ಶಂಖ ಊದುವದರಿಂದ ಏನೂ ಆಗಲ್ಲ: ಈಶ್ವರಪ್ಪ ಹೇಳಿಕೆಗೆ HD Kumaraswamy ತಿರುಗೇಟು

ಕೇವಲ ಶಂಖ ಊದುವುದರಿಂದ ಏನೂ ಆಗಲ್ಲ. ನೀವು ಶಂಖ ಊದಲು ಜನ ಇಟ್ಟುಕೊಂಡಿದ್ದೀರಿ. ನೀವು ಶಂಕ ಊದಿಕೊಳ್ರಪ್ಪ. ಆದರೆ ಈಗ ಶಂಖ ಊದುವ ಕಾಲ ಅಲ್ಲ, ಕೆಲಸ ಮಾಡಿ.

ಹೆಚ್.ಡಿ.ಕುಮಾರಸ್ವಾಮಿ

ಹೆಚ್.ಡಿ.ಕುಮಾರಸ್ವಾಮಿ

  • Share this:
ಮೈಸೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (Former CM HD Kumaraswamy) ಶಂಖ ಊದಲು ಹೋಗಿದ್ದಾರೆ ಹೇಳಿಕೆಗೆ ಬಿಜೆಪಿ ನಾಯಕರು (BJP Leaders) ಕಿಡಿಕಾರಿದ್ದರು. ಸಚಿವ ಕೆ.ಎಸ್.ಈಶ್ವರಪ್ಪ (Minister KS EShwaappa) ಪ್ರತಿಕ್ರಿಯಿಸಿ, ಜೆಡಿಎಸ್ (JDS) ಬಳಿ ಶಂಖ ಊದೋರು ಇಲ್ಲ ಎಂದು ಹೇಳಿದ್ದರು. ಇಂದು ಮೈಸೂರಿನಲ್ಲಿ ಕುಮಾರಸ್ವಾಮಿ ಅವರು ಈ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಾವು ಶಂಖ ಊದಲು ಜನ ಕರೆದುಕೊಂಡು ಬರಬೇಕಿಲ್ಲ. ಕೇವಲ ಶಂಖ ಊದುವುದರಿಂದ ಏನೂ ಆಗಲ್ಲ. ನೀವು ಶಂಖ ಊದಲು ಜನ ಇಟ್ಟುಕೊಂಡಿದ್ದೀರಿ. ನೀವು ಶಂಕ ಊದಿಕೊಳ್ರಪ್ಪ. ಆದರೆ ಈಗ ಶಂಖ ಊದುವ ಕಾಲ ಅಲ್ಲ, ಕೆಲಸ ಮಾಡಿ. ನಾವು ಅಧಿಕಾರದಲ್ಲಿ ಕೆಲವೇ ದಿನ ಅಧಿಕಾರದಲ್ಲಿ ಇದ್ದರೂ ಜನರ ಮನಸ್ಸಲ್ಲಿ ಉಳಿಯುವ ಕೆಲಸ ಮಾಡಿದ್ದೇವೆ ಎಂದು ಹೇಳಿದರು.

ನೀವು ನಿಮಗೆ ಅಭಿವೃದ್ಧಿ ಮಾಡಿಕೊಂಡಿದ್ದೀರಿ ಅಷ್ಟೇ. ನಿಮ್ಮ ಹಿಂದೆ ಝಂಡ ಹಿಡಿದು ಬರುವವರ ಅಭಿವೃದ್ಧಿ ಮಾಡಿದ್ದೀರಿ. ಆದರೆ ನಿಮ್ಮನ್ನ ಅಧಿಕಾರದಲ್ಲಿ ಕೂರಿಸಿದವರ ಅಭಿವೃದ್ಧಿ ಮಾಡಿದ್ದೀರ ಹೇಳಿ. ಬಕಾಸುರರ ರೀತಿ ನುಂಗೋದೇ ಅಭಿವೃದ್ಧಿಯೇ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ:  ತಮಾಷೆಗೆ ಹೇಳಿದ ಮಾತನ್ನು ನಾರಾಯಣ ಗೌಡರು ನಿಜ ಮಾಡಿದ್ರು: ಸಚಿವ ST Somashekhar

ನಾನು ಏನು ಅಭಿವೃದ್ಧಿ ಮಾಡಿದ್ದೀನಿ ಎಂಬುದಕ್ಕೆ ದಾಖಲೆ ಇಟ್ಟುಕೊಂಡಿದ್ದೇನೆ. ನೀವು ಏನು ಅಭಿವೃದ್ಧಿ ಮಾಡಿದ್ದೀರಿ ಜನರ ಮುಂದೆ ಹೇಳಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಪ್ರಶ್ನೆ ಮಾಡಿದ್ದಾರೆ.

ಜನರು ತಿರಸ್ಕಾರ ಮಾಡುವ ಮುನ್ನ ಎಚ್ಚೆತ್ತುಕೊಳ್ಳಿ

ಈ ಸರ್ಕಾರದಲ್ಲಿ ಕೇವಲ ಘೋಷಣೆ ಮಾತ್ರ ಇದೆ.  ಕೇವಲ ಹೋಗಿ ಪರಿಹಾರ ಘೋಷಣೆ ಮಾಡ್ತಾರೆ. ಸರ್ಕಾರಕ್ಕೆ ಆಕಾಶ ಮಾತ್ರ ಕಾಣುತ್ತಿದೆ, ಭೂಮಿ ಕಾಣ್ತಿಲ್ಲ. ಕೊಡಗಿನ ಜನರಿಗೆ ಈವರೆಗೂ ಸರಿಯಾಗಿ ಪರಿಹಾರ ಇಲ್ಲ. ಎಲ್ಲದಕ್ಕೂ ಕೂಡ ಒಂದು ಇತಿ ಮಿತಿ ಇದೆ. ಜನರು ರೊಚ್ಚಿಗೆದ್ದು ನಿಮ್ಮನ್ನ ತಿರಸ್ಕಾರ ಮಾಡುವ ಮುನ್ನ ಎಚ್ಚೆತ್ತುಕೊಳ್ಳಿ. ರೈತರಿಗೆ ಪರಿಹಾರ ಕೊಡುವುದರಲ್ಲಿ ನೀತಿ ಸಂಹಿತೆ ಅಡ್ಡ ಬರಲ್ಲ. ಇದನ್ನ ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಂಡರೆ ಆಯಿತು. ಅನುಮತಿ ಪಡೆದು ಪರಿಹಾರ ಕೊಡಬಹುದು ಎಂದು ಹೇಳಿದರು.

5 ರಿಂದ 6 ಲಕ್ಷ ಎಕ್ಟೆರ್ ನಷ್ಟು ಆಗಿದೆ.  ಗೈಡ್ ಲೈನ್ ವರದಿ ಇಟ್ಟುಕೊಂಡು ಪರಿಹಾರ ಕೊಡೋದು ಸರಿಯಲ್ಲ. ಮೊದಲು ಅದನ್ನ ಬದಿಗೊತ್ತಿ ನಷ್ಟವಾಗಿರುವ ಬಗ್ಗೆ ಪರಿಹಾರ ಕೊಡಿ. ರಾಜ್ಯದಲ್ಲಿ ರಸ್ತೆ, ಬ್ರಿಡ್ಜ್ ಹಾಳಾಗಿದೆ. 20ಕ್ಕೂ ಹೆಚ್ಚು ಜನರು ಸತ್ತಿದ್ದಾರೆ. ಸರ್ಕಾರದಲ್ಲಿರುವ ಮಂತ್ರಿಗಳು ಕಾಟಾಚಾರಕ್ಕೆ ಸರ್ವೆ ಮಾಡಬಾರದು. ಈಗಾಗಲೇ ಸಚಿವರು ಹೋಗಿ ಸರ್ವೆ ಮುಗಿಸಬೇಕಿತ್ತು. ಆದರೆ ಈವರೆಗೂ ಸರ್ಕಾರ ಆ ಕೆಲಸ ಮಾಡಿಲ್ಲ ಎಂದು ಆಕ್ರೋಶ ಹೊರ ಹಾಕಿದರು.

ಇದನ್ನೂ ಓದಿ:  ಮಳೆಯಿಂದ ಜನ ಸಂಕಷ್ಟದಲ್ಲಿದ್ದರೆ, BJPಯವರಿಗೆ ಪರಿಷತ್ ಚುನಾವಣೆಯದ್ದೇ ಚಿಂತೆ; HDK ಟೀಕೆ

ಚಾಮುಂಡೇಶ್ವರಿ ಕ್ಷೇತ್ರದ ಜೊತೆ ಅವಿನಾಭಾವ ಸಂಬಂಧ

2006ರಿಂದಲೂ ನಾನು ಚಾಮುಂಡೇಶ್ವರಿ ಕ್ಷೇತ್ರದ ಜೊತೆ ಅವಿನಾಭಾವ ಸಂಬಂಧ ಇದೆ. 2013ರಲ್ಲೇ‌ ನಾನು ಮಂಜೇಗೌಡರನ್ನ ಅಭ್ಯರ್ಥಿಯಾಗಿ ನಿಲ್ಲಿಸುತ್ತಿದ್ದೆ. ಕಾರಣಾಂತರದಿಂದ ಅಂದು ಅದು ಸಾಧ್ಯವಾಗಲಿಲ್ಲ. ಇದೀಗಾ ನಮ್ಮ ಪಕ್ಷಕ್ಕೆ ಬರಲು ಅರ್ಜಿ ಹಾಕಿದ್ದಾರೆ. ಇಂದು ಸಂಜೆ ನಡೆಯುವ ಪಕ್ಷದ ಮುಖಂಡರ ಸಭೆಯಲ್ಲಿ ಇದನ್ನ ತೀರ್ಮಾನ ಮಾಡುತ್ತೇವೆ. ಕಾರ್ಯಕರ್ತರು, ಮುಖಂಡರು ನೀಡುವ ಸಲಹೆ ಮೇರೆಗೆ ಅಭ್ಯರ್ಥಿ ಆಯ್ಕೆ ಆಗಲಿದೆ ಎಂದರು

ಸೋಲಿಗೆ ಕಾರ್ಯಕರ್ತರನ್ನು ದೂರುವುದು ಸರಿಯಲ್ಲ

ತಮ್ಮನ್ನು ಚುನಾವಣೆಯಲ್ಲಿ ಸೋಲಿಸಿದ ಜಿ ಟಿ ದೇವೇಗೌಡರ ಜೊತೆ ಸಿದ್ದರಾಮಯ್ಯ ವೇದಿಕೆ ಹಂಚಿಕೊಳ್ಳುತ್ತಾರೆ. ವೇದಿಕೆ ಮೇಲೆ ಅವರನ್ನು ಅಪ್ಪಿಕೊಳ್ಳುತ್ತಾರೆ. ಆದರೆ ಕಾಂಗ್ರೆಸ್ ಕಾರ್ಯಕರ್ತರಿಗೆ ರೇಗುತ್ತಾರೆ. ಇದು ನನಗೆ ಸೋಜಿಗವೆನಿಸಿತು. ನಾನು ಹೆಚ್ ಡಿ ದೇವೇಗೌಡರಾದಿಯಾಗಿ ಹಲವು ಬಾರಿ ಚುನಾವಣೆಯಲ್ಲಿ ಸೋತಿದ್ದೇವೆ. ನಾವೆಂದೂ ಕೂಡ ಪಕ್ಷದ ಕಾರ್ಯಕರ್ತರನ್ನು ಸೋಲಿಗೆ ಹೊಣೆ ಮಾಡಿಲ್ಲ. ಕಾರ್ಯಕರ್ತರಿಗೆ ರೇಗಾಡಿಲ್ಲ. ನಮ್ಮ ಕೆಲವು ತಪ್ಪುಗಳಿಂದ ಸೋಲುಂಟಾಗುತ್ತದೆ. ಅದಕ್ಕೆ ಕಾರ್ಯಕರ್ತರನ್ನು ದೂರುವುದು ಸರಿಯಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಸಂದೇಶ ನಾಗರಾಜ್‌ಗೆ ಜೆಡಿಎಸ್ ಬಾಗಿಲು ಕ್ಲೋಸ್ ಆಗಿದೆ.  ಅವರು ಪಕ್ಷ ಬಿಟ್ಟು ಈಗಾಗಲೇ ಮೂರು ವರ್ಷ ಕಳೆದಿದೆ. ನನ್ನನ್ನು ಅವರು ಸಂಪರ್ಕ ಮಾಡಿಲ್ಲ, ನಾನು ಮಾಡಲ್ಲ. ಇಂದು ಸಂಜೆ ಜೆಡಿಎಸ್ ಸಭೆ ಇದೆ ಅಲ್ಲಿ ಅಭ್ಯರ್ಥಿ ತೀರ್ಮಾನ ಆಗುತ್ತೆ. ಸಂದೇಶ ನಾಗರಾಜ್ ಬೇರೆ ಯಾರ ಜೊತೆ ಸಂಪರ್ಕ ಇದ್ದಾರೆ ಗೊತ್ತಿಲ್ಲ. ಅವರು ಯಾರನ್ನೆ ಸಂಪರ್ಕ ಮಾಡಿದರೂ ಅದು ನನಗೆ ಗೊತ್ತಿಲ್ಲ ಎಂದರು.
Published by:Mahmadrafik K
First published: