HOME » NEWS » State » MYSORE THO SUICIDE CASE KODAGU DOCTORS PROTEST FOR DEMANDING SUSPEND OF MYSORE CEO LG

ನಂಜನಗೂಡು ವೈದ್ಯಾಧಿಕಾರಿ ಆತ್ಮಹತ್ಯೆ ಪ್ರಕರಣ; ಮೈಸೂರು ಸಿಇಓ ಅಮಾನತಿಗೆ ಆಗ್ರಹಿಸಿ ಕೊಡಗು ವೈದ್ಯರ ಪ್ರತಿಭಟನೆ 

ನಂಜನಗೂಡಿನ ತಾಲ್ಲೂಕು ವೈದ್ಯಾಧಿಕಾರಿ ನಾಗೇಂದ್ರ ಅವರಿಗೆ ಅಲ್ಲಿನ ಸಿಇಓ ಕಿರುಕುಳ ನೀಡಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದ್ದರಿಂದ ಸಿಇಓ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು. ಇಂದು ಸಾಂಕೇತಿಕವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ. ನಮ್ಮ ಸಂಘದ ನಿರ್ದೇಶನದಂತೆ ಪ್ರತಿಭಟನೆ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

news18-kannada
Updated:August 21, 2020, 3:41 PM IST
ನಂಜನಗೂಡು ವೈದ್ಯಾಧಿಕಾರಿ ಆತ್ಮಹತ್ಯೆ ಪ್ರಕರಣ; ಮೈಸೂರು ಸಿಇಓ ಅಮಾನತಿಗೆ ಆಗ್ರಹಿಸಿ ಕೊಡಗು ವೈದ್ಯರ ಪ್ರತಿಭಟನೆ 
ವೈದ್ಯರ ಪ್ರತಿಭಟನೆ
  • Share this:
ಕೊಡಗು(ಆ.21): ಕೊರೋನಾ ವಿರುದ್ಧದ ಹೋರಾಟದಲ್ಲಿ ವಾರಿಯರ್ಸ್ ಆಗಿರುವ ವೈದ್ಯರು ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕು ವೈದ್ಯಾಧಿಕಾರಿ ಡಾ ನಾಗೇಂದ್ರ ಅವರ ಆತ್ಮಹತ್ಯೆಯನ್ನು ಖಂಡಿಸಿ ಕೊಡಗಿನ ವೈದ್ಯರು ಇಂದು ಕರ್ತವ್ಯಕ್ಕೆ ಗೈರು ಹಾಜರಾಗಿ ಪ್ರತಿಭಟನೆ ನಡೆಸಿದರು.

ಮಡಿಕೇರಿಯಲ್ಲಿರುವ ಡಿಎಚ್ಓ ಕಚೇರಿಗೆ ಆಗಮಿಸಿದ ನೂರಾರು ವೈದ್ಯರು ಕಪ್ಪುಪಟ್ಟಿ ಧರಿಸಿ ನಾಗೇಂದ್ರ ಅವರ ಆತ್ಮಹತ್ಯೆಗೆ ಮೈಸೂರಿನ ಸಿಇಓ ಕಾರಣವೆಂದು ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಗೂ ಮುನ್ನ ಮೃತ ವೈದ್ಯ ನಾಗೇಂದ್ರ ಅವರಿಗೆ ಒಂದು ನಿಮಿಷ ಮೌನ ಆಚರಣೆ ಮಾಡಿ ಶ್ರದ್ಧಾಂಜಲಿ ಅರ್ಪಿಸಿದರು. ಬಳಿಕ ಮೈಸೂರಿನ ಸಿಇಓ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿದರು. ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯರು ತುರ್ತುಸೇವೆ ಬಿಟ್ಟು ಉಳಿದ ಎಲ್ಲಾ ವೈದ್ಯಕೀಯ ಸೇವೆಗಳನ್ನು ಸ್ಥಗಿತಗೊಳಿಸಿದರು.

ಮೈಸೂರು ಆರೋಗ್ಯಾಧಿಕಾರಿ ಆತ್ಮಹತ್ಯೆ ಪ್ರಕರಣ; ನ್ಯಾಯ ಸಿಗೋವರೆಗೂ ನಾವು ಸೇವೆ ನೀಡಲ್ಲ ಎಂದ ಆಸ್ಪತ್ರೆ ಸಿಬ್ಬಂದಿ

ಈ ವೇಳೆ ಮಾತನಾಡಿದ ವೈದ್ಯಾಧಿಕಾರಿ ಆನಂದ್, ಕೋವಿಡ್ ಸಂದರ್ಭದಲ್ಲಿ ವೈದ್ಯರು ಎಷ್ಟು ಒತ್ತಡದಿಂದ ಕೆಲಸ ಮಾಡುತ್ತಿದ್ದಾರೆ ಎನ್ನೋದು ಎಲ್ಲರಿಗೂ ಗೊತ್ತಿದೆ. ಆದರೆ ನಂಜನಗೂಡಿನ ತಾಲ್ಲೂಕು ವೈದ್ಯಾಧಿಕಾರಿ ನಾಗೇಂದ್ರ ಅವರಿಗೆ ಅಲ್ಲಿನ ಸಿಇಓ ಕಿರುಕುಳ ನೀಡಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದ್ದರಿಂದ ಸಿಇಓ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು. ಇಂದು ಸಾಂಕೇತಿಕವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ. ನಮ್ಮ ಸಂಘದ ನಿರ್ದೇಶನದಂತೆ ಪ್ರತಿಭಟನೆ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ನಂಜನಗೂಡಿನ ವೈದ್ಯಾಧಿಕಾರಿ ಡಾ. ಎಸ್ ಆರ್ ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣದ ತನಿಖೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶಿಸಿದ್ದಾರೆ. ಕರ್ನಾಟಕ ನೌಕರರ ಸಂಘದ ಮನವಿ ಮೇರೆಗೆ ಸಿಎಂ ಈ ಕ್ರಮ ತೆಗೆದುಕೊಂಡಿದ್ದಾರೆ. ಪ್ರಕರಣದ ತನಿಖೆ ನಡೆಸಿ ಏಳು ದಿನದೊಳಗೆ ವರದಿ ನೀಡುವಂತೆ ಮೈಸೂರಿನ ಪ್ರಾದೇಶಿಕ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ನಂಜನಗೂಡಿನ ವೈದ್ಯಾಧಿಕಾರಿ ನಾಗೇಂದ್ರ ಗುರುವಾರ ಆತ್ಮಹತ್ಯೆಗೆ ಶರಣಾಗಿದ್ದರು.  ಮೃತ ವೈದ್ಯಾಧಿಕಾರಿಯ ಕುಟುಂಬಕ್ಕೆ ಕೂಡಲೇ 50 ಲಕ್ಷ ರೂ ಪರಿಹಾರವನ್ನೂ ಸಿಎಂ ಘೋಷಿಸಿದ್ಧಾರೆ. ಅವರ ಕುಟುಂಬದ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸ ನೀಡಬೇಕು. ಸರ್ಕಾರದ ಇತರ ಸೌಲಭ್ಯವನ್ನು ಶೀಘ್ರದಲ್ಲೇ ಒದಗಿಸಬೇಕು ಎಂದೂ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
Published by: Latha CG
First published: August 21, 2020, 3:41 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading