ಹಂಟ್ಸ್ವಿಲ್ಲೆಯಲ್ಲಿರುವ ಅಲಬಾಮಾ ವಿಶ್ವವಿದ್ಯಾಲಯದ ಇಬ್ಬರು ಡಾಕ್ಟರೇಟ್ ವಿದ್ಯಾರ್ಥಿಗಳು ಸಲ್ಲಿಸಿರುವ ಸಂಶೋಧನಾ ಪ್ರಸ್ತಾವನೆಯನ್ನು (UAH) ಬಾಹ್ಯಾಕಾಶ ವಿಜ್ಞಾನ ವಿಭಾಗವು ನಾಸಾ ಅರ್ಥ್ ಮತ್ತು ಸ್ಪೇಸ್ ಸೈನ್ಸ್ ಮತ್ತು ಟೆಕ್ನಾಲಜಿ (FINESST) ಅನುದಾನದಲ್ಲಿ NASA ಫ್ಯೂಚರ್ ಇನ್ವೆಸ್ಟಿಗೇಟರ್ ಪ್ರಶಸ್ತಿಗೆ ಭಾಜನವಾಗಿದೆ.
ಕ್ಯಾಥರೀನ್ ಡೇವಿಡ್ಸನ್ ಮತ್ತು ದಿನೇಶ (ದಿನೇಶ್) ವಸಂತ ಹೆಗಡೆ ತಲಾ $ 135,000
(1 ಕೋಟಿ 20 ಲಕ್ಷ) ಅಮೇರಿಕನ್ ಡಾಲರ್ ಸ್ಟೈಫಂಡ್ ಅನ್ನು ಟ್ಯೂಷನ್, ಸಂಶೋಧನಾ ಚಟುವಟಿಕೆಗಳು ಮತ್ತು ಪ್ರಯಾಣ ವೆಚ್ಚಗಳನ್ನು ಭರಿಸಲು, ಕಾರ್ಯಾಗಾರಗಳು ಮತ್ತು ಸಮ್ಮೇಳನಗಳಿಗೆ ಹಾಜರಾಗಲು ಅಲಬಾಮಾ ವಿಶ್ವವಿದ್ಯಾಲಯದ ಒಂದು ಭಾಗವಾದ UAH ಮೂಲಕ ಮುಂದುವರೆಸಲು ನೀಡಲಾಗುವುದು ಎಂದು ವಿಶ್ವವಿದ್ಯಾನಿಯಲದ ಅಧಿಕೃತ ವೆಬ್ಸೈಟ್ ತನ್ನ ನ್ಯೂಸ್ ಲೆಟರ್ನಲ್ಲಿ ತಿಳಿಸಿದೆ.
ಎರಡನೇ ವರ್ಷದ ಡಾಕ್ಟರೇಟ್ ವಿದ್ಯಾರ್ಥಿಯಾಗಿರುವ ಹೆಗಡೆ, ಬಾಹ್ಯಾಕಾಶ ವಿಜ್ಞಾನ ವಿಭಾಗದಲ್ಲಿ ಮತ್ತು ಯುಎಎಚ್ ಸೆಂಟರ್ ಫಾರ್ ಸ್ಪೇಸ್ ಪ್ಲಾಸ್ಮಾ ಮತ್ತು ಏರೋನಾಮಿಕ್ ರಿಸರ್ಚ್ನಲ್ಲಿ ಪದವಿ ಸಂಶೋಧನಾ ಸಹಾಯಕರಾಗಿ ಕೆಲಸ ಮಾಡುತ್ತಿದ್ದಾರೆ, ಬಾಹ್ಯಾಕಾಶ ಹವಾಮಾನದ ಕುರಿತು ತಮ್ಮ ಸಂಶೋಧನೆಯನ್ನು ಮುಂದುವರಿಸಲು ಈ ಅನುದಾನವನ್ನು ನೀಡಲಾಗಿದೆ. ಹೆಗ್ಡೆಯವರ ಸಂಶೋದನಾ ಪ್ರಸ್ತಾವನೆ
"ಅನಿಶ್ಚಿತತೆಯಿಂದ ಕೂಡಿರುವ ಬಾಹ್ಯಾಕಾಶ ಹವಾಮಾನವನ್ನು ಅಭ್ಯಾಸ ಮಾಡುವ ವಿಧಾನ", ವಿಷಯವನ್ನು ಒಳಗೊಂಡಿದೆ. ಬಾಹ್ಯಾಕಾಶ ಹವಾಮಾನ ವಿಜ್ಞಾನಿ ಮತ್ತು ಬಾಹ್ಯಾಕಾಶ ವಿಜ್ಞಾನದ ವಿಶೇಷ ಪ್ರಾಧ್ಯಾಪಕರಾದ ಡಾ.ನಿಕೊಲಾಯ್ ಪೊಗೊರೆಲೋವ್ ಇವರಿಗೆ ಸಲಹೆ ಮತ್ತು ಮಾರ್ಗದರ್ಶನ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ದಿನೇಶ್ ಹೆಗಡೆ, ನಾಸಾ ಗುರುತಿಸಿರುವ ಅಪ್ಪಟ ಕನ್ನಡ ಮಣ್ಣಿನ ಪ್ರತಿಭೆ. ಮೈಸೂರಿನ ಯುವರಾಜ ಕಾಲೇಜಿನಲ್ಲಿ ತನ್ನ ಬಿಎಸ್ಸಿ ಪದವಿ ಮುಗಿಸಿ ನಂತರ ಮೈಸೂರು ವಿಶ್ವವಿದ್ಯಾನಿಲಯದಿಂದ ಭೌತ್ತಶಾಸ್ತ್ರ ಎಂಎಸ್ಸಿ ಪದವಿ ಗಳಿಸಿ, ಹೆಚ್ಚಿನ ಅಧ್ಯಯನಕ್ಕೆ ಅಮೇರಿಕಾಕ್ಕೆ ಹಾರಿದ ದಿನೇಶ್ ಅಂತರರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ಪತಾಕೆ ಹಾರಿಸಿದ್ದಾರೆ.
ಕಾಲೇಜು ದಿನಗಳಲ್ಲೇ ವಿಜ್ಞಾನದ ಜೊತೆಗೆ ಸಾಂಸ್ಕೃತಿಕವಾಗಿಯೂ ಭಾಗವಹಿಸುತ್ತಿದ್ದ ದಿನೇಶ್ ಮೈಸೂರಿನ ನಿರಂತರ ರಂಗ ತಂಡದಲ್ಲಿ ನಟನಾಗಿ ಗುರುತಿಸಿಕೊಂಡಿದ್ದರು, ಅಲ್ಲದೇ ಅನೇಕ ಕಾಲೇಜು ನಾಟಕೋತ್ಸವಗಳಲ್ಲಿ ಭಾಗವಹಿಸಿದ ಹೆಗ್ಗಳಿಕೆ ಇವರದು.
’’ದಿನ ಬೆಳಗಾದರೆ ನೋಡುವ ಸೂರ್ಯ ನನಗೆ ಒಂದು ರೀತಿಯಲ್ಲಿ ಕುತೂಹಲದ ವಸ್ತುವಾಗಿ ಕಾಣುತ್ತಿದ್ದ, ಈಗ ಆ ಸೂರ್ಯನ ಬಗ್ಗೆಯೇ ನಾನು ಅಧ್ಯಯನ ಮಾಡಲು ಇಷ್ಟು ದೊಡ್ಡ ಮಟ್ಟದ ಪ್ರಶಸ್ತಿ ಪಡೆದಿರುವುದು ಸಾಕಷ್ಟು ಖುಷಿ ನೀಡಿದೆ’’ ಎಂದು ನ್ಯೂಸ್ 18 ಜೊತೆ ತಮ್ಮ ಸಂತೋಷವನ್ನು ದಿನೇಶ್ ಹೆಗಡೆ ಹಂಚಿಕೊಂಡರು.
ಭೂ ವಿಜ್ಞಾನ, ಹೆಲಿಯೊಫಿಸಿಕ್ಸ್, ಗ್ರಹ ವಿಜ್ಞಾನ ಮತ್ತು ಖಗೋಳ ಭೌತಶಾಸ್ತ್ರ ವಿಷಯಗಳನ್ನು ಅಧ್ಯಯನ ಮಾಡುತ್ತಿರುವ, ನಾಸಾ ವಿಜ್ಞಾನದ ಮಿಷನ್ ನಿರ್ದೇಶನಾಲಯದೊಂದಿಗೆ ಈ ಕೆಳಗಿನ ಒಂದು ಅಥವಾ ಹೆಚ್ಚಿನ ಕ್ಷೇತ್ರಗಳಲ್ಲಿ ಹೊಂದಿಕೊಂಡಂತೆ ಸಂಶೋಧನೆಯನ್ನು ಮಾಡುತ್ತಿರುವ ಪದವಿ ವಿದ್ಯಾರ್ಥಿಗಳಿಗೆ ನಾಸಾ ಈ ಅತ್ಯುತ್ತಮ ಪ್ರಶಸ್ತಿ ನೀಡುತ್ತದೆ.
ತಾನು ಆಯ್ಕೆ ಆಗಿಲ್ಲ ಎಂದು ಆರಂಭದಲ್ಲಿ ಭಾವಿಸಿದ್ದೆ, ನಂತರ ಬಂದ ಆಫರ್ ಲೆಟರ್ ನನ್ನ ಆತ್ಮ ವಿಶ್ವಾಸ, ಸಂತೋಷ, ಭವಿಷ್ಯದ ಗುರಿ, ಕನಸು ಎಲ್ಲವನ್ನು ಇಮ್ಮಡಿಗೊಳಿಸಿತು ಎಂದು ಹೆಗ್ಡೆ ಹೇಳಿದ್ದಾರೆ.
"ನಾನು ಆಯ್ಕೆಯಾಗಿದ್ದೇನೆ ಎಂದು ತಿಳಿದಾಗ ನನಗೆ ತುಂಬಾ ಸಂತೋಷವಾಯಿತು ಮತ್ತು ಆಶ್ಚರ್ಯವಾಯಿತು", "ಸಂಶೋದನಾ ಪ್ರಸ್ತಾವನೆಯನ್ನು ಸಲ್ಲಿಸಲು ನೀಡಿದ್ದ ಅಧಿಸೂಚನೆಯ ಗಡುವು ಈಗಾಗಲೇ ಮುಗಿದಿರುವುದರಿಂದ, ನಮ್ಮ ಈ ಯೋಜನೆಯನ್ನು ಆಯ್ಕೆ ಮಾಡಲಾಗುವುದಿಲ್ಲ ಎಂದು ನಾನು ಭಾವಿಸಿದ್ದೆ. ಆಯ್ಕೆಯನ್ನು ಖಚಿತಪಡಿಸಿಕೊಳ್ಳಲು ನಾನು ಆಫರ್ ಲೆಟರ್ ಅನ್ನು ಎರಡು ಬಾರಿ ಪರಿಶೀಲಿಸಿದೆ ", "ಸ್ವಲ್ಪ ಸಮಯದ ನಂತರ, ನನ್ನ ಮೇಲ್ವಿಚಾರಕರಿಂದ ನನಗೆ ಇಮೇಲ್ ಬಂದು ಈ ಸಂತೋಷದ ವಿಷಯ ದೃಡಪಟ್ಟಿತು. ತಕ್ಷಣವೇ ನಾನು ಭಾರತದಲ್ಲಿರುವ ನನ್ನ ಸ್ನೇಹಿತರಿಗೆ ಈ ಶುಭ ಸುದ್ದಿಯನ್ನು ಹಂಚಿಕೊಳ್ಳಲು ಕರೆ ಮಾಡಿದೆ ಎಂದರು ದಿನೇಶ್ ಹೆಗ್ಡೆ.
ಇದನ್ನೂ ಓದಿ: ಹಸುಗೂಸು ಮಾರಾಟ ಮಾಡಿದ ಎರಡನೇ ಪತಿ; ಮನೆಗೆಲಸದವಳಿಗೆ ಮೋಸ ಮಾಡಿದ ಮನೆಯೊಡತಿ
ಸೌರ ಮಾರುತದ ಗುಣಲಕ್ಷಣಗಳನ್ನು ಅಧ್ಯಯನ ಮಾಡುತ್ತಿರುವ ದಿನೇಶ್, ಪ್ಲಾಸ್ಮಾ ಸ್ಥಿತಿಯಲ್ಲಿ ಮುಖ್ಯವಾಗಿ ಪ್ರೋಟಾನ್ಗಳು ಮತ್ತು ಎಲೆಕ್ಟ್ರಾನ್ಗಳನ್ನು ಒಳಗೊಂಡಿರುವ ನಿರಂತರ ಹರಿವು ಸೂರ್ಯನಿಂದ ಹೊರಕ್ಕೆ ಹೇಗೆ ಹರಿಯುತ್ತದೆ ಮತ್ತು ತನ್ನ ಒಳಗೆ ಹುದುಗಿರುವ ಸೌರ ಕಾಂತೀಯ ಕ್ಷೇತ್ರವನ್ನು ಅದರೊಂದಿಗೆ ಹೇಗೆ ಒಯ್ಯುತ್ತದೆ ಎನ್ನುವ ವಿಚಾರದ ಕುರಿತು ಅಧ್ಯಯನ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ