ಮೈಸೂರು: ರಾಜ್ಯಕ್ಕೆ ಭೇಟಿ ನೀಡಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ಸಿಂಗ್(Arun Singh) ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumarswamy) ಮಧ್ಯೆ ವಾಕ್ಸಮ ಏರ್ಪಟ್ಟಿದೆ. ಜೆಡಿಎಸ್ ಮುಳುಗುತ್ತಿರುವ ಹಡಗು ಎಂದ ಅರುಣ್ ಸಿಂಗ್ ಹೇಳಿಕೆಗೆ ಎಚ್ಡಿಕೆ ಕೆಂಡಾಮಂಡಲರಾಗಿದ್ದಾರೆ. ಖಾರವಾಗಿಯೇ ತಿರುಗೇಟು ಕೊಟ್ಟ ಅವರು, ಕರ್ನಾಟಕ ಹಾಗೂ ಇಲ್ಲಿನ ಸ್ಥಳೀಯ ಪಕ್ಷದ ಬಗ್ಗೆ ಆತನಿಗೆ ಮಾಹಿತಿ ಇಲ್ಲ. ಪಾಪ ಅವನಿಗೆ ಏನ್ ಗೊತ್ತು? ಆತ ಬಂದಿರೋದು ದುಡ್ಡು ವಸೂಲಿ ಮಾಡೋದಿಕ್ಕೆ, ಕಲೆಕ್ಷನ್ ಮಾಡೋದಕ್ಕೆ ಬಂದಿರೋ ವ್ಯಕ್ತಿ ಜೆಡಿಎಸ್ ಬಗ್ಗೆ ಮಾತನಾಡಿದ್ದಾನೆ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದರು.
ನಾವು ಅವರ ಬಾಗಿಲಿಗೆ ಹೋಗಿದ್ವಾ?
ನಾವೇನು ಅವರ ಮನೆ ಬಾಗಿಲಿಗೆ ಹೋಗಿದ್ವಾ? ಮೈಸೂರು ಮೇಯರ್ ಆಯ್ಕೆ ಚುನಾವಣೆಯಲ್ಲಿ ಬೆಂಬಲ ಕೋರಿ ಶಾಸಕ ಸಾ.ರಾ.ಮಹೇಶ್ ಕಚೇರಿಗೆ ಬಿಜೆಪಿ ನಾಯಕರು ಏಕೆ ಬಂದಿದ್ರು? ನಾವೇನು ಬೆಂಬಲ ಕೋರಿ ಅವರ ಬಳಿಗೆ ಹೋಗಿಲ್ಲ. ಅರುಣ್ ಸಿಂಗ್ ರಾಜ್ಯದ ವಾಸ್ತವ ಪರಿಸ್ಥಿತಿ ಗೊತ್ತಿಲ್ಲ. ಇಲ್ಲಿ ಬಿಜೆಪಿ ಸರ್ಕಾರ ಇರೋದ್ರಿಂದ ವಸೂಲಿಗಾಗಿ ಆಗಾಗ್ಗೆ ಭೇಟಿ ನೀಡುತ್ತಾರೆ. ಜೆಡಿಎಸ್ ಬಗ್ಗೆ ಯಾರೂ ಕೂಡ ಹಗುರವಾಗಿ ಮಾತನಾಡಬಾರದು ಎಂದು ಕುಮಾರಸ್ವಾಮಿ ಅಬ್ಬರಿಸಿದರು.
ಕೈಗೆಟುಕದ ದ್ರಾಕ್ಷಿ ಹುಳಿ..!
ಶಾಸಕ ಜಿ.ಟಿ.ದೇವೆಗೌಡ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ಗೆ ಸೇರ್ಪಡೆಗೊಳ್ಳುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಜೆಡಿಎಸ್ ಬಾಗಿಲು ದೊಡ್ಡದಾಗಿ ತೆರೆದಿದೆ, ಬರುವವರು ಬರಬಹುದು, ಹೋಗೋರು ಹೋಗಬಹುದು ಎಂದರು. ಎರಡು ವರ್ಷದ ಹಿಂದೆನೇ ಜೆಡಿಎಸ್ ಪಕ್ಷದಿಂದ ದೂರ ಸರಿದಿದ್ದೇನೆ ಎಂದು ಅವರೇ ಹೇಳಿದ್ದಾರೆ. ಈಗ ಒಂದು ನೆಪ ಹೇಳಿ ಹೋಗೋಕೆ ಮುಂದಾಗಿದ್ದಾರೆ. ದ್ರಾಕ್ಷಿ ಕೈಗೆಟುಕದಿದ್ದಾಗ ನರಿ ಹೇಳುವ ಕಥೆಯಂತಾಗಿದೆ ಅವರ ಸಬೂಬು. ಈಗ ನನ್ನಿಂದ ಹೊರ ಹೋಗುವುದಾದರೆ 2008ರಲ್ಲಿ ಯಾವ ಕಾರಣಕ್ಕಾಗಿ ಬಿಜೆಪಿಗೆ ಹೋದರು ಎಂದು ಶಾಸಕ ಜಿಟಿಡಿಗೆ ಕುಮಾರಸ್ವಾಮಿ ಟಾಂಗ್ ಕೊಟ್ಟರು.
ಕರ್ನಾಟಕ ಸಂಸದರಿಗೆ ಮೂಳೆ, ಎಲುಬು ಎರಡೂ ಇಲ್ಲ
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ಆದೇಶ ಬಗ್ಗೆ ಮಾತನಾಡಿದ ಅವರು ಇದೇ ಕಾರಣಕ್ಕೆ ನಾವು ಮೇಕೆದಾಟು ಯೋಜನೆ ಆರಂಭಿಸಬೇಕು ಅನ್ನುತ್ತಿರೋದು. ಸಮುದ್ರಕ್ಕೆ ಹರಿದು ಹೋಗುವ ಹೆಚ್ಚುವರಿ ನೀರನ್ನ ಸಂಗ್ರಹಿಸಬಹುದು. ಇದನ್ನ ಕೇಂದ್ರ ಮತ್ತು ತಮಿಳುನಾಡು ಮಾಡಿಕೊಳ್ಳಬೇಕು. ಕೇಂದ್ರ ಸರ್ಕಾರ ಕೂಡಲೇ ಮಧ್ಯಸ್ಥಿಕೆ ವಹಿಸಿ ಪ್ರಾಧಿಕಾರದ ಮನವೊಲಿಸಬೇಕು. ಮೇಕೆದಾಟು ಸೇರಿದಂತೆ ಜ್ವಲಂತ ಸಮಸ್ಯೆಗಳ ಬಗ್ಗೆ ಹೋರಾಟಕ್ಕೆ ರೂಪುರೇಷೆ ತಯಾರಾಗಬೇಕು. ಎಲ್ಲಾ ರಾಜ್ಯಗಳನ್ನ ಸರಿ ಸಮಾನಾಗಿ ನೋಡಬೇಕು. ಕೇಂದ್ರ ಸರ್ಕಾರವನ್ನ ಒತ್ತಾಯಿಸಲು ಕರ್ನಾಟಕ ಸಂಸದರಿಗೆ ಮೂಳೆ, ಎಲುಬು ಎರಡೂ ಇಲ್ಲ. ಅರುಣ್ ಸಿಂಗ್ ಸೂಟ್ಕೇಸ್ ತಗೊಂಡೋದ್ರೆ ಸಾಲದು. ಇಂತಹ ಸಮಸ್ಯೆಯನ್ನ ಕೇಂದ್ರಕ್ಕೆ ಮನವರಿಕೆ ಮಾಡಿಕೊಡಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ರು.
ಇದನ್ನೂ ಓದಿ: ನೋ ವ್ಯಾಕ್ಸಿನೇಷನ್ ನೋ ರೇಷನ್; ವಿವಾದ ಭುಗಿಲೆದ್ದ ಬಳಿಕ ಹೇಳಿಕೆ ಹಿಂಪಡೆದ ಚಾಮರಾಜನಗರ ಡಿಸಿ
ನ್ಯೂಸ್18 ಕನ್ನಡ ಕಳಕಳಿ: ಸಾಂಕ್ರಾಮಿಕ ರೋಗ
ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ