Oath Ceremony: ಇಂದು ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

ಬಿಜೆಪಿ 12 ಕ್ಷೇತ್ರಗಳಲ್ಲಿ ಗೆದ್ದು ಸರ್ಕಾರ ಭದ್ರಪಡಿಸಿಕೊಂಡಿದೆ. ಕನಿಷ್ಠ 9 ಕ್ಷೇತ್ರಗಳಲ್ಲಿ ಗೆಲುವು ಕಾಣುವ ನಿರೀಕ್ಷೆ ಇಟ್ಟುಕೊಂಡಿದ್ದ ಕಾಂಗ್ರೆಸ್ ಪಕ್ಷ ಕೇವಲ 2 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ. ಹುಣಸೂರು ಮತ್ತು ಶಿವಾಜಿನಗರ ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಉಳಿದ ಕ್ಷೇತ್ರಗಳು ಪಕ್ಷದ ಕೈ ತಪ್ಪಿವೆ.

news18-kannada
Updated:December 22, 2019, 8:13 PM IST
Oath Ceremony: ಇಂದು ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು(ಡಿ.22): ಕರ್ನಾಟಕ ವಿಧಾನಸಭಾ ಉಪಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿದ ನೂತನ ಶಾಸಕರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಂದ ಆಯ್ಕೆಯಾಗಿರುವ ಎಲ್ಲಾ ನೂತನ ವಿಧಾನಸಭಾ ಸದಸ್ಯರು ಶಾಸಕರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನಸೌಧದ ಬಾಂಕ್ವೇಟ್ ಹಾಲ್​​ನಲ್ಲಿ ಈ ಸಮಾರಂಭ ನಡೆಯಲಿದೆ. ರಾಜ್ಯ ವಿಧಾನಸಭಾ ಸ್ಪೀಕರ್​​ ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ಕಾಂಗ್ರೆಸ್​​-ಜೆಡಿಎಸ್​​ ತೊರೆದು ಉಪಚುನಾವಣೆಯಲ್ಲಿ ಬಿಜೆಪಿಯಿಂದ ಗೆದ್ದ ಕೆ.ಆರ್ ಪುರಂ ಕ್ಷೇತ್ರದ ಭೈರತಿ ಬಸವರಾಜ, ಯಶವಂತಪುರದ ಎಸ್.ಟಿ ಸೋಮಶೇಖರ್, ಚಿಕ್ಕಬಳ್ಳಾಪುರದ ಡಾ.ಕೆ ಸುಧಾಕರ್, ಕೆ.ಆರ್ ಪೇಟೆಯ ಕೆ.ಸಿ.ನಾರಾಯಣಗೌಡ, ಹಿರೇಕೆರೂರು ಕ್ಷೇತ್ರದ ಬಿ.ಸಿ ಪಾಟೀಲ್, ಗೋಕಾಕ್​​ನ ರಮೇಶ್ ಜಾರಕಿಹೊಳಿ, ಅಥಣಿಯ ಮಹೇಶ್ ಕಮಟಳ್ಳಿ, ರಾಣೇಬೆನ್ನೂರಿನ ಅರುಣ್‌ಕುಮಾರ್, ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಕೆ. ಗೋಪಾಲಯ್ಯ, ವಿಜಯನಗರದ ಆನಂದ್‌ಸಿಂಗ್, ಕಾಗವಾಡದ ಶ್ರೀಮಂತ ಪಾಟೀಲ್, ಯಲ್ಲಾಪುರದ ಶಿವರಾಮ್ ಹೆಬ್ಬಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹಾಗಯೇ ಇದೇ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಗೆದ್ದ​​ ಶಿವಾಜಿನಗರದ ರಿಜ್ವನ್​​ ಅರ್ಶದ್, ಹುಣಸೂರು ಕ್ಷೇತ್ರದ ಎಚ್.ಪಿ ಮಂಜುನಾಥ್ ಮತ್ತು ಹೊಸಕೋಟೆಯಲ್ಲಿ ಎಂಟಿ ನಾಗರಾಜ್​​ ವಿರುದ್ಧವೇ ಗೆದ್ದ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಕೂಡ ಪ್ರಮಾಣ ವಚನ ತೆಗೆದುಕೊಳ್ಳಲಿದ್ದಾರೆ.

ಇದನ್ನೂ ಓದಿ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್​ಗೆ 14 ದಿನ ಜೈಲು

ಡಿಸೆಂಬರ್​​ 5ನೇ ತಾರೀಕಿನಂದು ನಡೆದ ರಾಜ್ಯ ವಿಧಾನಸಭಾ ಉಪಚುನಾವಣೆ ಫಲಿತಾಂಶವೂ ಡಿ.9ರಂದೇ ಹೊರ ಬಿದ್ದಿದೆ. ಬಿಜೆಪಿ 12 ಕ್ಷೇತ್ರಗಳಲ್ಲಿ ಗೆದ್ದು ಸರ್ಕಾರ ಭದ್ರಪಡಿಸಿಕೊಂಡಿದೆ. ಕನಿಷ್ಠ 9 ಕ್ಷೇತ್ರಗಳಲ್ಲಿ ಗೆಲುವು ಕಾಣುವ ನಿರೀಕ್ಷೆ ಇಟ್ಟುಕೊಂಡಿದ್ದ ಕಾಂಗ್ರೆಸ್ ಪಕ್ಷ ಕೇವಲ 2 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ. ಹುಣಸೂರು ಮತ್ತು ಶಿವಾಜಿನಗರ ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಉಳಿದ ಕ್ಷೇತ್ರಗಳು ಪಕ್ಷದ ಕೈ ತಪ್ಪಿವೆ.
First published:December 22, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ