ಪದವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ; ರಾಜ್ಯದಲ್ಲಿ 11 ಹೊಸ ಪ್ರಥಮ ದರ್ಜೆ ಸಂಜೆ ಕಾಲೇಜುಗಳು ಆರಂಭ

2021-22ನೇ ಸಾಲಿನ ಆಯವ್ಯಯ ಭಾಷಣದ ಘೋಷಣೆಯಂತೆ ಪ್ರಕಟ ಮಾಡಲಾಗಿದೆ. ರಾಜ್ಯದ ಆಯ್ದ ಮಹಾನಗರ ಪಾಲಿಕೆಗಳಲ್ಲಿ ಪ್ರಾಯೋಗಿಕವಾಗಿ ಸಂಜೆ ಕಾಲೇಜುಗಳನ್ನು ಪ್ರಾರಂಭ ಮಾಡಲಾಗುತ್ತಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ಬೆಂಗಳೂರು(ಆ.25): ಪದವಿ ವಿದ್ಯಾರ್ಥಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.  ಸರ್ಕಾರಿ ಹೆಚ್ಚುವರಿ ಸಂಜೆ ಕಾಲೇಜುಗಳ  ವ್ಯಾಸಂಗಕ್ಕೆ ಸರ್ಕಾರ ಅವಕಾಶ ನೀಡಿದೆ. ಹೀಗಾಗಿ  ರಾಜ್ಯದಲ್ಲಿ ಹೊಸದಾಗಿ 11 ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜುಗಳು ಓಪನ್ ಆಗುತ್ತಿವೆ. 11 ನಗರ ಪಾಲಿಕೆಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜುಗಳನ್ನು ತೆರೆಯಲಾಗುತ್ತಿದೆ. ಸಂಧ್ಯಾ ಶಕ್ತಿ ಯೋಜನೆಯಡಿ ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜು ಪ್ರಾರಂಭಕ್ಕೆ ಗ್ರೀನ್​ ಸಿಗ್ನಲ್​ ಕೊಡಲಾಗಿದೆ.

  ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಟಿ.ಸಿ.ಕಾಂತರಾಜ್ ಆ ಆದೇಶ ಹೊರಡಿಸಿದ್ದಾರೆ. 2021-22ನೇ ಸಾಲಿನ ಆಯವ್ಯಯ ಭಾಷಣದ ಘೋಷಣೆಯಂತೆ ಪ್ರಕಟ ಮಾಡಲಾಗಿದೆ. ರಾಜ್ಯದ ಆಯ್ದ ಮಹಾನಗರ ಪಾಲಿಕೆಗಳಲ್ಲಿ ಪ್ರಾಯೋಗಿಕವಾಗಿ ಸಂಜೆ ಕಾಲೇಜುಗಳನ್ನು ಪ್ರಾರಂಭ ಮಾಡಲಾಗುತ್ತಿದೆ.

  ಕಾಲೇಜುಗಳಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ಮೂಲ ಸೌಕರ್ಯಗಳನ್ನು ಬಳಕೆ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಅತಿ ಹೆಚ್ಚಾಗಿ ಆಯ್ಕೆ ಮಾಡಿಕೊಳ್ಳುವ ಉತ್ತಮ ಉದ್ಯೋಗಾವಕಾಶಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಅವಕಾಶ ಕಲ್ಪಿಸುವ ಗುರಿಯನ್ನು ಹೊಂದಿವೆ. ಬಿ.ಕಾಂ ಮತ್ತು ಬಿಸಿಎ ಕೋರ್ಸ್ ಗಳಿಗಷ್ಟೇ ಹೆಚ್ಚುವರಿ ಸಂಜೆ ಕಾಲೇಜು ವ್ಯವಸ್ಥೆ ಮಾಡಲಾಗಿದೆ.

  ಇದನ್ನೂ ಓದಿ:Sonu Sood: ಎಲೆಕ್ಷನ್​​ಗೆ ನಿಲ್ತಾರಾ ನಟ ಸೋನು ಸೂದ್? ಅವರು ಕೊಟ್ಟ ಸ್ಪಷ್ಟನೆ ಹೀಗಿದೆ..!

  ಹೊಸದಾಗಿ ಆರಂಭವಾಗುತ್ತಿರುವ 11 ಸಂಜೆ ಕಾಲೇಜುಗಳ ಪಟ್ಟಿ

  1. ಸರ್ಕಾರಿ ಆರ್.ಸಿ ಕಾಲೇಜು, ಬೆಂಗಳೂರು

  2. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಬೆಳಗಾವಿ

  3. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಿ.ಹೆಚ್.ರಸ್ತೆ ತುಮಕೂರು

  4. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುವೆಂಪು ನಗರ ಮೈಸೂರು

  5. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶಿವಮೊಗ್ಗ

  6. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂ.ಸಿಸಿ ಬ್ಲಾಕ್ ದಾವಣಗೆರೆ

  7. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ, ಮಂಗಳೂರು

  8. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುಮಾರೇಶ್ವರನಗರ, ಧಾರವಾಡ

  9. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ನವಬಾಗ್ ಖಾಜಾ ಕಾಲೋನಿ, ಬಿಜಾಪುರ

  10. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸೇಡಂ ರಸ್ತೆ, ಗುಲ್ಬರ್ಗಾ

  11. ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಳ್ಳಾರಿ

  ಇದನ್ನೂ ಓದಿ:Love Failure: ಎಲ್ಲವೂ ಪ್ರೀತಿಗಾಗಿ, ಕೇರಳದಲ್ಲಿ ಕಳೆದ 5 ವರ್ಷದಲ್ಲಿ 350 ಯುವತಿಯರ ಸಾವು..!

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
  Published by:Latha CG
  First published: