Siddaramaiah: ಮುಂದಿನ ಚುನಾವಣೆಯೇ ನನ್ನ ಕೊನೇ ಸ್ಪರ್ಧೆ, ನಿವೃತ್ತಿ ಬಗ್ಗೆ ಸಿದ್ದರಾಮಯ್ಯ ಮಾತು

ವರುಣ, ಚಾಮುಂಡೇಶ್ವರಿ, ಹುಣಸೂರು, ಹೆಬ್ಬಾಳ, ಚಾಮರಾಜಪೇಟೆ, ಬಾದಾಮಿ, ಕೋಲಾರ ಇಷ್ಟು ಕ್ಷೇತ್ರದ ಜನ ನಮ್ಮಲ್ಲಿಯೇ ಸ್ಪರ್ಧಿಸುವಂತೆ ಕರೀತಿದ್ದಾರೆ. ನಾನು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ತೀರ್ಮಾನ ಮಾಡಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ

ಮಾಜಿ ಸಿಎಂ ಸಿದ್ದರಾಮಯ್ಯ

ಮಾಜಿ ಸಿಎಂ ಸಿದ್ದರಾಮಯ್ಯ

  • Share this:
ಮೈಸೂರು (ಮಾ.25): ಮುಂಬರುವ 2023ರ ಚುನಾವಣೆಯೇ ನನ್ನ ಕೊನೆಯ ಚುನಾವಣೆ (Last Election)  ಅಂತ ಕಾಂಗ್ರೆಸ್​ ಹಿರಿಯ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಘೋಷಿಸಿದ್ದಾರೆ. ಮೈಸೂರಿನಲ್ಲಿಈ ಬಗ್ಗೆ ಪ್ರತಿಕ್ರಿಯಿಸಿದ ಅವ್ರು ಮುಂದಿನ ಚುನಾವಣೆಯೇ ನನ್ನ ಕೊನೆಯ ಸ್ಪರ್ಧೆ, ಚುನಾವಣಾ ರಾಜಕಾರಣದಿಂದ ನಿವೃತ್ತಿ (Retiring Politics) ಪಡೆಯೋದಾಗಿ ಹೇಳಿದ್ದಾರೆ. ಮುಂದಿನ ವರ್ಷ ಚುನಾವಣೆ ನಡೆಯಲಿದೆ ನಾನು ಎಲ್ಲಿ ಸ್ಪರ್ಧಿಸಬೇಕೆಂದು ನಿರ್ಧರಿಸಿಲ್ಲ. ಬಹಳಷ್ಟು ಕ್ಷೇತ್ರಗಳ (Constituency) ನಾಯಕರು (Leaders) ತಮ್ಮ ಕ್ಷೇತ್ರದಲ್ಲಿ ಸ್ಪರ್ಧಿಸಿ ಎಂದು ಕರೀತಿದ್ದಾರೆ. ಮುಂದಿನ ಚುನಾವಣೆಯೇ ನನ್ನ ಕೊನೆಯ ಸ್ಫರ್ಧೆಯಾಗಿರೋದ್ರಿಂದ ಯೋಚಿಸಿ ನಿರ್ಧಾರ ಕೈಗೊಳ್ಳೋದಾಗಿ ಹೇಳಿದ್ದಾರೆ. ಇನ್ನು ಚುನಾವಣಾ ಅಖಾಡದಿಂದ ದೂರ ಉಳಿದ್ರು ಸಕ್ರೀಯವಾಗಿ ರಾಜಕೀಯದಲ್ಲಿ (Politics) ತನ್ನನ್ನು ತಾನು ತೊಡಗಿಸಿಕೊಳ್ಳೋದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

‘ಮುಂದಿನ ಚುನಾವಣೆಯೇ ಕೊನೇ‘  

ಮೈಸೂರು ತಾಲೂಕಿನ ಸಿದ್ದರಾಮನಹುಂಡಿಯಲ್ಲಿ ಮಾತಾಡಿದ ಸಿದ್ದರಾಮಯ್ಯ, ವರುಣ, ಚಾಮುಂಡೇಶ್ವರಿ, ಹುಣಸೂರು, ಹೆಬ್ಬಾಳ, ಚಾಮರಾಜಪೇಟೆ, ಬಾದಾಮಿ, ಕೋಲಾರ ಇಷ್ಟು ಕ್ಷೇತ್ರದ ಜನ ನಮ್ಮಲ್ಲಿಯೇ ಸ್ಪರ್ಧಿಸುವಂತೆ ಕರೀತಿದ್ದಾರೆ. ನಾನು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ತೀರ್ಮಾನ ಮಾಡಿಲ್ಲ. ಎಲ್ಲಿ ನನಗೆ ರಾಜಕೀಯ ಪುನರ್ ಜನ್ಮ ಸಿಕ್ಕಿತೋ ಅಲ್ಲಿಯೇ ಸೋಲಿಸಿದರು. ಹಾಗಂತ ಬೇಸರ ಮಾಡಿಕೊಳ್ಳುವುದಕ್ಕೆ ಆಗುವುದಿಲ್ಲ. ಬರೋಬ್ಬರಿ ಐದು ಬಾರಿ ಚಾಮುಂಡೇಶ್ವರಿ ಜನ ನನ್ನನ್ನು ಗೆಲ್ಲಿಸಿದ್ದಾರೆ.

ಅದಕ್ಕಾಗಿ ಚಾಮುಂಡೇಶ್ವರಿಯನ್ನು ನಾನು ಯಾವಾಗಲೂ ಮರೆಯಲ್ಲ. ಮುಂದಿನ ಚುನಾವಣೆಯೇ ಕೊನೆ. ಮತ್ತೆ ಚುನಾವಣಾ ರಾಜಕಾರಣ ಮಾಡಲ್ಲ. ಆದರೆ ಸಕ್ರಿಯ ರಾಜಕೀಯದಲ್ಲಿ ಇರುತ್ತೇನೆ. ಹೀಗಾಗಿ ಹಲವು ಕ್ಷೇತ್ರಗಳ ಜನ ಸ್ಪರ್ಧೆಗೆ ಆಹ್ವಾನಿಸಿದ್ದಾರೆ. ಎಲ್ಲ ಕ್ಷೇತ್ರಗಳಿಗೂ ನಾನು ಆಧ್ಯತೆ ನೀಡುವೆ , ಹೆಚ್ಚು- ಕಮ್ಮಿ ಅಂತ ಇಲ್ಲ. ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಮುಂದೆ ಸೂಕ್ತ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಸ್ಪೀಕರ್ ನಮ್ಮ ಆರ್‌ಎಸ್ಎಸ್ ಎಂದು ಹೇಳಿದ್ದು ತಪ್ಪು

ಇದೇ ವೇಳೆ, ಸ್ಪೀಕರ್ ನಮ್ಮ ಆರ್‌ಎಸ್ಎಸ್ ಎಂದು ಹೇಳಿದ್ದು ತಪ್ಪು. ಸ್ಪೀಕರ್ ಸ್ಥಾನದಲ್ಲಿ ಕುಳಿತು ಆ ಮಾತು ಹೇಳಿದ್ದು ತಪ್ಪು. ಸ್ಪೀಕರ್ ಆದವರು ಪಕ್ಷಾತೀತವಾಗಿ ನಡೆದುಕೊಳ್ಳಬೇಕು. ಆದರೆ ಸ್ಪೀಕರ್ ನಮ್ಮ ಖSS ಎಂದು ಹೇಳಿರುವುದು ಸರಿಯಲ್ಲ. ಸಮಾಜ ಒಡೆಯುವುದೇ ಆರ್‌ಎಸ್‌ಎಸ್‌ನವರ ಅಜೆಂಡಾ. ಹೀಗಾಗಿಯೇ ನಾವು ಆರ್‌ಎಸ್‌ಎಸ್ ವಿರೋಧಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: Siddaramaiah: ಜಾತ್ರಾ ಮಹೋತ್ಸವದಲ್ಲಿ ಸಿದ್ದರಾಮಯ್ಯ ವೀರಕುಣಿತ; ವಿಡಿಯೋ ವೈರಲ್

ರೇಣುಕಾಚಾರ್ಯ ವಿರುದ್ಧ ಕ್ರಿಮಿನಲ್ ಕೇಸ್ ಹಾಕಬೇಕು

ರೇಣುಕಾಚಾರ್ಯ ಪುತ್ರಿ ಜಾತಿ ಪ್ರಮಾಣ ಪತ್ರ ವಿವಾದಕ್ಕೆ ಸಂಬಂಧಿಸಿ ರೇಣುಕಾಚಾರ್ಯ ವಿರುದ್ಧ ಕ್ರಿಮಿನಲ್ ಕೇಸ್ ಹಾಕಬೇಕು. ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಿ. ಶಾಸಕ ರೇಣುಕಾಚಾರ್ಯರನ್ನು ಸಮರ್ಥಿಸಿಕೊಳ್ಳಬಾರದು. ಅವರನ್ನು ಸಮರ್ಥಿಸಿಕೊಳ್ಳುವುದು ಪ್ರೋತ್ಸಾಹ ಕೊಟ್ಟಂತೆ. ಕಾನೂನುಬಾಹಿರ ಕೆಲಸಕ್ಕೆ ಪ್ರೋತ್ಸಾಹ ಕೊಟ್ಟಂತಾಗುತ್ತೆ. ರಾಜ್ಯ ಸರ್ಕಾರವೇ ಈಗ ಅವರನ್ನು ಸಮರ್ಥಿಸಿಕೊಳ್ಳುತ್ತಿದೆ. ಅವರನ್ನು ಏನು ಮಾಡಬೇಕು ಹೇಳಿ ಎಂದು ಸಿದ್ದರಾಮಯ್ಯ ಕೇಳಿದ್ದಾರೆ.

‘ಹಿಜಾಬ್ ವಿವಾದ ಸೃಷ್ಟಿಗೆ ಬಿಜೆಪಿಯೇ ಕಾರಣ’

ಹಿಜಾಬ್ ವಿವಾದ ಸೃಷ್ಟಿಗೆ ಬಿಜೆಪಿಯೇ ಕಾರಣ ಎಂದು ಸಿದ್ದರಾಮಯ್ಯ ಹೇಳಿದ್ದಾರೆ., ಮುಸ್ಲಿಂ ಹೆಣ್ಣು ಮಕ್ಕಳು ಒಂದು ದುಪ್ಪಟ್ಟ ತಲೆ ಹಾಕಿ ಕೊಳ್ಳುತ್ತೇನೆ ಎಂದರೆ ಅದರಲ್ಲಿ ತಪ್ಪೇನಿದೆ?, ಹಿಂದೂ ಹೆಣ್ಣು ಮಕ್ಕಳು ತಲೆ ಮೇಲೆ ಬಟ್ಟೆ ಹಾಕಿ ಕೊಳ್ಳಲ್ವಾ? ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಹಾಕುತ್ತಾರೆ. ಅದನ್ನು ನೀವು ಪ್ರಶ್ನೆ ಮಾಡುತ್ತೀರಾ? ಇಂತಹ ವಿವಾದ ಸೃಷ್ಟಿಸಿ ಅದನ್ನು ಅರಗಿಸಿ ಕೊಳ್ಳುತ್ತೇವೆ ಎಂದು ಬಿಜೆಪಿ ಅಂದುಕೊಂಡಿದೆ ಆದರೆ, ಜನ ಬುದ್ದಿವಂತರು.

ಇದನ್ನೂ ಓದಿ: ಹರ್ಷನ ಕುಟುಂಬಕ್ಕೆ ₹25 ಲಕ್ಷ, ST ವ್ಯಕ್ತಿಯ ಕುಟುಂಬಕ್ಕೆ ಕೇವಲ 4 ಲಕ್ಷ ಏಕೆ.. Siddaramaiah ಪ್ರಶ್ನೆ

ಜನರಿಗೆ ಬಿಜೆಪಿಯ ತಂತ್ರ ಅರ್ಥವಾಗಿದೆ. ಸಂಘ ಪರಿವಾರದವರು ಅಲ್ಪ ಸಂಖ್ಯಾತರ ಕೊಲೆ ಮಾಡಿದರೆ ಅವರಿಗೆ ಕಡಿಮೆ ಪರಿಹಾರ ಹಣ ಕೊಡುತ್ತಾರೆ. ಮುಸ್ಲಿಂರು ಹಿಂದೂವಿ‌ನ ಕೊಲೆ ಮಾಡಿದರೆ ಜಾಸ್ತಿ ಪರಿಹಾರ ಕೊಡುತ್ತಾರೆ. ಇಂತಹ ತಾರತಮ್ಯ ಯಾಕೆ? ಇಂತಹ ವರ್ತನೆಯಿಂದ ಮತ ಕ್ರೂಢೀಕರಣ ಆಗುತ್ತೆ ಎಂಬ ಬಿಜೆಪಿ ಲೆಕ್ಕ ಉಲ್ಟಾ ಆಗುತ್ತೆ ನೋಡಿ ಎಂದು ಸಿದ್ದರಾಮಯ್ಯ ಕಿಡಿಕಾರಿದ್ರು.
Published by:Pavana HS
First published: