Mysuru Gang Rape Case| ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಿ; ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರತಿಭಟನೆ

ರೇಸ್‌ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಮುಂದೆ ಪ್ರತಿಭಟನೆ ನಡೆಸಿರುವ ಕಾರ್ಯಕರ್ತರು ಅತ್ಯಾಚಾರಿಗಳನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿದ್ದಾರೆ. ಅಲ್ಲದೆ, ಪ್ರತಿಕೃತಿ ದಹಿಸಲು ಯತ್ನಿಸಿದ ವೇಳೆ ಅನಿವಾರ್ಯವಾಗಿ ಪೊಲೀಸರು ಪ್ರತಿಭಟನಾ ನಿರತ ಕಾರ್ಯಕರ್ತರನ್ನು ತಡೆದು ಕೊನೆಗೆ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ಬೆಂಗಳೂರು (ಆಗಸ್ಟ್​ 28; ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ (Mysore) ವಿದ್ಯಾರ್ಥಿನಿ ಮೇಲೆ ನಡೆದಿದ್ದ ಗ್ಯಾಂಗ್​ ರೇಪ್​ (Gang Rape) ಇದೀಗ ಇಡೀ ರಾಜ್ಯಾದ್ಯಂತ ದೊಡ್ಡ ಸುದ್ದಿಯಾಗುತ್ತಿದೆ. ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಜಿದ್ದಾಜಿದ್ದಿ ವಾಕ್ಸಮರಕ್ಕೂ ಈ ಘಟನೆ ವೇದಿಕೆಯಾಗಿದೆ. ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ (araga jnanendra) ಮತ್ತು ಡಿಜಿಪಿ ಪ್ರವೀಣ್ ಸೂದ್ (Praveen Sood) ಘಟನಾ ಸ್ಥಳಕ್ಕೆ ತೆರಳಿ ಈಗಾಗಲೇ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಡಿಜಿಪಿ ಪ್ರವೀಣ್ ಸೂದ್ ಪಪತ್ರಿಕಾಗೋಷ್ಠಿ ನಡೆಸಿ ಅತ್ಯಾಚಾರ ಘಟನೆಯ ಮಾಹಿತಿಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರಿಗೆ ಅಭಿನಂದನೆ ತಿಳಿಸಿದ್ದಾರೆ.

  ಆದರೆ, ಈ ನಡುವೆ ಮೈಸೂರು ಯುವತಿಯ ಸಾಮೂಹಿಕ ಅತ್ಯಾಚಾರವನ್ನು ಖಂಡಿಸಿರುವ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿದೆ. ರೇಸ್‌ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಮುಂದೆ ಪ್ರತಿಭಟನೆ ನಡೆಸಿರುವ ಕಾರ್ಯಕರ್ತರು ಅತ್ಯಾಚಾರಿಗಳನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿದ್ದಾರೆ. ಅಲ್ಲದೆ, ಪ್ರತಿಕೃತಿ ದಹಿಸಲು ಯತ್ನಿಸಿದ ವೇಳೆ ಅನಿವಾರ್ಯವಾಗಿ ಪೊಲೀಸರು ಪ್ರತಿಭಟನಾ ನಿರತ ಕಾರ್ಯಕರ್ತರನ್ನು ತಡೆದು ಕೊನೆಗೆ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

  ಏನಿದು ಘಟನೆ? ಡಿದಿದ್ದ ಆರೋಪಿಗಳು

  ಸದ್ಯ ಸಿಕ್ಕಿರುವ ಮಾಹಿತಿ ಪ್ರಕಾರ, ಆರೋಪಿಗಳು ಕಂಠಪೂರ್ತಿ ಕುಡಿದು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದು ಬಂದಿದೆ. ಅದಕ್ಕೆ ಸಾಕ್ಷಿಯಾಗಿ ಘಟನೆ ನಡೆದ ಸ್ಥಳದಲ್ಲಿ ಬಿಯರ್ ಬಾಟಲ್​​ಗಳು ಬಿದ್ದಿದ್ದವು. ಜೊತೆಗೆ ಕಾಮುಕರು ಕಂಠಪೂರ್ತಿ ಕುಡಿದಿದ್ದರು ಎಂದು ಸಂತ್ರಸ್ಥೆ ಹಾಗೂ ಯುವಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಪೊಲೀಸರು ಘಟನಾ ಸ್ಥಳದ ಸುತ್ತಮುತ್ತ ಇರುವ ಬಾರ್​ ಆ್ಯಂಡ್​ ರೆಸ್ಟೋರೆಂಟ್​​ಗಳ ಸಿಸಿಟಿವಿ ದೃಶ್ಯವನ್ನು ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

  3 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ಕಾಮುಕರು;

  ವಿದ್ಯಾರ್ಥಿನಿಯನ್ನು ರೇಪ್​ ಮಾಡಿದ ಕಾಮುಕರು ಆಕೆಯ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಮತ್ತೊಂದು ಅಂಶ ಬೆಳಕಿಗೆ ಬಂದಿದೆ. ಸುಮಾರು 3 ಲಕ್ಷ ರೂಪಾಯಿ ಹಣಕ್ಕೆ ಡಿಮ್ಯಾಂಡ್​ ಮಾಡಿದ್ದರು. ಇದಕ್ಕೆ ಸಂತ್ರಸ್ಥೆ ಹಾಗೂ ಆಕೆಯ ಗೆಳೆಯ ಕೂಡ ಒಪ್ಪಿದ್ದರು. ಆದರೆ ಹಣ ಕೇಳಿ 2 ಗಂಟೆಯಾದರೂ ಸಂತ್ರಸ್ಥೆ ಹಣ ಕೊಡಲು ಸಾಧ್ಯವಾಗದಿದ್ದಾಗ, ಕಾಮುಕರು ಆಕೆಯ ಸ್ನೇಹಿತನ ಮೇಲೆ ಹಲ್ಲೆ ಮಾಡಿದ್ದಾರೆ. ಜೊತೆಗೆ ಕಲ್ಲಿನಿಂದ ಹೊಡೆದು ಇಬ್ಬರ ಮೊಬೈಲ್​​ ಕಿತ್ತುಕೊಂಡು ಹೋಗಿದ್ದಾರೆ ಎಂದು ಪೊಲೀಸ್​ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

  ಇದನ್ನೂ ಓದಿ: ಜನ ಉಗಿಯುವ ಮುನ್ನ ರಾಜೀನಾಮೆ ನೀಡುವುದು ಉತ್ತಮ; ವೈರಲ್ ಆಗುತ್ತಿದೆ ಬಿಜೆಪಿ ನಾಯಕನ ರಾಜೀನಾಮೆ ಪತ್ರ

  ದೂರು ಕೊಟ್ಟರೆ ವಿಡಿಯೋ ಲೀಕ್​?

  ಇನ್ನು, ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಕಾಮುಕರು ದೂರು ಕೊಡದಂತೆ ಆಕೆಗೆ ಬೆದರಿಕೆ ಹಾಕಿದ್ದರು ಎನ್ನಲಾಗುತ್ತಿದೆ. ರೇಪ್​ ಮಾಡಿ ವಿಡಿಯೋ ಮಾಡಿಕೊಂಡಿದ್ದ ಆರೋಪಿಗಳು, ಪೊಲೀಸರಿಗೆ ದೂರು ಕೊಟ್ಟರೆ ರೇಪ್​ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದರು ಎಂಬ ಅಂಶವೂ ಬೆಳಕಿಗೆ ಬಂದಿದೆ.  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
  Published by:MAshok Kumar
  First published: