ಆರೋಗ್ಯ ಸಚಿವರೇ ವಿರೋಧಿಸುತ್ತಿರುವಾಗ SSLC ಪರೀಕ್ಷೆ ಏಕೆ, ರದ್ದು ಮಾಡಿ: ಸಿದ್ದರಾಮಯ್ಯ

ಸೊಸೆ ಮನೆಗೆ ಬರುವವರೆಗೂ ಹೊರಗಿನವಳು. ಬಂದ ಮೇಲೆ ಸೊಸೆ ಮನೆಯವಳೇ ಆಗುತ್ತಾಳೆ ಅಂತ‌. ಅದೇ ರೀತಿ ನಾನು ಹೊರಗಿನಿಂದ ಬಂದವನು, ಬಂದ ಮೇಲೆ‌ ನಾನು 5 ವರ್ಷ ಮುಖ್ಯಮಂತ್ರಿ ಆಗಿದ್ದೇನೆ. ಹೀಗಾಗಿ ನಾನು ಮನೆಯವನೇ ಎಂದ ಸಿದ್ದರಾಮಯ್ಯ.

ವಿಪಕ್ಷ ನಾಯಕ ಸಿದ್ದರಾಮಯ್ಯ

ವಿಪಕ್ಷ ನಾಯಕ ಸಿದ್ದರಾಮಯ್ಯ

  • Share this:
ಮೈಸೂರು: 2 ದಿನಗಳಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಶಿಕ್ಷಣ ಇಲಾಖೆ ನಿರ್ಧಾರವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಖಂಡಿಸಿದರು. ರಾಜ್ಯದ ಇವತ್ತಿನ ಪರಿಸ್ಥಿತಿಯಲ್ಲಿ SSLC ಪರೀಕ್ಷೆ ನಡೆಸಬಾರದು. ಪಿಯುಸಿ ಪರೀಕ್ಷೆ ರದ್ದಾದ ಮೇಲೆ SSlC ಪರೀಕ್ಷೆ ಯಾಕೆ ಮಾಡುತ್ತಿದ್ದೀರಿ. SSLC ಪರೀಕ್ಷೆ ನಡೆಸುವ ಬಗ್ಗೆ ಆರೋಗ್ಯ ಸಚಿವರೇ ವಿರೋಧ ಮಾಡಿದ್ದಾರೆ. ಆದರು ಯಾಕೆ SSlC ಪರೀಕ್ಷೆ ನಡೆಸುತ್ತಿದ್ದಾರೆ ಎಂದು ಟೀಕಿಸಿದರು.

ವಾಕ್ಸಿನ್ ವಿಚಾರದಲ್ಲಿ ಸುಧಾಕರ್ ಸುಳ್ಳು ಹೇಳುತ್ತಿದ್ದಾರೆ

ಲಸಿಕೆ ವಿತರಣೆ ವಿಚಾರವಾಗಿ ಆರೋಗ್ಯ ಸಚಿವ ಕೆ.ಸುಧಾಕರ್​​ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು. ವಾಕ್ಸಿನ್ ವಿಚಾರದಲ್ಲಿ ಸುಧಾಕರ್ ಸುಳ್ಳು ಹೇಳುತ್ತಿದ್ದಾರೆ. ವಾಕ್ಸಿನ್ ಸ್ಟಾಕ್ ಇದ್ದರೆ ಜನ ಯಾಕೆ ವಾಕ್ಸಿನ್ ಗಾಗಿ ಕ್ಯೂ ನಿಲ್ಲುತ್ತಿದ್ದರು. ವಾಕ್ಸಿನ್ ಗಾಗಿ ಜನರು ಪರದಾಡುತ್ತಿದ್ದು, ಸರ್ಕಾರಕ್ಕೆ ವಾಕ್ಸಿನ್ ಪೂರೈಸಲು ಆಗುತ್ತಿಲ್ಲ. ಸರ್ಕಾರದಲ್ಲಿ ಸಚಿವರ ನಡುವೆ ಸಮನ್ವಯತೆ ಇಲ್ಲ. ವಾಕ್ಸಿನ್ ಹಂಚಿಕೆಯಲ್ಲಿ ಕೇಂದ್ರ ಮತ್ತು ರಾಜ್ಯ ಎರಡು ಸರ್ಕಾರ ವಿಫಲವಾಗಿವೆ‌. ಸರಿಯಾದ ಪ್ಲ್ಯಾನ್ ಮಾಡದೆ ವಾಕ್ಸಿನ್ ಗಾಗಿ ಜನ ಅಲೆಯುವಂತೆ ಮಾಡಿದೆ ಎಂದು ಕಿಡಿಕಾರಿದರು.

ತುರ್ತಾಗಿ ಮುಂಗಾರು ಅಧಿವೇಶನ ಕರೆಯಬೇಕು

ತುರ್ತಾಗಿ ರಾಜ್ಯದಲ್ಲಿ ವಿಧಾನಸಭಾ ಅಧಿವೇಶನ ಕರೆಯಬೇಕು. ಇಂತಹ ತುರ್ತು ಪರಿಸ್ಥಿತಿಯಲ್ಲಿ ಅಧಿವೇಶನ ಕರೆಯದೆ. ಇನ್ನು ಯಾವ ಸಂದರ್ಭದಲ್ಲಿ ಅಧಿವೇಶನ ಕರೆಯುತ್ತಾರೆ. ವಿರೋಧ ಪಕ್ಷಗಳನ್ನ ಎದುರಿಸಲು ಆಡಳಿತ ಪಕ್ಷಕ್ಕೆ ಭಯವಿದೆ. ಈಗಾಗಿಯೇ ಅಧಿವೇಶನ ಕರೆಯುತ್ತಿಲ್ಲ. ಅಧಿವೇಶನ ಕರೆದರೆ ಸರ್ಕಾರದ ಬಣ್ಣ ಬದಲಾಗುತ್ತೆ ಎಂಬುದು ಅವರಿಗೆ ಗೊತ್ತಿದೆ. ಪ್ರಜಾಪ್ರಭುತ್ವದ ಮೇಲೆ ಅವರಿಗೆ ನಂಬಿಕೆ ಇದ್ದರೆ ಅಧಿವೇಶನ ಕರೆಯಬೇಕು. ತುರ್ತಾಗಿ ಮುಂಗಾರು ಅಧಿವೇಶನ ಕರೆಯಬೇಕು ಎಂದು ಆಗ್ರಹಿಸಿದರು.

ಸೊಸೆಯಂತೆ, ನಾನು ಕಾಂಗ್ರೆಸ್ಸಿನವನು

ಇನ್ನು ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಯಾರು ಎಂಬುದು ಚರ್ಚೆಯೇ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು. ನನ್ನ ಡಿಕೆ ಶಿವಕುಮಾರ್ ನಡುವೆ ಯಾವುದೇ ಸಮನ್ವಯ ಸಮಿತಿ ರಚನೆ ಆಗುತ್ತಿಲ್ಲ. ಕಾಂಗ್ರೆಸ್ ನಲ್ಲಿ ಮೂಲ ವಲಸಿಗ ಎಂಬ ಪ್ರಶ್ನೆಯು ಇಲ್ಲ. ಮೊನ್ನೆ ಸಿಎಂ ಇಬ್ರಾಹಿಂ ಹೇಳಿದ್ದಾರೆ, ಸೊಸೆ ಮನೆಗೆ ಬರುವವರೆಗೂ ಹೊರಗಿನವಳು. ಬಂದ ಮೇಲೆ ಸೊಸೆ ಮನೆಯವಳೇ ಆಗುತ್ತಾಳೆ ಅಂತ‌. ಅದೇ ರೀತಿ ನಾನು ಹೊರಗಿನಿಂದ ಬಂದವನು, ಬಂದ ಮೇಲೆ‌ ನಾನು 5 ವರ್ಷ ಮುಖ್ಯಮಂತ್ರಿ ಆಗಿದ್ದೇನೆ. ನಾನು ಮನೆಯವನೇ ಎಂದರು. ಸಿಎಂ ಯಾರಾಗಬೇಕೆಂಬುದು ಚುನಾವಣೆ ಫಲಿತಾಂಶ ನಂತರ‌ ಶಾಸಕರು, ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇನ್ನು ಚುನಾವಣೆ ಎರಡೂವರೆ ವರ್ಷ ಇದೆ. ಈಗಲೇ ಸಿಎಂ ಅಭ್ಯರ್ಥಿ ಬಗ್ಗೆ ಮಾತುಗಳು ಇಲ್ಲ ಎಂದು ವಿಷಯವನ್ನು ತಣ್ಣಗಾಗಿಸಲು ಯತ್ನಿಸಿದರು.

 ಆ ವಿಷಯ ನಂಗೆ ಸಂಬಂಧವಿಲ್ಲ

ಯೂತ್ ಕಾಂಗ್ರೆಸ್ ಅಧ್ಯಕ್ಷರ ನೇಮಕ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರುಯ, ಅದಕ್ಕು ನಮಗು ಯಾವುದೇ ಸಂಬಂಧ ಇರೋದಿಲ್ಲ. ಅದೇ ಪ್ರತ್ಯೇಕವಾದ ವ್ಯವಸ್ಥೆ, ಆದರೂ ನಾನು ಸಲಹೆ ಕೊಟ್ಟಿದ್ದೆ. ಪ್ರತ್ಯೇಕ ಚುನಾವಣೆ ನಡೆದ ಮೇಲೆ ಅವರ ಆಯ್ಕೆ ಆಗಿದೆ. ಹೊಂದಾಣಿಕೆಯಿಂದ ಒಬ್ಬರನ್ನು ನೇಮಿಸಿ ಎಂದು ಹೇಳಿದ್ದೆ. ಇದರಲ್ಲಿ ನನ್ನದಾಗಲಿ ಡಿಕೆಶಿಯವರದ್ದಾಗಲಿ ಪಾತ್ರ ಇರುವುದಿಲ್ಲ, ಈ ವಿಚಾರದಲ್ಲಿ ಗೊಂದಲಗಳು ಬೇಡ ಎಂದು ಸಮಜಾಯಿಷಿ ನೀಡಿದರು.

ಸಿಎಂ ಮೂಢನಂಬಿಕೆಗೆ ಅಂಟಿಕೊಂಡಿದ್ದಾರೆ

ಚಾಮರಾಜನಗರದಲ್ಲಿ ಆಕ್ಸಿಜನ್​ ಕೊರತೆಯಿಂದ ದುರಂತ ನಡೆದರು ಜಿಲ್ಲೆಗೆ ಮುಖ್ಯಮಂತ್ರಿ ಹೋಗಲಿಲ್ಲ. ಅಷ್ಟು ದೊಡ್ಡ ದುರಂತ ನಡೆದರು ಅಲ್ಲಿಗೆ ಹೋಗದಿದ್ದರೆ ಹೇಗೆ. ಸಿಎಂ ಮೂಢನಂಬಿಕೆಗೆ ಅಂಟಿಕೊಂಡು ಕೂತಿದ್ದಾರೆ. ಈಗಾಗಿ ಸಿಎಂ ಚಾಮರಾಜನಗರಕ್ಕೆ ಹೋಗುತ್ತಿಲ್ಲ. ನಾನು ಅಧಿಕಾರದಲ್ಲಿದ್ದಾಗ 12 ಬಾರಿ ಚಾಮರಾಜನಗರಕ್ಕೆ ಹೋಗಿದ್ದೆ. ಅಲ್ಲಿಯ ಜನರ ಕಷ್ಟ ಕೇಳಲು ಸಿಎಂ ಭೇಟಿ ನೀಡಲಿ ಎಂದರು.
Published by:Kavya V
First published: