Mysore Dasara-2021: ಮಾಜಿ ಸಿಎಂ ಎಸ್​ಎಂ ಕೃಷ್ಣ ಅವರಿಂದ ಈ ಬಾರಿ ಮೈಸೂರು ದಸರಾ ಉದ್ಘಾಟನೆ

ಅಕ್ಟೋಬರ್​ 7 ರಿಂದ ಆರಂಭವಾಗಲಿರುವ ನಾಡ ಹಬ್ಬ ದಸರಾ ಮಹೋತ್ಸವಕ್ಕೆ ಎಸ್​ ಎಂ ಕೃಷ್ಣ ಅವರು ವಿದ್ಯುಕ್ತ ಚಾಲನೆ ನೀಡಲಿದ್ದಾರೆ

ಮಾಜಿ ಸಿಎಂ ಎಸ್​ಎಂ ಕೃಷ್ಣಗೆ ಅಭಿನಂದಿಸುತ್ತಿರುವ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ

ಮಾಜಿ ಸಿಎಂ ಎಸ್​ಎಂ ಕೃಷ್ಣಗೆ ಅಭಿನಂದಿಸುತ್ತಿರುವ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ

 • Share this:
  ಬೆಂಗಳೂರು (ಸೆ. 28): ಜಗತ್​ ವಿಖ್ಯಾತ​ ಮೈಸೂರು ದಸರಾ (Mysore Dasara-2021) ಅನ್ನು ಈ ಬಾರಿ ಮಾಜಿ ಮುಖ್ಯಮಂತ್ರಿಗಳಾದ ಬಿಜೆಪಿ ಹಿರಿಯ ನಾಯಕ ಎಸ್​ಎಂ ಕೃಷ್ಣಾ ಉದ್ಘಾಟಿಸಲಿದ್ದಾರೆ. ಈ ಬಾರಿ ದಸರಾ ಉದ್ಘಾಟಕರಾಗಿ ಎಸ್​ ಎಂ ಕೃಷ್ಣ ಅವರನ್ನು ಆಯ್ಕೆ ಮಾಡಿರುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಅಕ್ಟೋಬರ್​ 7 ರಿಂದ ಆರಂಭವಾಗಲಿರುವ ನಾಡ ಹಬ್ಬ ದಸರಾ ಮಹೋತ್ಸವಕ್ಕೆ ಎಸ್​ ಎಂ ಕೃಷ್ಣ ಅವರು ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ಈ ಕುರಿತು ಇಂದು ನಡೆದ ಸಭೆಯಲ್ಲಿ ತೀರ್ಮಾನ ನಡೆಸಲಾಗಿದೆ ಎಂದು ಅವರು ತಿಳಿಸಿದರು.  ಈ ಬಾರಿ ಕೂಡ ಸರಳ ದಸರಾ 

  ಕಳೆದ ವರ್ಷದಂತೆ ಈ ಬಾರಿ ಕೂಡ ಸರಳವಾಗಿ ದಸರಾ ಆಚರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಸೋಂಕು ಕಡಿಮೆಯಾದರೂ ಕೋವಿಡ್ ಹಾವಳಿ ರಾಜ್ಯದಲ್ಲಿ ಇನ್ನು ಇರುವುದರಿಂದ ಹಾಗೂ ಆಕ್ಟೋಬರ್ ತಿಂಗಳಿನಲ್ಲಿ ಮೂರನೇ ಅಲೆ ಬರುವ ಸಾಧ್ಯತೆ ಇದೆ ಎಂದು ತಜ್ಞರು ವರದಿ ನೀಡಿದ್ದಾರೆ. ಹೀಗಾಗಿ ಈ ಬಾರಿಯೂ ಸರಳವಾಗಿ ದಸರಾ ಆಚರಿಸಲು ಸರ್ಕಾರ ನಿರ್ಧಾರ ತೆಗೆದುಕೊಂಡಿದೆ.

  ಗಜಪಡೆ ತಾಲೀಮು ಆರಂಭ

  ಈಗಾಗಲೇ ಮೈಸೂರು ಅರಮನೆ ಆವರಣ ಸೇರಿರುವ ದಸರಾ ಗಜಪಡೆಗಳು ಈಗಾಗಲೇ ಅಂಬಾರಿ ಹೊರುವ ತಾಲೀಮು ಆರಂಭಿಸಿವೆ.  ಈ ಬಾರಿ 5 ಗಂಡಾನೆ, 3 ಹೆಣ್ಣಾನೆ ಸೇರಿ ಒಟ್ಟು 8 ಆನೆಗಳನ್ನು ಆಯ್ಕೆ ಮಾಡಲಾಗಿದ್ದು,  56 ವರ್ಷದ ಅಭಿಮನ್ಯು ಅಂಬಾರಿ ಹೊರಲಿದ್ದಾನೆ.

  ಇದನ್ನು ಓದಿ: ವಿಶ್ವವಿಖ್ಯಾತ ಜಂಬೂ ಸವಾರಿಗೆ ‘ಗಜಪಯಣ‘ ಆರಂಭ; ಅಭಿಮನ್ಯು ನೇತೃತ್ವದ 8 ಆನೆಗಳ ತಂಡ ನಾಡಿಗೆ

  9 ದಿನವೂ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

  ಸರಳ ದಸರಾ ಆಚರಣೆ ಮಾಡಿದರೂ 9 ದಿನಗಳು ಕೂಡ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಈ ಮೂಲಕ ದಸರಾ ಆಚರಣೆ ಇನ್ನಷ್ಟು ಕಳೆಗಟ್ಟಲಿದೆ. ಅರಮನೆ ಸಾಂಪ್ರದಾಯಿಕ ಪದ್ಧತಿಗಳು ಎಂದಿನಂತೆ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್​ಟಿ ಸೋಮಶೇಖರ್​ ತಿಳಿಸಿದ್ದರು

  ಇದನ್ನು ಓದಿ: ನರ್ಸಿಂಗ್​ ಅಭ್ಯರ್ಥಿಗಳಿಗೆ ಬಂಪರ್​ ಅವಕಾಶ; 3006 ಹುದ್ದೆ ಭರ್ತಿಗೆ ಮುಂದಾದ ರಾಜ್ಯ ಸರ್ಕಾರ

  ಹೇಗಿರಲಿದೆ ಈ ಬಾರಿ ದಸರಾ

  ದಸರಾ ಆಚರಣೆ ಸಂಬಂಧ ಮೈಸೂರು ಮಹಾರಾಜರ ಕುಟುಂಬದವರ ಜೊತೆ ಮೈಸೂರು ಜಿಲ್ಲಾಡಳಿತ ಹಾಗೂ ದಸರಾ ಆಚರಣೆ ಸಮಿತಿ ಚರ್ಚೆ ನಡೆಸುತ್ತದೆ. ಮೈಸೂರು ಅರಮನೆಯಲ್ಲಿ ನಡೆಯಬೇಕಾದ ಸಾಂಪ್ರದಾಯಿಕ ಆಚರಣೆಗಳು ಹಾಗೂ ಅರಮನೆ ಆವರಣ ಮತ್ತು ಚಾಮುಂಡಿ ಬೆಟ್ಟದಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಯಾವುದೇ ಅಡ್ಡಿ ಇರುವುದಿಲ್ಲ. ಆದರೆ, ಸಾಂಸ್ಕೃತಿಕ, ಕಲೆ, ಸಂಗೀತ, ಕ್ರೀಡಾ ಚಟುವಟಿಕೆ, ಕುಸ್ತಿ ಪಂದ್ಯಾವಳಿ, ಪಂಜಿನ ಕವಾಯತು, ಸಿನಿಮೋತ್ಸವ, ರಂಗೋತ್ಸವ, ದೀಪೋತ್ಸವಗಳ ಆಚರಣೆಗಳಿಗೆ ಅವಕಾಶ ಇರುವುದು ಬಹುತೇಕ ಅನುಮಾನವಾಗಿದೆ. ಕಳೆದ ಬಾರಿಯಂತೆ ಖಾಸಗಿ ದರ್ಬಾರ್ ವೇಳೆ ರಾಜವಂಶಸ್ಥರು ಸೇರಿ ಕೆಲವೇ ಕೆಲವು ಮಂದಿಗೆ ಆಹ್ವಾನ ಇರುತ್ತದೆ.
  Published by:Seema R
  First published: