news18-kannada Updated:June 22, 2020, 1:25 PM IST
ಬಿಜೆಪಿ ರಾಜ್ಯಾಧ್ಯಕ್ಷ
ನಳಿನ್ ಕುಮಾರ್ ಕಟೀಲ್.
ಬೆಂಗಳೂರು (ಜೂ. 22): ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ನೂತನ ಬಿಜೆಪಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆಪ್ತರಾಗಿದ್ದ ರುದ್ರೇಶ್ ಅವರನ್ನು ಎತ್ತಂಗಡಿ ಮಾಡಿ ರಾಮನಗರಕ್ಕೆ ಹೊಸ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬಿ.ವೈ. ವಿಜಯೇಂದ್ರ ಅವರಿಗೆ ಆಪ್ತರಾಗಿದ್ದ ರುದ್ರೇಶ್ ಅವರನ್ನು ರಾಮನಗರದ ಬಿಜೆಪಿ ಜಿಲ್ಲಾಧ್ಯಕ್ಷರನ್ನಾಗಿ ಮಾಡಲಾಗಿತ್ತು. ಆದರೆ, ಅವರನ್ನು ಎತ್ತಂಗಡಿ ಮಾಡಿರುವ ನಳಿನ್ ಕುಮಾರ್ ಕಟೀಲ್ ರಾಮನಗರಕ್ಕೆ ಬಿಜೆಪಿ ನೂತನ ಜಿಲ್ಲಾಧ್ಯಕ್ಷರನ್ನಾಗಿ ಹುಲುವಾಡಿ ದೇವರಾಜ್ ಅವರನ್ನು ನೇಮಕ ಮಾಡಿದ್ದಾರೆ.
ಇದನ್ನೂ ಓದಿ: ಹೊರ ರಾಜ್ಯಗಳ ಪ್ರಯಾಣಿಕರಿಗೆ 14 ದಿನ ಕ್ವಾರಂಟೈನ್; ಮತ್ತೆ ನಿಯಮ ಬದಲಿಸಿದ ಕರ್ನಾಟಕ ಸರ್ಕಾರ
ರುದ್ರೇಶ್ ಬದಲಾಗಿ ಹುಲುವಾಡಿ ದೇವರಾಜ್ ಅವರನ್ನು ರಾಮನಗರ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ಇಂದು ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ. ಹಾಗೇ, ತುಮಕೂರು ಜಿಲ್ಲಾಧ್ಯಕ್ಷರಾಗಿ ಮಾಜಿ ಶಾಸಕ ಬಿ. ಸುರೇಶ ಗೌಡ ಅವರನ್ನು ನೇಮಕ ಮಾಡಲಾಗಿದೆ.
First published:
June 22, 2020, 1:25 PM IST