Mysore: ಬಟ್ಟೆ ಬ್ಯಾಗ್ ಖರೀದಿ ಹಗರಣ; ಸರ್ಕಾರದಿಂದ ತನಿಖೆಗೆ ಆದೇಶ, ರೋಹಿಣಿ ಸಿಂಧೂರಿಗೆ ಸಂಕಷ್ಟ

ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ನಡೆದಿದ್ದ ಬಟ್ಟೆ ಬ್ಯಾಗ್ ಖರೀದಿ ಹಗರಣದ ತನಿಖೆಗೆ ಸರ್ಕಾರ ಆದೇಶಿಸಿದೆ.

ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ

ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ

  • Share this:
ಮೈಸೂರು (ಮಾ.23): ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿಗೆ (Rohini Sindhuri) ಸಂಕಷ್ಟ ಎದುರಾಗಿದೆ. ಮೈಸೂರಿನ (Mysore) ಜಿಲ್ಲಾಧಿಕಾರಿಯಾಗಿದ್ದ ವೇಳೆ ರೋಹಿಣಿ ವಿರುದ್ಧ ಬಟ್ಟೆ ಬ್ಯಾಗ್ (Cloth Bag)  ಖರೀದಿ ಹಗರಣ​ ಆರೋಪ ಕೇಳಿ ಬಂದಿತ್ತು. ಇದೀಗ ಹಗರಣದ ತನಿಖೆಗೆ ಸರ್ಕಾರ ಆದೇಶ (Order) ನೀಡಿದೆ. ಈ ಹಗರಣವನ್ನು ಶಾಸಕ ಸಾ.ರಾ ಮಹೇಶ್  (Sa.Ra Ma​hesh)​ ಬಯಲಿಗೆ ಎಳೆದಿದ್ರು. ಮಾಜಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸತತ ಆರೋಪಗಳನ್ನು ಮಾಡುತ್ತಿದ್ದ ಜೆಡಿಎಸ್ ಶಾಸಕ ಸಾ.ರಾ ಮಹೇಶ್, ಮೈಸೂರನ್ನು ಪ್ಲಾಸ್ಟಿಕ್ ಮುಕ್ತ ಮಾಡುವ ಯೋಜನೆ ನೆಪದಲ್ಲಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅಕ್ರಮವೆಸಗಿದ್ದಾರೆ ಎಂದು ಆರೋಪಿಸಿದ್ರು. ಇದಕ್ಕೆ ಅವರು ದಾಖಲೆಗಳನ್ನು ಕೂಡ ಪ್ರದರ್ಶಿಸಿದ್ರು.

ಹಗರಣದ ತನಿಖೆಗೆ ಆದೇಶ

ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ನಡೆದಿದ್ದ ಬಟ್ಟೆ ಬ್ಯಾಗ್ ಖರೀದಿ ಹಗರಣದ ತನಿಖೆಗೆ ಸರ್ಕಾರ ಆದೇಶಿಸಿದೆ. ನಗರಸಭೆ, ಪುರಸಭೆ ಮತ್ತು ಮಹಾನಗರಪಾಲಿಕೆಗಳ ಪೂರ್ವಾನುಮತಿಯಿಲ್ಲದೆ ದುಬಾರಿ ಬೆಲೆಗೆ ಬ್ಯಾಗ್​ಗಳನ್ನು ಖರೀದಿಸಲಾಗಿತ್ತು ಎಂದು ಮಹೇಶ್ ದೂರಿದ್ದರು. ಚಿಲ್ಲರೆ ಮಾರುಕಟ್ಟೆಯಲ್ಲಿ ₹ 9 ರಿಂದ 19 ರೂಪಾಯಿಗೆ ಸಿಗೋ  ಬ್ಯಾಗ್​ ಗಳನ್ನು ಜಿಲ್ಲಾಧಿಕಾರಿ 52 ರೂಪಾಯಿ  ನೀಡಿ ಖರೀದಿಸಿದ್ದರು. ಸಾರ್ವಜನಿಕ ಹಣವನ್ನು ವೃಥಾ ವ್ಯರ್ಥ ಮಾಡಲಾಗಿದೆ ಎಂದು ಶಾಸಕ ಸಾ.ರಾ.ಮಹೇಶ್ ಅರೋಪಿಸಿದ್ದರು.

ರೋಹಿಣಿ ಮೇಲೆ 6.18 ಕೋಟಿ ಕಿಕ್​ ಬ್ಯಾಕ್​ ಪಡೆದಿರೋ ಆರೋಪ

ರೋಹಿಣಿ ವಿರುದ್ಧ ಆರೋಪಗಳ ಸುರಿಮಳೆಗೈದ ಸಾ.ರಾ ಮಹೇಶ್​ ಬಟ್ಟೆ ಬ್ಯಾಗ್​ ಖರೀದಿ ಹಗರಣವನ್ನು ಬಯಲಿಗೆಳೆದ್ರು. ಒಟ್ಟು 14,71,458 ಬಟ್ಟೆ ಬ್ಯಾಗ್ ಖರೀದಿ ಮಾಡಲಾಗಿದೆ. ಇದಕ್ಕೆ ವಾಸ್ತವವಾಗಿ ತಗುಲುವುದು 1,47,15,000 ರೂಪಾಯಿ. ಆದರೆ 7 ಕೋಟಿಗೂ ಅಧಿಕ ರೂಪಾಯಿ ನೀಡಿ ಖರೀದಿ ಮಾಡಲಾಗಿದೆ. ಅಂದರೆ 6 ಕೋಟಿ 18 ಲಕ್ಷ ರೂ. ಭ್ರಷ್ಟಾಚಾರ ನಡೆದಿದೆ. ರೋಹಿಣಿ ಸಿಂಧೂರಿ 6.18 ಕೋಟಿ ರೂ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಸಾ.ರಾ ಮಹೇಶ್​ ಆರೋಪಿಸಿದ್ದಾರೆ.

ಇದನ್ನೂ ಓದಿ: Rohini Sindhuri: ತವರು ಮನೆ ತೊರೆದು ಹೋಗ್ತಿದ್ದೀನಿ: ಮೈಸೂರಿಗೆ ಭಾವುಕ ವಿದಾಯ ಹೇಳಿದ ರೋಹಿಣಿ ಸಿಂಧೂರಿ

ಮೈಸೂರಿನಲ್ಲಿ ಕಳೆದ ಸೆಪ್ಟೆಂಬರ್ 3ರಂದು ಮಾಧ್ಯಮಗೋಷ್ಠಿ ನಡೆಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪ ಮಾಡಿದ್ದ ಸಾ.ರಾ.ಮಹೇಶ್, ‘ಅಧಿಕಾರಿಗಳು ಲೂಟಿ ಹೊಡೆಯುತ್ತಿದ್ದರೂ ಮುಖ್ಯಕಾರ್ಯದರ್ಶಿ ಏನು ಮಾಡುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ. ರೋಹಿಣಿ ಸಿಂಧೂರಿ ಎರಡು ತಿಂಗಳು ಮೈಸೂರಿನಲ್ಲೇ ಮುಂದುವರಿದಿದ್ದರೆ ಹಣವೂ ಮಂಜೂರಾಗಿರುತ್ತಿತ್ತು’ ಎಂದು ಹೇಳಿದ್ದರು.

‘ರೋಹಿಣಿ ಸಿಂಧೂರಿ ಅವರನ್ನು ಸೇವೆಯಿಂದ ವಜಾ ಮಾಡಿ‘

ಸ್ಥಳೀಯ ಸಂಸ್ಥೆಗಳ ಅಧಿಕಾರವನ್ನು ಮೊಟಕುಗೊಳಿಸಿ, ಏಕಪಕ್ಷೀಯವಾಗಿ ಬ್ಯಾಗ್ ಖರೀದಿಗೆ ನಿರ್ಧರಿಸಿದ್ದು ನಿರಂಕುಶತೆಯ ಸಂಕೇತ. ವಿಷಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಗಮನಕ್ಕೂ ತರುವೆ. ರೋಹಿಣಿ ಸಿಂಧೂರಿಯವರನ್ನು ಸೇವೆಯಿಂದ ವಜಾ ಮಾಡದಿದ್ದರೆ ಮುಖ್ಯ ಕಾರ್ಯದರ್ಶಿ ಕಚೇರಿ ಮುಂದೆ ಆಮರಣಾಂತ ಧರಣಿ ನಡೆಸುವೆ ಎಂದು ಸಾ.ರಾ ಮಹೇಶ್ ಎಚ್ಚರಿಕೆ ನೀಡಿದ್ರು.

ಆರೋಪಗಳನ್ನು ತಳ್ಳಿ ಹಾಕಿದ್ದ ರೋಹಿಣಿ

ಈ ಆರೋಪಕ್ಕೆ ಸ್ಪಷ್ಟನೆ ನೀಡಿದ್ದ ರೋಹಿಣಿ ಸಿಂಧೂರಿ, ಶಾಸಕರ ಆರೋಪಗಳು ಆಧಾರರಹಿತ. ಬ್ಯಾಗ್ ಪೂರೈಕೆಯ ಗುತ್ತಿಗೆಯನ್ನು ನಿಯಮಾನುಸಾರ ಕೈಮಗ್ಗ ಅಭಿವೃದ್ಧಿ ನಿಗಮಕ್ಕೆ ನೀಡಲಾಗಿತ್ತು. ನಿಗಮವೇ ದರ ನಿಗದಿ ಮಾಡಿದ್ದು, ನನ್ನ ಪಾತ್ರ ಇಲ್ಲ. ಪ್ರಾದೇಶಿಕ ಜವಳಿ ಪ್ರಯೋಗಾಲಯ ಸಮಿತಿಯು ಬ್ಯಾಗ್​ಗಳ ಗುಣಮಟ್ಟ ದೃಢೀಕರಿಸಿತ್ತು. ನಾನು ಜಿಲ್ಲಾಧಿಕಾರಿಯಾಗಿದ್ದಾಗ ಒಂದು ಪೈಸೆಯನ್ನೂ ನಿಗಮಕ್ಕೆ ನೀಡಿಲ್ಲ. ಈಗ 9.59 ಲಕ್ಷ ರೂಪಾಯಿ ಮಾತ್ರ ನಿಗಮಕ್ಕೆ ಪಾವತಿಯಾಗಿದೆ ಎಂದು ಹೇಳಿದ್ದರು.

ಇದನ್ನೂ ಓದಿ: Rohini Sindhuri: ಯೂಟರ್ನ್​ ಹೊಡೆದ ಪ್ರತಾಪ್​ ಸಿಂಹ; ಫೇಸ್​ಬುಕ್​ ಲೈವ್​ನಲ್ಲಿ ರೋಹಿಣಿ ಸಿಂಧೂರಿ ವಿರುದ್ಧ ಆರೋಪ?

ತನಿಖೆಯಿಂದ ಹೊರಬರಬೇಕಿದೆ ಸತ್ಯ

ಮೈಸೂರು ರೋಹಿಣಿ ಸಿಂದೂರಿ ಡಿಸಿ ಆಗಿದ್ದಾಗ ಅವ್ಯವಹಾರ ನಡೆಸಿದ್ರಾ? ಇಲ್ಲ ಸಾ.ರಾ ಮಹೇಶ್​ ಆರೋಪಗಳು ಸುಳ್ಳ, ನಿಜನಾ ಅನ್ನೋದು ಸದ್ಯದಲ್ಲೇ ಗೊತ್ತಾಗಲಿದೆ. ಬಟ್ಟೆ ಬ್ಯಾಗ್ ಖರೀದಿ ಹಗರಣದ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದ್ದು, ತನಿಖೆಯಿಂದಷ್ಟೆ ಸತ್ಯ ಸತ್ಯತೆ ಹೊರಬರಬೇಕಿದೆ.
Published by:Pavana HS
First published: