Hamsalekha ಅವರೇ Muslim ಸ್ನೇಹಿತರನ್ನ ಕರೆಸಿ ಹಂದಿಮಾಂಸದ ಊಟ ಹಾಕಿ, ಅವರು ತಿನ್ನುತ್ತಾರಾ ನೋಡಿ: ಪ್ರತಾಪ್ ಸಿಂಹ

ನಿಮ್ಮ ಮನೆಗೆ ಮುಸ್ಲಿಂ ಸ್ನೇಹಿತರ (Muslim) ಕರೆಯಿರಿ. ಅವರಿಗೆ ಹಂದಿ ಮಾಂಸದ ಊಟ ಹಾಕಿ. ಅವರು ತಿನ್ನುತ್ತಾರಾ ನೋಡಿ . ಮುಸ್ಲಿಂ ಧರ್ಮದಲ್ಲಿ ಹಂದಿ ಮಾಂಸ (Pork Meat) ತಿನ್ನುವುದು ನಿಷೇಧ. ಅದಕ್ಕೆ ಅವರು ತಿನ್ನುವುದಿಲ್ಲ. ಆಗ ಅದನ್ನು ತಪ್ಪು ಎನ್ನುತ್ತೀರಾ ಎಂದು ಸಂಸದ ಪ್ರತಾಪ್ ಸಿಂಹ (MP Pratap Simha) ಪ್ರಶ್ನೆ ಮಾಡಿದರು.

ಹಂಸಲೇಖ ಮತ್ತು ಪ್ರತಾಪ್ ಸಿಂಹ

ಹಂಸಲೇಖ ಮತ್ತು ಪ್ರತಾಪ್ ಸಿಂಹ

  • Share this:
ಮೈಸೂರು: ಜನಾಭಿಪ್ರಾಯ ದ ವಿರುದ್ದ ಮಾತಾನಾಡಿ ನಂತರ ಕ್ಷಮೆಯಾಚಿಸುವ ಛಾಳಿ ಹೆಚ್ಚಾಗಿದೆ. ಹಂಸಲೇಖ (Music Director Hamsalekha) ಅವರು ಪರಿಜ್ಞಾನದಿಂದ ಪೇಜಾವರರ ಶ್ರೀಗಳ (Pejawara Sri) ಬಗ್ಗೆ ಮಾತಾಡಬೇಕಿತ್ತು. ಪೇಜಾವರ ಶ್ರೀಗಳು ಬೇರೆ ರೀತಿಯ ಜಾತಿ ಸ್ವಾಮೀಜಿ ರೀತಿ ಅಲ್ಲ. ಕರ್ಮಠ ವ್ಯವಸ್ಥೆ ಯನ್ನು ಮೀರಿ ಸಮಾನತೆ ಸಾರಿದವರು ಪೇಜಾವರ ಶ್ರೀ. ಸಾಧು ಸಂತರ ಆಹಾರ ಪದ್ಧತಿ (Food Style) ಸಸ್ಯಹಾರ. ಮನಸ್ಸಿನ ತಾರತಮ್ಯ ತೆಗೆದು ಹಾಕಲು ಶ್ರೀಗಳು ಹೋಗಿದ್ದರೆ ಹೊರತು ಆಹಾರ ಪದ್ಧತಿಯ ಸಮಾನತೆಗೆ ಅಲ್ಲ. ನಿಮ್ಮ ಮನೆಗೆ ಮುಸ್ಲಿಂ ಸ್ನೇಹಿತರ (Muslim) ಕರೆಯಿರಿ. ಅವರಿಗೆ ಹಂದಿ ಮಾಂಸದ ಊಟ ಹಾಕಿ. ಅವರು ತಿನ್ನುತ್ತಾರಾ ನೋಡಿ . ಮುಸ್ಲಿಂ ಧರ್ಮದಲ್ಲಿ ಹಂದಿ ಮಾಂಸ (Pork Meat) ತಿನ್ನುವುದು ನಿಷೇಧ. ಅದಕ್ಕೆ ಅವರು ತಿನ್ನುವುದಿಲ್ಲ. ಆಗ ಅದನ್ನು ತಪ್ಪು ಎನ್ನುತ್ತೀರಾ ಎಂದು ಸಂಸದ ಪ್ರತಾಪ್ ಸಿಂಹ (MP Pratap Simha) ಪ್ರಶ್ನೆ ಮಾಡಿದರು.

ಪ್ರಗತಿಪರ ಅನ್ನಿಸಿ ಕೊಳ್ಳುವ ಗೀಳಿಗೆ ಬಿದ್ದು, ಪ್ರಚಾರಕ್ಕಾಗಿ ಹೀಗೆ ಮಾತಾಡುತ್ತಿದ್ದಾರೆ. ಹಂಸಲೇಖಾ ಅವರು ಬಾಯಿ ತಪ್ಪಿನಿಂದ ಈ ರೀತಿ ಹೇಳಿದ್ದಾರೆ ಎಂದು ಅನ್ನಿಸುವುದಿಲ್ಲ. ಪ್ರಚಾರದ ಗೀಳಿಗೆ ಬಿದ್ದಾಗ ಅಸಂಬದ್ಧ ಮಾತು ಬರುತ್ತದೆ ಎಂದು ಪ್ರತಾಪ್ ಸಿಂಹ ಎಂದು ಹೇಳಿದರು.

ಸಿದ್ದರಾಮಯ್ಯಗೆ ED ನೋಟಿಸ್ ನೀಡಲಿ

ಇದೇ ವೇಳೆ ರಾಜ್ಯದಲ್ಲಿ ಬಿಟ್ ಕಾಯಿನ್ (Bitcoin Scam) ಆರೋಪಕ್ಕೆ ಪ್ರತಿಕ್ರಿಯಿಸಿದ ಸಂಸದರು, ಜಾರಿ ನಿರ್ದೇಶನಾಲಯ ಮಾಜಿ ಸಿಎಂ ಸಿದ್ದರಾಮಯ್ಯಗೆ (Former CM Siddaramaiah) ನೋಟಿಸ್ ನೀಡಲಿ. ಬಿಟ್ ಕಾಯಿನ್ ಬಗ್ಗೆ ಮೊದಲು ಟ್ವೀಟ್ ಮಾಡಿದವರು ಸಿದ್ದರಾಮಯ್ಯ. ನಂತರ ಪ್ರಿಯಾಂಕಾ ಖರ್ಗೆ (Priyanka Kharge) , ರಣದೀಪ್ ಸುರ್ಜೆವಾಲಾ (Randeep Surjewala) ಸೇರಿ ಹಲವರು ಮಾತಾನಾಡಿದ್ದಾರೆ. ಇವರ ಬಳಿ ಬಿಟ್ ಕಾಯಿನ್ (Bitcoin) ಬಗ್ಗೆ ಸಂಪೂರ್ಣ ಮಾಹಿತಿ ಇದೆ ಎಂದರು.

ಇದನ್ನೂ ಓದಿ:  ಶ್ರೀ ಕೃಷ್ಣನ ಅಗ್ರಪೂಜೆಗೆ ಶಿಶುಪಾಲನೂ ಹೀಗೆ ವಿರೋಧಿಸಿದ್ದ: Hamsalekha ಹೇಳಿಕೆಗೆ ಪೇಜಾವರ ಶ್ರೀಗಳ ಪ್ರತಿಕ್ರಿಯೆ

ಮಾಹಿತಿಗಳಿಂದ ತನಿಖೆ ಮುಂದುವರಿಯಲಿ

ಸಾಮಾನ್ಯ ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸುವಂತೆ ನಡೆಸಲಿ. ಎಲ್ಲರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಲಿ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಹಾ ಜನಧನ್ ಹಣ ಕದ್ದ ಬಗ್ಗೆ ಮಾತನಾಡಿದ್ದಾರೆ. ಅವರಿಗೂ ಇಡಿ ನೋಟಿಸ್ ನೀಡಲಿ. ಈ ಎಲ್ಲಾ ನಾಯಕರು ತನಿಖೆಗೆ ಸಹಕರಿಸಲಿ. ಈ ನಾಯಕರ ಬಳಿ ಇರುವ ಸಾಕ್ಷಿ, ಮಾಹಿತಿಗಳಿಂದ ತನಿಖೆ ಮುಂದುವರಿಯಲಿ ಎಂದು ಆಗ್ರಹಿಸಿದರು.

ಸಂಗೀತ ನಿರ್ದೇಶಕ ಹಂಸಲೇಖ ಹೇಳಿದ್ದೇನು?

ಮೈಸೂರಿನಲ್ಲಿ ನಡೆದ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಹೋಗಿದ್ದರು. ಈ ವೇಳೆ  'ಪೇಜಾವರ ಸ್ವಾಮಿಗಳು ದಲಿತರ ಮನೆಗೆ ವಾಸ್ತವ್ಯಕ್ಕೆ ಹೋಗಿದ್ದಾರೆ ಅಂತ ಸ್ಟೇಟ್‌ಮೆಂಟ್ ಬಂದಿದೆ. ಪೇಜಾವರ ಸ್ವಾಮಿಗಳು ದಲಿತರ ಮನೆಗೆ ಹೋಗಿ ಅಲ್ಲಿ ಕುಳಿತು ಕೊಳ್ಳಬಹುದಷ್ಟೇ, ಅವರು ಕೋಳಿ ಕೊಟ್ಟರೆ ತಿನ್ನೋಕೆ ಆಗುತ್ತದೆಯೇ..? ಕೋಳಿ ಬೇಡ, ಕುರಿ ರಕ್ತದ ಫ್ರೈ ಮಾಡಿಕೊಟ್ಟರೆ ತಿಂತಾರಾ..? ಲಿವರ್ ಫ್ರೈ ತಿಂತಾರಾ, ಆಗತ್ತಾ..? ಅಂದರೆ, ದಲಿತರ ಮನೆಗೆ  ಹೋಗೋದು ಏನ್ ದೊಡ್ಡ ವಿಷ್ಯಾ ಅಂತ ನಂಗ್ ಅನ್ನಿಸ್ತು ಅಂತ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: Hamsalekha : ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿ ಹೇಳಿಕೆ: ಕೊನೆಗೂ ಕ್ಷಮೆಯಾಚಿಸಿದ `ನಾದ ಬ್ರಹ್ಮ’!

ಇಷ್ಟೇ ಅಲ್ಲದೆ ದಲಿತರನ್ನು ಬಲಿತರು ತಮ್ಮ ಮನೆಗಳಿಗೆ ಕರೆದುಕೊಂಡು ಹೋಗಬೇಕು. ಅವರ ಮನೆಯಲ್ಲಿ ಊಟ ಹಾಕಬೇಕು, ದಲಿತರ ಮುಟ್ಟಿದ ಲೋಟಗಳನ್ನು ನಾವು ತೊಳೆಯುತ್ತೀವಿ ಎಂದು ಬಲಿತರು ಹೇಳಬೇಕು' ಎಂದು ಹಂಸಲೇಖ ಹೇಳಿದ್ದರು.

ಪ್ರತಿಭಟನೆ ನಡೆಸಲ್ಲ ಅಂದ್ರು ಪೇಜಾವರ ಶ್ರೀಗಳು

ದಲಿತರ ಜೊತೆ ನಾವು ಇದ್ದೇವೆ, ದಲಿತರು ನಮ್ಮಿಂದ ಹೊರತಲ್ಲ. ಈ ಐಕ್ಯ ಸಂದೇಶ ನೀಡುವ ಸಲುವಾಗಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತೇವೆ. ಗುರುಗಳ ಅಭಿಮಾನದಿಂದ ಯಾರಾದರೂ ಪ್ರತಿಭಟಿಸಿದರೆ ಅದು ಅವರವರ ವೈಯಕ್ತಿಕ ವಿಚಾರ. ನಾವಂತೂ ಯಾವುದೇ ಪ್ರತಿಭಟನೆ ನಡೆಸುವುದಿಲ್ಲ ಎಂದು ಪೇಜಾವರ ಶ್ರೀಗಳು ಸ್ಪಷ್ಟನೆ ನೀಡಿದರು.
Published by:Mahmadrafik K
First published: