• Home
  • »
  • News
  • »
  • state
  • »
  • Mysuru Dasara 2022: ಯುವ ದಸರಾ ಕಾರ್ಯಕ್ರಮಕ್ಕೆ ಬರಲ್ವಂತೆ ನಟ ಕಿಚ್ಚ ಸುದೀಪ್​

Mysuru Dasara 2022: ಯುವ ದಸರಾ ಕಾರ್ಯಕ್ರಮಕ್ಕೆ ಬರಲ್ವಂತೆ ನಟ ಕಿಚ್ಚ ಸುದೀಪ್​

ಕಿಚ್ಚ ಸುದೀಪ್​

ಕಿಚ್ಚ ಸುದೀಪ್​

ಯುವ ದಸರಾ ಕಾರ್ಯಕ್ರಮಕ್ಕೆ ನಟ ಸುದೀಪ್ ಬರುತ್ತಿಲ್ಲ ಕಾರ್ಯಕ್ರಮಕ್ಕೆ ಬರಲು ಆಗೋದಿಲ್ಲ ಎಂದು ಸುದೀಪ್ ಮಾಹಿತಿ ನೀಡಿದ್ದಾರೆ. ಪರ್ಯಾಯವಾಗಿ ಯಾರನ್ನು ಕರೆಸಬೇಕೆಂದು‌ ಯೋಚಿಸ್ತಿದ್ದೇವೆ ಎಂದು ಸಚಿವ ಎಸ್ ​ಟಿ ಸೋಮಶೇಖರ್ ಹೇಳಿದ್ದಾರೆ.

  • Share this:

ಮೈಸೂರು (ಸೆ.24): ವಿಶ್ವ ವಿಖ್ಯಾತ ಮೈಸೂರು ದಸರಾ (Mysuru Dasara) ಸಡಗರ ಮನೆ ಮಾಡಿದೆ. ಈ ಬಾರಿ ಅದ್ಧೂರಿ ದಸರಾ ಆಯೋಜಿಸಿರೋ ಸರ್ಕಾರ (Government) ಕೂಡ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇನ್ನು ದಸರಾದ ಪ್ರಮುಖ ಕಾರ್ಯಕ್ರಮವಾಗಿರುವ ಯುವ ದಸರಾಗೆ (Yuva Dasara) ಯುವ ಜನತೆ ಕಾತುರದಿಂದ ಕಾಯ್ತಿದೆ. ಯುವ ದಸರಾಗೆ ಯಾರು ಮುಖ್ಯ ಅತಿಥಿಯಾಗಿ ನಟ ಸುದೀಪ್​ ಬರುತ್ತಾರೆ ಎಂದು ಹೇಳಲಾಗಿತ್ತು. ಆದ್ರೆ ಇದೀಗ ಕಿಚ್ಚ ಸುದೀಪ್ ಬರುತ್ತಿಲ್ಲ ಎಂದು ಸಚಿವ ಎಸ್​.ಟಿ ಸೋಮಶೇಖರ್ (S.T Somashekhar)​ ಹೇಳಿದ್ದಾರೆ. 


ಯುವ ದಸರಾ ಕಾರ್ಯಕ್ರಮಕ್ಕೆ ಬರಲ್ಲ ಎಂದ ಸುದೀಪ್​


ಯುವ ದಸರಾ ಕಾರ್ಯಕ್ರಮಕ್ಕೆ ನಟ ಸುದೀಪ್ ಬರುತ್ತಿಲ್ಲ ಕಾರ್ಯಕ್ರಮಕ್ಕೆ ಬರಲು ಆಗೋದಿಲ್ಲ ಎಂದು ಸುದೀಪ್ ಮಾಹಿತಿ ನೀಡಿದ್ದಾರೆ. ಪರ್ಯಾಯವಾಗಿ ಯಾರನ್ನು ಕರೆಸಬೇಕೆಂದು‌ ಯೋಚಿಸ್ತಿದ್ದೇವೆ ಎಂದು  ಸಚಿವ ಎಸ್​ಟಿ ಸೋಮಶೇಖರ್ ಹೇಳಿದ್ದಾರೆ. ರಾಜಮನೆತನದವರಿಗೆ ಮೈಸೂರು ಜಿಲ್ಲಾಡಳಿತದಿಂದ ಯದುವಂಶದ ಪ್ರಮೋದಾದೇವಿ ಒಡೆಯರ್, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿಗೆ ಆಹ್ವಾನ ಅಧಿಕೃತ ಆಹ್ವಾನ ನೀಡಲಾಗಿದೆ. ಮಹೋತ್ಸವಕ್ಕೆ ಸಂಪೂರ್ಣ ಸಹಕಾರ ನೀಡಲು ಒಪ್ಪಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ರಾಜ ಧನ ನೀಡಲಾಗಿದೆ ಎಂದರು.


ಮೈಸೂರು ದಸರಾಗೆ ಪ್ರಚಾರದ ಕೊರತೆಯಾಗಿಲ್ಲ


ದಸರಾ ಕಾರ್ಯಕ್ರಮಗಳಿಗೆ ಶಾಸಕ ರಾಮದಾಸ್ ಗೈರು ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಮೋದಿ ಯುಗ ಉತ್ಸವ ಕಾರ್ಯಕ್ರಮವನ್ನು ನಡೆಸುತ್ತಿದ್ದಾರೆ. ಹೀಗಾಗಿ ರಾಮದಾಸ್ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿಲ್ಲ. ಮುಂದಿನ‌ ದಿನಗಳಲ್ಲಿ ಶಾಸಕ S.A.ರಾಮದಾಸ್ ಬರುತ್ತಾರೆ. ನಾಡಹಬ್ಬ ಮೈಸೂರು ದಸರಾಗೆ ಪ್ರಚಾರದ ಕೊರತೆಯಾಗಿಲ್ಲ. ಮೈಸೂರು ದಸರಾಗೆ ಫ್ಲೆಕ್ಸ್ ಹಾಕುವುದೇ ಪ್ರಚಾರ ಅಲ್ಲ. ಪ್ರತಿ ವರ್ಷದಂತೆ ಎಲ್ಲಾ ಸಿದ್ಧತೆಗಳನ್ನ ಮಾಡಿಕೊಂಡಿದ್ದೇವೆ ಎಂದು ಸಚಿವ ಸೋಮಶೇಖರ್ ತಿಳಿಸಿದರು.


ದಸರಾ ಆಚರಣೆಗೆ ಅಗತ್ಯವಾದ ಭದ್ರತೆ


ದಸರಾ ಆಚರಣೆಗೆ ಅಗತ್ಯವಾದ ಭದ್ರತೆ ಒದಗಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ತಿಳಿಸಿದರು. ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು,  ಮೈಸೂರು ದಸರಾ ಮಹೋತ್ಸವವನ್ನು ಸೆ.26 ರಿಂದ ಅ.5 ರವರೆಗೆ ಆಯೋಜಿಸಲಾಗಿದ್ದು, ನಗರದ ವಿವಿಧೆಡೆ ಹಲವು ಕಾರ್ಯಕ್ರಮಗಳು ನಡೆಯಲಿವೆ. ಈ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ನೋಡಿಕೊಳ್ಳಲು, ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ನಿಗಾ ವಹಿಸಲಾಗಿದೆ ಎಂದು ಡಾ.ಚಂದ್ರಗುಪ್ತ ತಿಳಿಸಿದ್ದಾರೆ.


ಇದನ್ನೂ ಓದಿ: Mysuru Dasara 2022: ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾಕ್ಕೆ ಅವಕಾಶವಿಲ್ಲ; ಅರಮನೆ ನಗರಿ ಸುತ್ತ ಟೈಟ್ ಸೆಕ್ಯೂರಿಟಿ


ಮೈಸೂರು ನಗರದ ಅಧಿಕಾರಿ ಮತ್ತು ಸಿಬ್ಬಂದಿ ಸೇರಿದಂತೆ ಹೊರ ಜಿಲ್ಲೆಗಳಿಂದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿದೆ. ನಗರದ 1, 255, ಹೊರ ಜಿಲ್ಲೆಗಳಿಂದ 3, 580 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ, 650 ಗೃಹ ರಕ್ಷಕ ಸಿಬ್ಬಂದಿ ಸೇರಿದಂತೆ ಒಟ್ಟು 5,485 ಪೊಲೀಸರನ್ನು ಬಂದೋಬಸ್ತ್‌ಗೆ ಬಳಸಲಾಗುತ್ತಿದೆ ಎಂದು ವಿವರಿಸಿದರು.


ಇದನ್ನೂ ಓದಿ: Mysuru Top 5 News: ಯುವ ದಸರೆಯಲ್ಲಿ ಒಂದು ದಿನ ಅಪ್ಪುಗಾಗಿ ಮೀಸಲು, ತುತ್ತೂರಿ ಮಾರಾಟ ನಿಷೇಧ; ಮೈಸೂರಿನ ಟಾಪ್ ನ್ಯೂಸ್​​ಗಳು


ಡ್ರೋಣ್ ಕ್ಯಾಮೆರಾಗಳಿಂದ ಕಣ್ಗಾವಲು


ಅರಮನೆ ಮತ್ತು ಬನ್ನಿಮಂಟಪದ ಎಲ್ಲಾ ಪ್ರವೇಶ ದ್ವಾರಗಳಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ಬಾಡಿ ವೋರ್ನ್‌ ಕ್ಯಾಮೆರಾ ವಿತರಿಸಲಾಗುತ್ತದೆ. ಅಲ್ಲಿನ ಸಂಪೂರ್ಣ ದೃಶ್ಯಾವಳಿ ಈ ಕ್ಯಾಮೆರಾಗಳಲ್ಲಿ ಮತ್ತು ಮೊಬೈಲ್ ಕಮಾಂಡ್ ಸೆಂಟರ್‌ನಲ್ಲಿ ದಾಖಲಾಗುವ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಮುಖ ದಸರಾ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಡ್ರೋಣ್ ಕ್ಯಾಮೆರಾಗಳಿಂದ ಕಣ್ಗಾವಲು ಮಾಡಲಾಗುವುದು ಎಂದು ತಿಳಿಸಿದ್ದಾರೆ.


ಮೆಗಾಫೋನ್ ಸಮೇತ ಕರ್ತವ್ಯ ನಿಯೋಜನೆ


ದಸರೆಯ ಪ್ರಮುಖ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಪೊಲೀಸರು ಎದ್ದು ಕಾಣುವ ರೀತಿಯಲ್ಲಿ ಎತ್ತರದ ಅಂಕಣಗಳನ್ನು ನಿರ್ಮಿಸಲಾಗುವುದು. ಅದರ ಮೇಲೆ ಪೊಲೀಸರನ್ನು ಮೆಗಾಫೋನ್ ಸಮೇತ ಕರ್ತವ್ಯಕ್ಕೆ ನಿಯೋಜಿಸಲಾಗುವುದು. ಅಪರಾಧಗಳನ್ನು ತಡೆಗಟ್ಟಲು ಅಕ್ಕಪಕ್ಕದ ಜಿಲ್ಲೆ ಮತ್ತು ರಾಜ್ಯಗಳಿಂದ ನುರಿತ ಅಪರಾಧ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ ಎಂದು ತಿಳಿಸಿದರು.

Published by:ಪಾವನ ಎಚ್ ಎಸ್
First published: