Nayana Motamma ಖಾಸಗಿ ಫೋಟೋ ವೈರಲ್; ನಟ ಚೇತನ್ ಹೇಳಿದ್ದು ಹೀಗೆ

ಶಾಸಕಿ ನಯನ ಮೋಟಮ್ಮ, ನಟ ಚೇತನ್

ಶಾಸಕಿ ನಯನ ಮೋಟಮ್ಮ, ನಟ ಚೇತನ್

Congress MLA: ದೃಢವಾಗಿ ನಿಂತಿರುವ ಶಾಸಕರಿಗೆ ಅಭಿನಂದನೆಗಳು-- ಪೊಲೀಸರು ತಪ್ಪು ಮಾಡಿದವರ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಚೇತನ್ ಆಗ್ರಹಿಸಿದ್ದಾರೆ.

  • News18 Kannada
  • 2-MIN READ
  • Last Updated :
  • Chikmagalur, India
  • Share this:

ಬೆಂಗಳೂರು: ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ (Congress MLA Nayana Motamma) ಅವರ ಖಾಸಗಿ ಫೋಟೋಗಳನ್ನು ಕೆಟ್ಟ ಶೀರ್ಷಿಕೆಗಳೊಂದಿಗೆ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಶೇರ್ ಮಾಡುವ ಮೂಲಕ ಚಾರಿತ್ರ್ಯಹರಣಕ್ಕೆ ಮುಂದಾಗುತ್ತಿದ್ದಾರೆ. ನಯನಾ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ (Social Media) ಹಂಚಿಕೊಂಡಿರುವ ಫೋಟೋಗಳನ್ನು ನಿಂದನಾತ್ಮಕ ಶೀರ್ಷಿಕೆಯೊಂದಿಗೆ ಶೇರ್ ಮಾಡಲಾಗುತ್ತಿದೆ. ಈ ಫೋಟೋಗಳಿಗೆ ನಯನಾ ಮೋಟಮ್ಮ ಸಹ ತೀಕ್ಷ್ಣವಾಗಿಯೇ ಪ್ರತಿಕ್ರಿಯಿಸಿದ್ದು, ಖಾಸಗಿ ಮತ್ತು ರಾಜಕೀಯ ಜೀವನಕ್ಕೂ ವ್ಯತ್ಯಾಸ ಇರಲ್ಲವಾ ಎಂದು ಪ್ರಶ್ನೆ ಮಾಡಿದ್ದಾರೆ. ಇದೀಗ ಈ ಬಗ್ಗೆ ನಟ, ಸಾಮಾಜಿಕ ಹೋರಾಟಗಾರ ಚೇತನ್ ಕುಮಾರ್ (Actor Chetan Kumar) ಪ್ರತಿಕ್ರಿಯೆ ನೀಡಿದ್ದಾರೆ.


ಹೊಸದಾಗಿ ಚುನಾಯಿತ ಶಾಸಕಿ ನಯನಾ ಮೋಟಮ್ಮ ಅವರ ಖಾಸಗಿ ಚಿತ್ರಗಳನ್ನು ಪ್ರಕಟಿಸುವ ಮೂಲಕ ರಾಜಕೀಯ ಪ್ರತಿಸ್ಪರ್ಧಿಗಳು ಅವರ ಮರ್ಯಾದೆ ಹತ್ಯೆಗೆ ಯತ್ನಿಸಿದ್ದಾರೆ ಎಂದು ಚೇತನ್ ಕಿಡಿಕಾರಿದ್ದಾರೆ.
ತಪ್ಪು ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹ


ಭಾರತದಲ್ಲಿನ ಎಲ್ಲಾ ಮಹಿಳೆಯರು ವಿವಿಧ ಹಂತಗಳಲ್ಲಿ ಪುರುಷಪ್ರಧಾನ ವ್ಯವಸ್ಥೆಗೆ ಬಲಿಪಶುಗಳಾಗಿದ್ದಾರೆ/ಬಲಿಪಶುಳಾಗುತ್ತಿದ್ದಾರೆ ಮತ್ತು ಅಧಿಕಾರದ ಉನ್ನತ ಸ್ಥಾನಗಳಿಗೆ ಏರುವ ಮಹಿಳೆಯರು ಅದನ್ನು ಸಾರ್ವಜನಿಕ ರೀತಿಯಲ್ಲಿ ಎದುರಿಸುತ್ತಾರೆ.


ಇದನ್ನೂ ಓದಿ:  Kerala Government: ವಲಸೆ ಕಾರ್ಮಿಕರಿಗೂ ಸ್ಥಳೀಯ ಭಾಷೆ ಕಲಿಸುವ ಯೋಜನೆ, ಕೇರಳದಲ್ಲೊಂದು ‘ಅನನ್ಯ’ ಕ್ರಮ!


ದೃಢವಾಗಿ ನಿಂತಿರುವ ಶಾಸಕರಿಗೆ ಅಭಿನಂದನೆಗಳು-- ಪೊಲೀಸರು ತಪ್ಪು ಮಾಡಿದವರ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಚೇತನ್ ಆಗ್ರಹಿಸಿದ್ದಾರೆ.ಸೋಲಿನ ಹತಾಶೆ ಕಾಡದಿರಲಿ

top videos


    ಸೋಲಿನ ಹತಾಶೆ ನಿಮ್ಮನ್ನ ಇನ್ನಷ್ಟು ಕಾಡದಿರಲಿ. ಹೌದು, ರಾಜಕೀಯ, ನಾನು, ನನ್ನತನ, ನನ್ನ ವೈಯುಕ್ತಿಕ ಜೀವನ ಇವೆಲ್ಲದರ ವ್ಯತ್ಯಾಸ ತಿಳಿಯದ ಅವಿವೇಕಿಗಳಿಗೆ ಉತ್ತರವಿದು ಎಂದು ಟ್ವಟರ್​ನಲ್ಲಿ ವಿಡಿಯೋವನ್ನು ನಯನಾ ಮೋಟಮ್ಮ ಹಂಚಿಕೊಂಡಿದ್ದಾರೆ.

    First published: