HOME » NEWS » State » NANJANAGUDU DOCTOR SUICIDE CASE RS 30 LAKH COMPENSATION TO FAMILY ORDERED TO PROBE MINISTER SUDHAKAR ASSURED MAK

ಆರೋಗ್ಯಾಧಿಕಾರಿಯ ಆತ್ಮಹತ್ಯೆ ಪ್ರಕರಣ: ಕುಟುಂಬಕ್ಕೆ 30 ಲಕ್ಷ ಪರಿಹಾರ, ತನಿಖೆಗೆ ಆದೇಶ; ಸಚಿವ ಸುಧಾಕರ್‌ ಆಶ್ವಾಸನೆ

ನಾಗೇಂದ್ರ ಅವರು ಜನಪರ, ಸಹೃದಯಿ ಹಾಗೂ ಬಹಳ ಸೂಕ್ಷ್ಮ ಮನಸ್ಸಿನವರು ಎಂದು ತಿಳಿದು ಬಂದಿದೆ. ಒಬ್ಬ ವೈದ್ಯನಾಗಿ ಅವರ ಸಾವಿನ ನೋವು ನನಗೂ ಅರ್ಥವಾಗುತ್ತದೆ. ಅವರ ಸಾವಿನ ತನಿಖೆಗೆ ಆದೇಶ ಮಾಡಿದ್ದು, ಕುಟುಂಬಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಸಚಿವ ಸುಧಾಕರ್ ಭರವಸೆ ನೀಡಿದ್ದಾರೆ.

news18-kannada
Updated:August 20, 2020, 10:17 PM IST
ಆರೋಗ್ಯಾಧಿಕಾರಿಯ ಆತ್ಮಹತ್ಯೆ ಪ್ರಕರಣ: ಕುಟುಂಬಕ್ಕೆ 30 ಲಕ್ಷ ಪರಿಹಾರ, ತನಿಖೆಗೆ ಆದೇಶ; ಸಚಿವ ಸುಧಾಕರ್‌ ಆಶ್ವಾಸನೆ
ಸಚಿವ ಡಾ.ಕೆ.ಸುಧಾಕರ್
  • Share this:
ಬೆಂಗಳೂರು: ಮೈಸೂರಿನ ನಂಜನಗೂಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಕೊರೋನಾ ವಾರಿಯರ್‌ ಆರೋಗ್ಯಾಧಿಕಾರಿ ಡಾ.ಎಸ್.ಆರ್. ನಾಗೇಂದ್ರ ಅವರ ಕುಟುಂಬಕ್ಕೆ ನಮ್ಮ ಸರ್ಕಾರ ಕೂಡಲೇ 30 ಲಕ್ಷ ರೂ. ಪರಿಹಾರ ಘೋಷಿಸಿದೆ. ಅಲ್ಲದೆ, ಅವರ ಸಾವಿನ ಕುರಿತು ತನಿಖೆಗೆ ಆದೇಶಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದ್ದಾರೆ.

ನಂಜನಗೂಡಿನ ವೈದ್ಯಾಧಿಕಾರಿ ನಾಗೇಂದ್ರ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರ ಸಾವು ಇದೀಗ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ. ಈ ಕುರಿತು ಇಂದು ಸಂಜೆ ಬೆಂಗಳೂರಿನಲ್ಲಿ ಮಾತನಾಡಿರುವ ಸಚಿವ ಡಾ| ಕೆ. ಸುಧಾಕರ್‌, "ವೈದ್ಯಾಧಿಕಾರಿಯ ಸಾವನ್ನು ಅನ್ಯ ಕಾರಣಗಳಿಗೆ ದುರ್ಬಳಕೆ ಮಾಡಬಾರದು. ನಾಗೇಂದ್ರ ಅವರ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗವನ್ನು ಕೂಡ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ.

ಮೃತರ ಕುಟುಂಬದೊಂದಿಗೆ ಸರ್ಕಾರ ಸದಾ ಬೆಂಬಲವಾಗಿ ನಿಲ್ಲಲಿದೆ. ವೈದ್ಯಾಧಿಕಾರಿಗಳ ಸಂಘದೊಂದಿಗೆ ಈಗಾಗಲೇ ಮಾತುಕತೆ ನಡೆಸಿದ್ದು, ಇನ್ನು ಮುಂದೆ ಇಂತಹ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು. ನಾಗೇಂದ್ರ ಅವರ ಸಾವಿನಲ್ಲಿ ಗೊಂದಲ ಸೃಷ್ಟಿ ಮಾಡುವುದು ಅಮಾನವೀಯ. ಘಟನೆ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನ್ಯಾಯ ದೊರಕಿಸಿಕೊಡಲಾಗುವುದು" ತಿಳಿಸಿದ್ದಾರೆ.

ಇದನ್ನೂ ಓದಿ : ವಿನಯ್‌ ಗುರೂಜಿ ಭಕ್ತರು ಎಂಜಲು ತಿನ್ನಿಸಿದರು; ಕೈ ನಾಯಕ ರಘು ಆಚಾರ್‌ ಆರೋಪಕ್ಕೆ ಶರವಣ ಟಾಂಗ್

ತನಿಖೆಗೆ ಆದೇಶ:

"ನಾಗೇಂದ್ರ ಅವರು ಜನಪರ, ಸಹೃದಯಿ ಹಾಗೂ ಬಹಳ ಸೂಕ್ಷ್ಮ ಮನಸ್ಸಿನವರು ಎಂದು ತಿಳಿದು ಬಂದಿದೆ. ಒಬ್ಬ ವೈದ್ಯನಾಗಿ ಅವರ ಸಾವಿನ ನೋವು ನನಗೂ ಅರ್ಥವಾಗುತ್ತದೆ. ಅವರ ಸಾವಿನ ತನಿಖೆಗೆ ಆದೇಶ ಮಾಡಿದ್ದು, ಕುಟುಂಬಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ" ಎಂದು ಸಚಿವ ಸುಧಾಕರ್ ಭರವಸೆ ನೀಡಿದ್ದಾರೆ.
"ಕೊರೋನಾ ವಾರಿಯರ್ ಗಳ ಕಷ್ಟಕ್ಕೆ ಸರ್ಕಾರ ಸದಾ ಸ್ಪಂದಿಸುತ್ತದೆ. ವೈದ್ಯ ಸಿಬ್ಬಂದಿ ಕೆಲಸದ ಒತ್ತಡದಿಂದ ಮಾನಸಿಕ ಒತ್ತಡಕ್ಕೊಳಗಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ರಜೆ, ಒತ್ತಡ ಕಡಿಮೆ ಮಾಡಲು ಎಲ್ಲ ಬಗೆಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಕೊರೋನಾ ವಾರಿಯರ್ ಗಳಿಗೆ ಏನೇ ಒತ್ತಡಗಳಿದ್ದರೂ ಮೇಲಧಿಕಾರಿಗಳ ಬಳಿ ಹೇಳಿಕೊಳ್ಳಬೇಕು" ಎಂದು ಈ ವೇಳೆ ಸಚಿವರು ಕೋರಿದ್ದಾರೆ.
Published by: MAshok Kumar
First published: August 20, 2020, 10:17 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories