ಸಿದ್ದರಾಮಯ್ಯ ವಿಪಕ್ಷ ನಾಯಕನಾಗಲು ಮೈತ್ರಿ ಸರ್ಕಾರನ ಉರುಳಿಸಿದರು: HD Kumaraswamy ಆರೋಪ

HD Kumaraswamy V/S Siddaramaiah: ಯಡಿಯೂರಪ್ಪ ಸರ್ಕಾರ ಬರಲು ನಿಮ್ಮ ಪಾತ್ರ ಎಷ್ಟಿದೆ ಅನ್ನೋದು ನನಗೆ ಗೊತ್ತಿದೆ. ಅಧಿಕಾರಕ್ಕಾಗಿ ನೀವು ಎಷ್ಟೆಷ್ಟು ಕುತಂತ್ರ ಮಾಡುತ್ತೀರಾ ಅನ್ನೋದು ನನಗೆ ಗೊತ್ತಿದೆ ಎಂದು ಎಚ್​ಡಿಕೆ ಅಬ್ಬರಿಸಿದರು.

ಎಚ್​.ಡಿ.ಕುಮಾರಸ್ವಾಮಿ

ಎಚ್​.ಡಿ.ಕುಮಾರಸ್ವಾಮಿ

  • Share this:
ಮೈಸೂರು: ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ(HD Kumaraswamy) ಪತ್ನಿ ಸಮೇತರಾಗಿ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಕೆಲ ದಿನಗಳಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah )ವಿರುದ್ಧ  ನಡೆಸುತ್ತಿರುವ ವಾಗ್ದಾಳಿಯನ್ನು ಮುಂದುವರೆಸಿದರು. ಪುಟ್ಕೋಸಿ ವಿರೋಧ ಪಕ್ಷದ ನಾಯಕ ಸ್ಥಾನಕ್ಕಾಗಿ ಮೈತ್ರಿ ಸರ್ಕಾರವನ್ನು ತೆಗೆದ ಮಹಾನ್ ನಾಯಕ ನೀನು. ನೀವು ನನ್ನ ಬಗ್ಗೆ ಮಾತನಾಡಬೇಡಿ ಎಂದು ಆಕ್ರೋಶಭರಿತವಾಗಿ ಮಾತನಾಡಿದರು. ಗೂಟದ ಕಾರಿಗಾಗಿ, ನಿಮ್ಮ ಪಕ್ಷದ 23 ಜನ ನಿಮ್ಮ ಪಕ್ಷದ ಸಚಿವರನ್ನು ಬೀದಿಗೆ ತಂದವರು ನೀವು. ಯಡಿಯೂರಪ್ಪ ಸರ್ಕಾರ ಬರಲು ನಿಮ್ಮ ಪಾತ್ರ ಎಷ್ಟಿದೆ ಅನ್ನೋದು ನನಗೆ ಗೊತ್ತಿದೆ. ಅಧಿಕಾರಕ್ಕಾಗಿ ನೀವು ಎಷ್ಟೆಷ್ಟು ಕುತಂತ್ರ ಮಾಡುತ್ತೀರಾ ಅನ್ನೋದು ನನಗೆ ಗೊತ್ತಿದೆ ಎಂದು ಎಚ್​ಡಿಕೆ ಅಬ್ಬರಿಸಿದರು.

ಸಿದ್ದರಾಮಯ್ಯಗೆ ಪಾಠ ಕಲಿಸುತ್ತೇವೆ

ಸಿಂಧಗಿ ಉಪಚುನಾವಣೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಲೆಕ್ಕಕ್ಕೆ ಇಲ್ಲ. ಅಲ್ಲಿ ಕಾಂಗ್ರೆಸ್ ಯಾವಾಗಲೂ ಮೂರನೇ ಸ್ಥಾನದಲ್ಲಿದೆ. ಅಲ್ಲೇನಿದ್ದರೂ ಬಿಜೆಪಿ ಹಾಗೂ ಜೆಡಿಎಸ್ ನಡುವೆ ಪೈಪೋಟಿ. ನಾವು ಯೋಚನೆ ಮಾಡಿ ಅಭ್ಯರ್ಥಿ ಹಾಕಿದ್ದೇವೆ. ಸಿದ್ದರಾಮಯ್ಯಗೆ ಪಾಠ ಕಲಿಸಲು ಈ ಅಭ್ಯರ್ಥಿ ಹಾಕಿದ್ದೇವೆ. ಸಿದ್ದರಾಮಯ್ಯ ಯಾವ ದೊಣ್ಣೆನಾಯಕ ಅಂತಾ ಅವರು ಹೇಳಿದ ಅಭ್ಯರ್ಥಿ ಹಾಕಬೇಕು.ಎರಡು ಕ್ಷೇತ್ರದಲ್ಲಿ ಜೆಡಿಎಸ್ ಗಂಭೀರವಾಗಿ ಸ್ಪರ್ಧೆ ಮಾಡಲಿದೆ ಎಂದು ತಿಳಿಸಿದರು.

ಬಿಎಸ್​ವೈ ಆಪ್ತನ ಮೇಲೆ ಐಟಿ ದಾಳಿಗೆ ಸಿದ್ದರಾಮಯ್ಯ ಕಾರಣ

ಸಿದ್ದರಾಮಯ್ಯ ವಿರುದ್ಧ ಆರೋಪಗಳ ಸುರಿಮಳೆಯನ್ನು ಮುಂದುವರೆಸಿದ ಅವರು, ಬಿ ಎಸ್ ಯಡಿಯೂರಪ್ಪ ಆಪ್ತರ ಮೇಲೆ ಐಟಿ ದಾಳಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಣ ಎನ್ನುವ ಮೂಲಕ ಹೊಸ ಬಾಂಬ್ ಸಿಡಿಸಿದರು. ಸಿದ್ದರಾಮಯ್ಯ, ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದೆ ಐಟಿ ರೇಡ್‌ಗೆ ಕಾರಣ.ಸಿದ್ದರಾಮಯ್ಯ ಪವರ್‌ಗಾಗಿ ಏನು ಬೇಕಾದರೂ ಮಾಡುತ್ತಾರೆ. ಯಡಿಯೂರಪ್ಪ ಭೇಟಿ ಸಹಾ ಅದರ ಭಾಗವಾಗಿದೆ, ಹೇಗಾದರೂ ಸರಿ ಸಿದ್ದರಾಮಯ್ಯ ಅಧಿಕಾರಬೇಕು.ಈ ಭೇಟಿ ಬಗ್ಗೆ ಕೇಂದ್ರಕ್ಕೂ ಮಾಹಿತಿ ಸಿಕ್ಕಿದೆ, ಅದಕ್ಕಾಗಿ ಯಡಿಯೂರಪ್ಪ ಅವರನ್ನು ಕಪಿಮುಷ್ಠಿಯಲ್ಲಿಟ್ಟುಕೊಳ್ಳು ಐಟಿ ದಾಳಿ ಮಾಡಿದ್ದಾರೆ ಎಂದು ಆರೋಪಿಸಿದರು. ಐಟಿ ದಾಳಿ ಹಿಂದೆ  ಸ್ಪಷ್ಟವಾಗಿ ರಾಜಕೀಯ ಉದ್ದೇಶ ಇದೆ, ಇದರ ಬಗ್ಗೆ ಅನುಮಾನ ಇಲ್ಲ ಎಂದರು.

ಮಂಡ್ಯದಲ್ಲಿ ಕೌರವರ ರೀತಿ ಚಕ್ರವ್ಯೂಹ ರಚಿಸಿ ಕುತಂತ್ರ ಮಾಡಿದ್ರು

ಸಿದ್ದರಾಮಯ್ಯಗೆ ನನ್ನ ಬಗ್ಗೆ‌ ಮಾತನಾಡದಿದ್ದರೆ ನಿದ್ದೆ ಬರುವುದಿಲ್ಲ. ಮಂಡ್ಯ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೋಲಿಸಿದರು ಅಂತಾ ನಾನು ಹೇಳಿಲ್ಲ. ಸಿದ್ದರಾಮಯ್ಯ ಸ್ವತಃ ಬೆನ್ನು ತಟ್ಟಿಕೊಳ್ಳುವುದು ಬೇಡ. ಕಾಂಗ್ರೆಸ್-ಬಿಜೆಪಿ,  ರೈತ ಸಂಘ ಒಂದಾಗಿ ನಿಖಿಲ್​ನ ಸೋಲಿಸಿದ್ದಾರೆ. ಕೌರವರ ರೀತಿ ಚಕ್ರವ್ಯೂಹ ರಚಿಸಿ ಕುತಂತ್ರ ಮಾಡಿದ್ದಾರೆ. ಇದರಲ್ಲಿ ಸಿದ್ದರಾಮಯ್ಯ ಪಾತ್ರ ಏನು ಇಲ್ಲ. ಚಾಮುಂಡೇಶ್ವರಿಯಲ್ಲಿ ಅವರೇ ಏಕೆ ಸೋಲುತ್ತಿದ್ದರು‌ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದರು.

ಇದನ್ನೂ ಓದಿ: ಮಂಡ್ಯದಲ್ಲಿ ನಿಖಿಲ್ ಸೋಲಿಗೆ ಸಿದ್ದರಾಮಯ್ಯ ಕಾರಣ ಎಂಬ HDK ಆರೋಪಕ್ಕೆ ತಿರುಗೇಟು ಕೊಟ್ಟ Siddaramaiah

ಇದು ಒಳ್ಳೆಯ ಬೆಳವಣಿಗೆ ಅಲ್ಲ

ಇನ್ನು ಬೆಂಗಳೂರು ಉಸ್ತುವಾರಿಗಾಗಿ ಆರ್‌.ಅಶೋಕ್ ಹಾಗೂ ಸೋಮಣ್ಣ ಕಿತ್ತಾಟ ವಿಚಾರವಾಗಿ ಪ್ರತಿಕ್ರಿಯಿಸಿದ ಎಚ್​ಡಿಕೆ, ಇದು ಒಳ್ಳೆಯ ಬೆಳವಣಿಗೆ ಅಲ್ಲ. ಯಾವ ಖಾತೆ ಕೊಟ್ಟರೂ ನಿಭಾಯಿಸಿಕೊಂಡು ಜನರ ಕಷ್ಟಕ್ಕೆ ಸ್ಪಂದಿಸಿ ಕೆಲಸ ಮಾಡಬೇಕು ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸಚಿವರಿಗೆ ಸಲಹೆ ನೀಡಿದರು.
Published by:Kavya V
First published: