಾಗಿದ್ದು, 2012 ರಿಂದ ಚಿನ್ನದ ಅಂಬಾರಿ ಹೊರುವ ಜವಾಬ್ದಾರಿಯನ್ನ ನಿರ್ವಹಿಸುತ್ತಿದ್ದಾನೆ.

ಅತ್ಯಾಕರ್ಷಕ ಪಂಜಿನ ಕವಾಯತು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಹಾಗೂ ವರ್ಣರಂಜಿತ ತೆರೆ ಎಳೆಯುವ ಅತ್ಯಾಕರ್ಷಕ ಕಾರ್ಯಕ್ರಮವಾದ ಪಂಜಿನ ಕವಾಯತು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬನ್ನಿಮಂಟಪ ಮೈದಾನ ಸಜ್ಜಾಗಿದೆ. ಭಾರತೀಯ ಸೇನೆಯ ವಿಶೇಷ ವಿಭಾಗದ ಯೋಧರಿಂದ ಮೈನವಿರೇಳಿಸುವ ಮೋಟಾರ್ ಬೈಕ್ ಸಾಹಸ ಪ್ರದರ್ಶನ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಕೊನೆಯಲ್ಲಿ ಚಿತ್ತಾಕರ್ಷಕ ಪಂಜಿನ ಕವಾಯತು ನಡೆಯಲಿದೆ.

(ವರದಿ: ಪುಟ್ಟಪ್ಪ) 

First published: October 8, 2019, 4:38 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading