National Education Day 2020: ಇಂದು ರಾಷ್ಟ್ರೀಯ ಶಿಕ್ಷಣ ದಿನ; ಸ್ವತಂತ್ರ ಭಾರತದ ಮೊದಲ ಶಿಕ್ಷಣ ಮಂತ್ರಿ ಬಗ್ಗೆ ನಿಮಗೆಷ್ಟು ಗೊತ್ತು?

Birth Anniversary of Maulana Abul Kalam Azad: 2008ರ ನವೆಂಬರ್ 11ರಿಂದ ಪ್ರತೀ ವರ್ಷ ಆ ದಿನವನ್ನು ರಜಾದಿನವನ್ನಾಗಿ ಘೋಷಿಸದೆ, ರಾಷ್ಟ್ರೀಯ ಶಿಕ್ಷಣ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ತಿಳಿಸಿದೆ.

ಪಂಡಿತ್ ಜವಾಹರ್ ಲಾಲ್ ನೆಹರೂ ಜೊತೆಗೆ ಮೌಲಾನಾ ಅಬುಲ್ ಕಲಾಂ ಅಜಾದ್

ಪಂಡಿತ್ ಜವಾಹರ್ ಲಾಲ್ ನೆಹರೂ ಜೊತೆಗೆ ಮೌಲಾನಾ ಅಬುಲ್ ಕಲಾಂ ಅಜಾದ್

 • Share this:
  ನವದೆಹಲಿ(ನ.11): ಇಂದು ರಾಷ್ಟ್ರೀಯ ಶಿಕ್ಷಣ ದಿನ. ಪ್ರತೀವರ್ಷ ನವೆಂಬರ್ 11ನ್ನು ರಾಷ್ಟ್ರೀಯ ಶಿಕ್ಷಣ ದಿನವನ್ನಾಗಿ ಆಚರಿಸಲಾಗುತ್ತದೆ. ಮೌಲಾನಾ ಅಬುಲ್ ಕಲಾಂ ಅಜಾದ್ ಅವರ ಜನ್ಮದಿನದ ಸಂಕೇತವಾಗಿ ಈ ದಿನವನ್ನು ರಾಷ್ಟ್ರೀಯ ಶಿಕ್ಷಣ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ.ಅಜಾದ್ ಅವರು ಪಂಡಿತ್ ಜವಾಹಾರ್​ ಲಾಲ್ ನೆಹರೂ ಅವರ ಸಂಪುಟದಲ್ಲಿ 1947ರಿಂದ 1958ರವರೆಗೆ ಮೊದಲ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಮೌಲಾನಾ ಅವರು ಒಬ್ಬ ಸಮಾಜ ಸುಧಾರಕ, ಸ್ವಾತಂತ್ರ್ಯ ಹೋರಾಟಗಾರ. ಶಿಕ್ಷಣದ ಮೂಲಕ ದೇಶ ಕಟ್ಟುವ ಕನಸನ್ನು ಕಂಡಿದ್ದವರು. ಮೌಲಾನಾ ಅವರು ಸ್ವತಂತ್ರ್ಯ ಭಾರತದ ಮೊದಲ ಶಿಕ್ಷಣ ಮಂತ್ರಿಗಳಾಗಿದ್ದರು. 1947ರ ಆಗಸ್ಟ್​ 15ರಿಂದ 1958ರ ಫೆಬ್ರವರಿ 2ರವರೆಗೆ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

  ಶಿಕ್ಷಣ ಕ್ಷೇತ್ರಕ್ಕೆ ಮೌಲಾನಾ ಅವರು ನೀಡಿರುವ ಕೊಡುಗೆ ಅಮೋಘವಾದದ್ದು. ಹೀಗಾಗಿ ಅವರು ಜನಿಸಿದ ದಿನವನ್ನು ರಾಷ್ಟ್ರೀಯ ಶಿಕ್ಷಣ ದಿನವನ್ನಾಗಿ ಆಚರಿಸೋಣ ಎಂಬ ನಿರ್ಧಾರಕ್ಕೆ ಬರಲಾಯಿತು. ಹೀಗಾಗಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು 2008ರ ಸೆಪ್ಟೆಂಬರ್ 11ರಂದು ಮೌಲಾನಾ ಅವರ ಜನ್ಮದಿನವನ್ನು ರಾಷ್ಟ್ರೀಯ ಶಿಕ್ಷಣ ದಿನವನ್ನಾಗಿ ಘೋಷಿಸಿತು.

  Bangalore Fire Accident: ಬೆಂಗಳೂರಿನ ಕೆಮಿಕಲ್ ಫ್ಯಾಕ್ಟರಿ ಗೋಡೌನ್​ ಸ್ಫೋಟಕ್ಕೆ ಕಾರಣವಾಯ್ತು ಮಾಲೀಕನ ಆ ಒಂದು ತಪ್ಪು!

  2008ರ ನವೆಂಬರ್ 11ರಿಂದ ಪ್ರತೀ ವರ್ಷ ಆ ದಿನವನ್ನು ರಜಾದಿನವನ್ನಾಗಿ ಘೋಷಿಸದೆ, ರಾಷ್ಟ್ರೀಯ ಶಿಕ್ಷಣ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ತಿಳಿಸಿದೆ.

  ಪ್ರತೀ ವರ್ಷ ನವೆಂಬರ್​ 11ರಂದು ಶಾಲೆಗಳಲ್ಲಿ ವಿವಿಧ ಸೆಮಿನಾರ್​​​ಗಳು, ಪ್ರಬಂಧ ಬರಹ, ರ್ಯಾಲಿಗಳನ್ನು ಹಮ್ಮಿಕೊಳ್ಳುವ ಮೂಲಕ ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಗುತ್ತಿತ್ತು. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಒಟ್ಟಾಗಿ ಸೇರಿ ಸಾಕ್ಷರತೆಯ ಮಹತ್ವ ಮತ್ತು ದೇಶ ಕಟ್ಟುವಲ್ಲಿ ಶಿಕ್ಷಣದ ಪಾತ್ರವೇನು ಎಂಬುದರ ಬಗ್ಗೆ ಚರ್ಚಿಸುತ್ತಿದ್ದರು. ಆದರೆ ಈ ವರ್ಷ ಕೊರೋನಾ ಕಾರಣದಿಂದಾಗಿ ಶಾಲೆಗಳು ಮುಚ್ಚಿವೆ. ಹೀಗಾಗಿ ಇಂತಹ ಯಾವುದೇ ಚರ್ಚೆಗೆ ಅವಕಾಶವಿಲ್ಲ.
  Published by:Latha CG
  First published: