ಶಿಷ್ಯನಿಗಾಗಿ ನೀವು ಡಿಸಿ ಶಿಖಾರನ್ನು ಎತ್ತಂಗಡಿ ಮಾಡಿರಲಿಲ್ವ?; ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ತಿರುಗೇಟು

ನೀವು ಮುಖ್ಯಮಂತ್ರಿಯಾಗಿದ್ದಾಗ ಡಿಸಿ ಶಿಖಾರನ್ನು ಅವಾಚ್ಯ ಪದಗಳಿಂದ ಸಾರ್ವಜನಿಕವಾಗಿ ನಿಂದಿಸಿದಾಗ ಶಿಷ್ಯ ಮರಿಗೌಡನಿಗೆ ಬುದ್ಧಿ ಹೇಳುವುದು ಬಿಟ್ಟು ಶಿಖಾರನ್ನೇ ಎತ್ತಂಗಡಿ ಮಾಡಿದ್ದು ಮರೆತುಹೋಯಿತೇ? ಎಂದು ಸಿದ್ದರಾಮಯ್ಯನವರಿಗೆ ಸಂಸದ ಪ್ರತಾಪ್‌ ಸಿಂಹ ಪ್ರಶ್ನೆ ಹಾಕಿದ್ದಾರೆ.

ಸಂಸದ ಪ್ರತಾಪ್​​ ಸಿಂಹ.

ಸಂಸದ ಪ್ರತಾಪ್​​ ಸಿಂಹ.

 • Share this:
  ಮೈಸೂರು (ಜೂನ್ 9): ಭೂ ಹಗರಣದ ತನಿಖೆಗೆ ಮುಂದಾಗಿದ್ದೇ ನನ್ನ ವರ್ಗಾವಣೆಗೆ ಕಾರಣ ಎಂದು ರೋಹಿಣಿ ಸಿಂಧೂರಿ ಹೇಳಿದ್ದಾರೆ. ರೋಹಿಣಿ ಸಿಂಧೂರಿಯನ್ನು ಸಮರ್ಥನೆ ಮಾಡಿಕೊಂಡಿದ್ದ ಸಂಸದ ಪ್ರತಾಪ್ ಸಿಂಹ ಈಗ ಶಿಲ್ಪಾ ನಾಗ್ ಪರವಾಗಿ ನಿಂತಿದ್ದಾರೆ. ಇಬ್ಬರೂ ಅಧಿಕಾರಿಗಳನ್ನು ಎತ್ತಿ ಕಟ್ಟಿ ಜಗಳ ತಂದಿಟ್ಟಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಶಿಖಾ ವರ್ಗಾವಣೆ ವಿಚಾರವನ್ನು ಪ್ರಸ್ತಾಪಿಸಿ ತೆಲುಗು ಮಿಶ್ರಿತ ಕನ್ನಡದಲ್ಲಿ ತಿರುಗೇಟು ನೀಡಿದ್ದಾರೆ.

  ಸಿದ್ದರಾಮಯ್ಯ ಗಾರು, ಈ ವರದಿಗಳನ್ನು ವಸಿ ಓದುವಿರಾ?! ಅಂದಹಾಗೆ, ನೀವು ಮುಖ್ಯಮಂತ್ರಿಯಾಗಿದ್ದಾಗ ನಿಮ್ಮ ಶಿಷ್ಯ ಮರಿಗೌಡ ಡಿಸಿ ಶಿಖಾರನ್ನು ಅವಾಚ್ಯ ಪದಗಳಿಂದ ಸಾರ್ವಜನಿಕವಾಗಿ ನಿಂದಿಸಿದಾಗ ಶಿಷ್ಯನಿಗೆ ಬುದ್ಧಿ ಹೇಳುವುದು ಬಿಟ್ಟು ಶಿಖಾರನ್ನೇ ನೀವು ಎತ್ತಂಗಡಿ ಮಾಡಿದ್ದು ಮರೆತುಹೋಯಿತೇ? ಎಂದು ಸಿದ್ದರಾಮಯ್ಯನವರಿಗೆ ಸಂಸದ ಪ್ರತಾಪ್‌ ಸಿಂಹ ಪ್ರಶ್ನೆ ಹಾಕಿದ್ದಾರೆ.  ನಿನ್ನೆ ರಾಜ್ಯ ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, ಮೈಸೂರು ಜಿಲ್ಲೆಯ ಐ.ಎ.ಎಸ್ ಅಧಿಕಾರಿಗಳ ನಡುವಿನ ಕಿತ್ತಾಟಕ್ಕೆ ಬಿಜೆಪಿಯ ಚುನಾಯಿತ ಪ್ರತಿನಿಧಿಗಳು ಹಾಗೂ ಜೆ.ಡಿ.ಎಸ್​ನ ಸಾ.ರಾ ಮಹೇಶ್ ಕಾರಣ. ಸಂಸದ ಪ್ರತಾಪ್ ಸಿಂಹ ಮೊದಲು ರೋಹಿಣಿ ಸಿಂಧೂರಿ ಅವರನ್ನು ಬೆಂಬಲಿಸಿದ್ದರು. ಈಗ ಶಿಲ್ಪಾ ನಾಗ್ ಪರವಾಗಿ ನಿಂತಿದ್ದಾರೆ. ಒಟ್ಟಿನಲ್ಲಿ ಇಬ್ಬರನ್ನೂ ಎತ್ತಿಕಟ್ಟಿ ಜಗಳ ತಂದಿಟ್ಟಿದ್ದಾರೆ ಎಂದಿದ್ದರು.


  ಪತ್ರಿಕಾಗೋಷ್ಠಿ ಕರೆದು ಮಾತನಾಡಲು ಅಧಿಕಾರಿಗಳಿಗೆ ಅನುಮತಿ ನೀಡಿದವರು ಯಾರು? ಅನುಮತಿ ಇಲ್ಲದೆ ಪತ್ರಿಕಾಗೋಷ್ಠಿ ಕರೆಯಲು ಅವಕಾಶ ಇಲ್ಲ. ವರ್ಗಾವಣೆ ಮಾಡಿದರಷ್ಟೇ ಸಾಲದು ನಿಯಮ ಉಲ್ಲಂಘಿಸಿದ ಇಬ್ಬರು ಅಧಿಕಾರಿಗಳ ವಿರುದ್ಧ ಬಿಜೆಪಿ ಸರ್ಕಾರ ಕ್ರಮ ಕೈಗೊಳ್ಳಬೇಕು. ಭೂ ಹಗರಣದ ತನಿಖೆಗೆ ಮುಂದಾಗಿದ್ದೇ ನನ್ನ ವರ್ಗಾವಣೆಗೆ ಕಾರಣ ಎಂದು ರೋಹಿಣಿ ಸಿಂಧೂರಿ ಹೇಳಿದ್ದಾರೆ. ಆ ಹಗರಣದ ಯಾವುದು? ಅದರಲ್ಲಿ ಯಾರೆಲ್ಲಾ ರಾಜಕಾರಣಿಗಳ ಷಾಮೀಲಾಗಿದ್ದಾರೆ? ಈ ವಿಷಯದಲ್ಲಿ ಯಾವ ಅಧಿಕಾರಿಗಳನ್ನು ಬಳಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ ಎಂಬುದು ತನಿಖೆಯಿಂದ ಹೊರಬರಬೇಕು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.  ಬಿಜೆಪಿಯ ಸಂಸದ, ಶಾಸಕರು ಜಿಲ್ಲಾಧಿಕಾರಿ ಹುದ್ದೆಯಲ್ಲಿ ಶಿಲ್ಪಾ ನಾಗ್ ಅವರನ್ನು ಕೂರಿಸುವ ಪ್ರಯತ್ನ ಮಾಡುತ್ತಿದ್ದರು. ಅದು ವಿಫಲವಾದಾಗ ಇಬ್ಬರೂ ಅಧಿಕಾರಿಗಳನ್ನು ಪರಸ್ಪರ ಎತ್ತಿ ಕಟ್ಟಿದರು. ಸರ್ಕಾರ ಸದೃಢವಾಗಿದ್ದರೆ ಅಧಿಕಾರಿಗಳು ಈ ರೀತಿ ಬೇಕಾಬಿಟ್ಟಿ ನಡೆದುಕೊಳ್ಳುತ್ತಿರಲಿಲ್ಲ. ರಾಜಕಾರಣಿಗಳು ಅಧಿಕಾರಿಗಳನ್ನು ಬೆಂಬಲಿಸುವ ಅಥವಾ ವಿರೋಧಿಸುವ ಕೆಲಸ ಮಾಡಬಾರದು. ಅದು ತಪ್ಪು. ಇದು ರಾಜಕೀಯ ನಾಯಕತ್ವದ ವೈಫಲ್ಯ ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದರು.
  Published by:Sushma Chakre
  First published: