ಮೈಸೂರು ಮಹಾನಗರ ಪಾಲಿಕೆ ಅಧಿಕಾರಕ್ಕೆ ಮೂರು ಪಕ್ಷಗಳಿಂದ ಪ್ರಬಲ ಹೋರಾಟ

news18
Updated:August 29, 2018, 12:28 PM IST
ಮೈಸೂರು ಮಹಾನಗರ ಪಾಲಿಕೆ ಅಧಿಕಾರಕ್ಕೆ ಮೂರು ಪಕ್ಷಗಳಿಂದ ಪ್ರಬಲ ಹೋರಾಟ
news18
Updated: August 29, 2018, 12:28 PM IST
ಎಸ್​.ಎಂ. ನಂದೀಶ್, ನ್ಯೂಸ್ 18 ಕನ್ನಡ

ಮೈಸೂರು (ಆ.29): ಕಾಂಗ್ರೆಸ್​ ಹಾಗೂ ಜೆಡಿಎಸ್​ ಪಕ್ಷಗಳ ಭದ್ರಕೋಟೆ ಮೈಸೂರು ಮಹಾನಗರ ಪಾಲಿಕೆ ಚುನಾವಣೆಗೆ ಮೂರು ಪಕ್ಷಗಳು ಭರ್ಜರಿ ಪ್ರಚಾರ ನಡೆಸಿದ್ದು, ಪಾಲಿಕೆ ಅಧಿಕಾರದ ಚುಕ್ಕಾಣಿ ಹಿಡಿಯಲು ಹರಸಾಹಸ ಪಡುತ್ತಿವೆ.

ಮೈಸೂರು ಮಹಾನಗರ ಪಾಲಿಕೆಯ 65 ವಾರ್ಡ್​ಗಳಿಗೆ ಚುನಾವಣೆ ನಡೆಯುತ್ತಿದ್ದು, ಒಟ್ಟು 465 ಮಂದಿ ಕಣದಲ್ಲಿ ಇದ್ದಾರೆ. ಮೂರು ಪ್ರಮುಖ ಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಎಲ್ಲಾ 65 ವಾರ್ಡ್​ಗಳಲ್ಲಿ ತಮ್ಮ ತಮ್ಮ  ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಬಂಡಾಯ ಹಾಗೂ ಪಕ್ಷೇತರರು ಸೇರಿದಂತೆ 275 ಮಂದಿ ಅಭ್ಯರ್ಥಿಗಳು ಸಹ ಉಮೇದುವಾರಿಕೆ ಸಲ್ಲಿಸಿದ್ದಾರೆ. ಇಲ್ಲಿ ಯಾವುದೇ ಪಕ್ಷಗಳು ಮೈತ್ರಿ ಮಾಡಿಕೊಂಡಿಲ್ಲ.

ತಿ.ನರಸೀಪುರ ಪುರಸಭೆ

ಮೈಸೂರು ಜಿಲ್ಲೆ ತಿ.ನರಸೀಪುರ ಪುರಸಭೆಯ 23 ವಾರ್ಡ್​ಗಳಿಗೆ ಚುನಾವಣೆ ನಡೆಯುತ್ತಿದ್ದು ಒಟ್ಟು 124 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿಯೂ ಎಲ್ಲಾ 23 ವಾರ್ಡ್ ಗಳಲ್ಲಿ ಸ್ಪರ್ಧಿಸಿದೆ. ಜೆಡಿಎಸ್ 21 ವಾರ್ಡ್​ಗಳಲ್ಲಿ ಸ್ಪರ್ಧಿಸಿದೆ. 57 ಮಂದಿ ಪಕ್ಷೇತರ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.  ಇಲ್ಲಿ ಯಾವ ಪಕ್ಷಗಳು ಸಹ ಹೊಂದಾಣಿಕೆ ಮಾಡಿಕೊಂಡಿಲ್ಲ.

ಪಿರಿಯಾಪಟ್ಟಣ ಪುರಸಭೆ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ಪುರಸಭೆಯ 23 ವಾರ್ಡ್​ಗಳಿಗೆ ಚುನಾವಣೆ ನಡೆಯುತ್ತಿದ್ದು,  67 ಮಂದಿ ಅಖಾಡದಲ್ಲಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಎಲ್ಲಾ 23 ವಾರ್ಡ್​ಗಳಲ್ಲೂ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬಿಜೆಪಿ 14 ವಾರ್ಡ್​ಗಳಲ್ಲಿ ಸ್ಪರ್ಧಿಸಿದೆ. 7 ಮಂದಿ  ಪಕ್ಷೇತರ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿ, ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಇಲ್ಲೂ ಸಹ ಯಾವ ಪಕ್ಷಗಳು ಮೈತ್ರಿ ಮಾಡಿಕೊಂಡಿಲ್ಲ.
First published:August 29, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ