• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Pratap Simha: ಮೈಮರೆತರೆ ತಾಲಿಬಾನ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ: ಬಿಜೆಪಿ ಕಾರ್ಯಕರ್ತರಿಗೆ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ!

Pratap Simha: ಮೈಮರೆತರೆ ತಾಲಿಬಾನ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ: ಬಿಜೆಪಿ ಕಾರ್ಯಕರ್ತರಿಗೆ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ!

ಸಂಸದ ಪ್ರತಾಪ್ ಸಿಂಹ

ಸಂಸದ ಪ್ರತಾಪ್ ಸಿಂಹ

ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯ ಹವಣಿಸುತ್ತಿದ್ದಾರೆ. ಒಂದು ವೇಳೆ ನಮ್ಮ ಕಾರ್ಯಕರ್ಯರು ಈ ವೇಳೆ ಮೈ ಮರೆತರೆ, ರಾಜ್ಯದಲ್ಲಿ ಮತ್ತೆ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ. ಇದಕ್ಕೆ ನಮ್ಮ ಕಾರ್ಯಕರ್ತರು ಅವಕಾಶ ನೀಡಬಾರದು.

  • Share this:

ಮೈಸೂರು: ವಿಧಾನಸಭಾ ಚುನಾವಣೆ (Karnataka Election) ಹತ್ತಿರವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಯಾವುದೋ ಸಣ್ಣ ಕಾರಣಕ್ಕೆ ಬಿಜೆಪಿ ಕಾರ್ಯಕರ್ತರು (BJP Activist) ಮೈಮರೆತರೆ ಅಥವಾ ಯಾವುದೋ ಅಸಮಾಧಾನದಿಂದ ಉದಾಸೀನ ವಹಿಸಿದರೆ ರಾಜ್ಯದಲ್ಲಿ ತಾಲಿಬಾನ್ ಸರ್ಕಾರ (Taliban Government) ಅಧಿಕಾರಕ್ಕೆ ಬರುತ್ತದೆ ಎಂದು ಬಿಜೆಪಿ ಕಾರ್ಯಕರ್ತರಿಗೆ ಮೈಸೂರು ಸಂಸದ ಪ್ರತಾಪ್ ಸಿಂಹ್ (Pratap Simha) ಎಚ್ಚರಿಕೆ ಕೊಟ್ಟಿದ್ದಾರೆ. ಮೈಸೂರಿನಲ್ಲಿ ನಡೆದ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರ ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ ಮಾತನಾಡಿದ್ದು, ಬಿಜೆಪಿ ಕಾರ್ಯಕರ್ತರು ಮೈ ಮರೆತರೆ ಸಿದ್ದರಾಮಯ್ಯ (Siddaramaiah) ನೇತೃತ್ವದ ತಾಲಿಬಾನ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ. ಆದ್ದರಿಂದ ಮತ್ತೊಮ್ಮೆ ಬಿಜೆಪಿ ನೇತೃತ್ವದ ರಾಷ್ಟ್ರೀಯವಾದಿ ಸರ್ಕಾರವನ್ನು (Nationalist Government) ತರಲು ಪ್ರಯತ್ನ ಮಾಡಿ ಎಂದು ಕರೆ ನೀಡಿದ್ದಾರೆ.


ಪಿಎಫ್ಐ, ಕೆಎಫ್​​ಡಿಯ 175 ಸದಸ್ಯರ ಮೇಲಿದ್ದ ಪ್ರಕರಣವನ್ನು ಸಿದ್ದು ವಾಪಸ್ ಪಡೆದ್ರು


ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರತಾಪ್ ಸಿಂಹ ಅವರು, ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಮದುವೆ, ಮುಂಜಿ, ಬೀಗರ ಊಟ ಹೀಗೆ ಅನೇಕ ಕಾರ್ಯಕ್ರಮಕ್ಕೆ ಮೈಸೂರಿಗೆ ಬರುತ್ತಿದ್ದರು.




ಆದರೆ ದುಷ್ಕರ್ಮಿಗಳಿಂದ ಹತ್ಯೆಯಾದ ಕ್ಯಾತಮಾರನಹಳ್ಳಿಯ ರಾಜುವಿನ ಮನೆಗೆ ಸೌಜನ್ಯಕ್ಕೂ ಭೇಟಿ ನೀಡಲಿಲ್ಲ. ಅಲ್ಲದೆ ಪಿಎಫ್ಐ, ಕೆಎಫ್​​ಡಿಯ 175 ಸದಸ್ಯರ ಮೇಲಿದ್ದ ಪ್ರಕರಣವನ್ನು ಸಿದ್ದರಾಮಯ್ಯ ವಾಪಸ್ ಪಡೆದರು. ಪರಿಣಾಮ ಎರಡು ಡಜನ್ ಹಿಂದೂ ಕಾರ್ಯಕರ್ತರ ಹತ್ಯೆ ನಡೆಯಲು ಕಾರಣವಾಯಿತು ಎಂದು ಆರೋಪಿಸಿದರು.


ಇದನ್ನೂ ಓದಿ: Rohini Sindhuri: ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿಗೆ ಬಿಗ್​ ರಿಲೀಫ್; ಡಿ ರೂಪಾ ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್​ ಜಾರಿ


ಈಗ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯ ಹವಣಿಸುತ್ತಿದ್ದಾರೆ. ಒಂದು ವೇಳೆ ನಮ್ಮ ಕಾರ್ಯಕರ್ಯರು ಈ ವೇಳೆ ಮೈ ಮರೆತರೆ, ರಾಜ್ಯದಲ್ಲಿ ಮತ್ತೆ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ. ಇದಕ್ಕೆ ನಮ್ಮ ಕಾರ್ಯಕರ್ತರು ಅವಕಾಶ ನೀಡಬಾರದು. ಕಳೆದ ಚುನಾವಣೆಯಲ್ಲಿ ಮೈಸೂರು ಭಾಗದಲ್ಲಿ 5 ಸ್ಥಾನ ಗೆದ್ದಿದ್ದೇವೆ. ಈಗ 29 ಸ್ಥಾನಗಳಲ್ಲಿ ಕನಿಷ್ಠ 15 ಸ್ಥಾನಗಳನ್ನು ಗೆಲ್ಲಲೇಬೇಕು ಎಂದು ಕರೆ ನೀಡಿದರು.


ಮೈಸೂರು-ಬೆಂಗಳೂರು ನಡುವಿನ ದಶಪಥ ರಸ್ತೆ ಉದ್ಘಾಟನೆ


ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ರಾಜ್ಯದ ನಾಲ್ಕು ಭಾಗಗಳಿಗೆ ಭೇಟಿ ನೀಡಿ ಕಾರ್ಯಕರ್ತರ ಉತ್ಸಾಹ ಹೆಚ್ಚಿಸಿದ್ದಾರೆ. ಮುಂದಿನ ದಿನಗಳಲ್ಲಿ ಮೈಸೂರು ಭಾಗಕ್ಕೂ ಬರುತ್ತಿದ್ದಾರೆ. ಮುಖ್ಯವಾಗಿ ನಾನಾ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಬರುತ್ತಿದ್ದಾರೆ.


ಮೈಸೂರು-ಬೆಂಗಳೂರು ನಡುವಿನ ದಶಪಥ ರಸ್ತೆ ಉದ್ಘಾಟನೆ, ಮೈಸೂರು-ಕುಶಾಲನಗರ ಚತುಷ್ಪಥ ರಸ್ತೆಗೆ ಶಿಲಾನ್ಯಾಸ ಮಾಡಲಿದ್ದಾರೆ. ವಸ್ತು ಪ್ರದರ್ಶನಕ್ಕೆ 200 ಕೋಟಿ ರೂಪಾಯಿ, ಚಾಮುಂಡಿ ಬೆಟ್ಟದ ಅಭಿವೃದ್ಧಿ ಗೆ 100 ಕೋಟಿ ರೂಪಾಯಿ ನೀಡಿದ್ದಾರೆ ಎಂದು ತಿಳಿಸಿದರು.



ಇದನ್ನೂ ಓದಿ: CT Ravi: ಮಾಂಸ ತಿಂದಿದ್ದು ನನಗೆ ನೆನಪು ಇರಲಿಲ್ಲ; ವಿವಾದ ಭುಗಿಲೆದ್ದ ಬೆನ್ನಲ್ಲೇ ಸಿ ಟಿ ರವಿ ಸ್ಪಷ್ಟನೆ


ಅಮೃತ ಯೋಜನೆಯಡಿ ಪ್ರತಿ ಮನೆಗೂ ಕುಡಿಯುವ ನೀರು ನೀಡಬೇಕು ಎಂಬ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೇವೆ. ಹಾಗಾಗಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು.


ಮೈಸೂರು-ಬೆಂಗಳೂರು ನಡುವಿನ ರಸ್ತೆಯ ಮಹತ್ವದ ಬಗ್ಗೆ ಮಾತನಾಡದರೆ ಸಣ್ಣಪುಟ್ಟ ವಿಚಾರಗಳನ್ನು ಮುಂದಿಟ್ಟುಕೊಂಡು ದೊಡ್ಡದು ಮಾಡಬಾರದು. ಈಗ ಆಗಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಜನರಿಗೆ ತಿಳಿಸಬೇಕು. ಅದನ್ನು ಬಿಟ್ಟು ಚುನಾವಣೆ ಸಮಯದಲ್ಲಿ ಸಣ್ಣ ಪುಟ್ಟ ಅಸಮಾಧಾನಗಳಿಗೆ ತಲೆ ಕೆಡಿಸಿಕೊಳ್ಳಬಾರದು ಎಂದಿದ್ದಾರೆ.

Published by:Sumanth SN
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು