HOME » NEWS » State » NEW KANNADA COURSE STARTED BY MONEY DOT COM IN THEIR FINANCIAL FREEDOM APP HERE IS THE DETAILS AE

ನವೋದ್ಯಮಿಗಳನ್ನು ಪ್ರೋತ್ಸಾಹಿಸಲು ಮನಿ ಡಾಟ್ ಕಾಂನಿಂದ ಕನ್ನಡದಲ್ಲಿ ವಿಶೇಷ ಕೋರ್ಸ್​ ಲೋಕಾರ್ಪಣೆ

ಉದ್ಯಮ ಆರಂಭಿಸಿ, ಉದ್ಯಮಿಗಳಾಗಬೇಕು ಎಂದು ಬಯಸುವವರಿಗೆ ಅನುಕೂಲವಾಗುವಂತೆ ಕನ್ನಡ ಭಾಷೆಯಲ್ಲಿ ಇಂಡಿಯನ್ ಮನಿ ಡಾಟ್ ಕಾಂನ ಫೈನಾನ್ಶಿಯಲ್ ಫ್ರೀಡಂ ಆ್ಯಪ್​ನಲ್ಲಿ ವಿಶೇಷವಾಗಿ ಒಂದು ಕೋರ್ಸ್​ ಅನ್ನು ವಿನ್ಯಾಸಗೊಳಿಸಲಾಗಿದೆ.

Anitha E | news18-kannada
Updated:October 8, 2020, 1:05 PM IST
ನವೋದ್ಯಮಿಗಳನ್ನು ಪ್ರೋತ್ಸಾಹಿಸಲು ಮನಿ ಡಾಟ್ ಕಾಂನಿಂದ ಕನ್ನಡದಲ್ಲಿ ವಿಶೇಷ ಕೋರ್ಸ್​ ಲೋಕಾರ್ಪಣೆ
ನವೋದ್ಯಮಿಗಳಿಗಾಗಿ ಮಾಡಿರುವ ಕನ್ನಡದ ಹೊಸ ಕೋರ್ಸ್​ ಲೋಕಾರ್ಪಣೆ ಮಾಡಿದ ಎಫ್ ಕೆಸಿಸಿಐ ಅಧ್ಯಕ್ಷ ಪೆರಿಕಲ್
  • Share this:
ವಿದ್ಯಾಭ್ಯಾಸ ಪೂರ್ತಿ ಮಾಡಿದ ನಂತರ ಸಾಕಷ್ಟು ಮಂದಿ ಸರ್ಕಾರಿ ಕೆಲಸದ ಹುಡುಕಾಟದಲ್ಲಿ ಕಳೆದು ಹೋಗುತ್ತಾರೆ. ಅವರಲ್ಲಿ ಕೆಲವರಿಗಷ್ಟೆ ಸರ್ಕಾರಿ ಕೆಲಸ ಸಿಗುತ್ತದೆ. ಇನ್ನು ಉಳಿದವರು ಖಾಸಗಿ ಕಂಪೆನಿಗಳಲ್ಲಿ ಕೆಲಸಕ್ಕೆ ಸೇರಿ ತುತ್ತಿನ ಬುತ್ತಿ ತುಂಬಿಕೊಳ್ಳುವ ಪ್ರಯತ್ನದಲ್ಲಿರುತ್ತಾರೆ. ಆದರೆ ಇಂತಹ ಜನರ ನಡುವೆ ಕೆಲವೇ ಕೆಲವರು ಮಾತ್ರ ತಮ್ಮದೇ ಆದ ಉದ್ಯಮ ಆರಂಭಿಸಿ, ಯಶಸ್ಸು ಸಾಧಿಸುವ ಕನಸು ಕಾಣುವ ಧೈರ್ಯ ಮಾಡುತ್ತಾರೆ. ಅಂತಹವರಿಗಾಗಿಯೇ ಮಾರ್ಗದರ್ಶನ ನೀಡಲೆಂದು ಇಲ್ಲೊಂದು ಕೋರ್ಸ್​ ಆರಂಭಿಸಲಾಗಿದೆ. ಉದ್ಯಮ ಆರಂಭಿಸಿ, ಉದ್ಯಮಿಗಳಾಗಬೇಕು ಎಂದು ಬಯಸುವವರಿಗೆ ಅನುಕೂಲವಾಗುವಂತೆ ಕನ್ನಡ ಭಾಷೆಯಲ್ಲಿ ಇಂಡಿಯನ್ ಮನಿ ಡಾಟ್ ಕಾಂನ ಫೈನಾನ್ಶಿಯಲ್ ಫ್ರೀಡಂ ಆ್ಯಪ್​ನಲ್ಲಿ ವಿಶೇಷವಾಗಿ ಒಂದು ಕೋರ್ಸ್​ ಅನ್ನು ವಿನ್ಯಾಸಗೊಳಿಸಲಾಗಿದೆ. ಈ ವಿಶೇಷ ಕೋರ್ಸ್​ ಅನ್ನು ಎಫ್ ಕೆಸಿಸಿಐ ಅಧ್ಯಕ್ಷ ಪೆರಿಕಲ್ ಎಂ ಸುಂದರ್ ಅವರು ಲೋಕಾರ್ಪಣೆ ಮಾಡಿದ್ದಾರೆ.

ಬೆಂಗಳೂರಿನ ಶಾಂತಿನಗರದ ಇಂಡಿಯನ್ ಮನಿ ಡಾಟ್ ಕಾಂ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಕೋರ್ಸ್​ ಅನ್ನು ಲೋಕಾರ್ಪಣೆ ಮಾಡಲಾಯಿತು. ನಂತರ ಮಾತನಾಡಿದ ಎಫ್ ಕೆಸಿಸಿಐ ಅಧ್ಯಕ್ಷ ಪೆರಿಕಲ್, 'ಉದ್ಯಮಿಗಳಾಗಬೇಕು ಎನ್ನುವವರಿಗೆ ಸರಿಯಾದ ಮಾರ್ಗದರ್ಶನದ ಅಗತ್ಯವಿರುತ್ತದೆ. ಈ ನಿಟ್ಟಿನಲ್ಲಿ ಫೈನಾನ್ಶಿಯಲ್ ಫ್ರೀಡಂ ಆ್ಯಪ್​ನಲ್ಲಿರುವ ಬ್ಯುಸಿನೆಸ್ ಕಟ್ಟುವುದು ಹೇಗೆ? ಎನ್ನುವ ಕೋರ್ಸ್ ಉಪಯುಕ್ತವಾಗಿದೆ. ಅದರಲ್ಲೂ ಕನ್ನಡದಲ್ಲೇ ಈ ಕೋರ್ಸ್ ಆರಂಭಿಸಿರುವುದು ಮೆಚ್ಚುಗೆಪಡುವಂತಹ ವಿಚಾರ' ಎಂದರು.

New Kannada course started by Money dot com in their financial freedom app here is the details
ಪ್ರಾತಿನಿಧಿಕ ಚಿತ್ರ


'ಬೆಂಗಳೂರು ಸ್ಟಾರ್ಟ್ ಅಪ್ ಉದ್ದಿಮೆಗಳ ರಾಜಧಾನಿಯಾಗಿದೆ. ನವೋದ್ಯಮಗಳಿಗೆ ಬೇಕಿರುವ ಕೌಶಲಗಳಿಗೆ ತರಬೇತಿ ನೀಡುವ ಸಲುವಾಗಿ ಸರ್ಕಾರದ ಸಹಯೋಗದೊಂದಿಗೆ ಎಫ್ ಕೆಸಿಸಿಐ ಒಂದು ವಿಶೇಷ ತರಬೇತಿ ಕೇಂದ್ರ ಆರಂಭಿಸಲಿದೆ. ಈ ಹೊಸ ಕೇಂದ್ರದ ನಿರ್ಮಾಣದಿಂದ ಹೆಚ್ಚು ವೃತ್ತಿಪರರನ್ನು ಸೃಷ್ಟಿಸಿ ಉದ್ದಿಮೆಗಳನ್ನು ಬೆಳಸಲು ಸಾಧ್ಯವಾಗುತ್ತದೆ' ಎಂದು ಹೇಳಿದರು.

ಇದನ್ನೂ ಓದಿ: ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಡಿಬಾಸ್​ ದರ್ಶನ್​: ಕಾರಣ ಇಲ್ಲಿದೆ..!

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಇಂಡಿಯನ್ ಮನಿ ಡಾಟ್ ಕಾಂ ನ ಸಿಇಒ ಸಿ ಎಸ್ ಸುಧೀರ್, 'ಫೈನಾನ್ಶಿಯಲ್ ಫ್ರೀಡಂ ಆ್ಯಪ್​ನಲ್ಲಿರುವ ಬ್ಯುಸಿನೆಸ್ ಕಟ್ಟುವುದು ಹೇಗೆ? ಎನ್ನುವ ಕೋರ್ಸ್ ಸ್ವಂತ ಉದ್ದಿಮೆ ಆರಂಭಿಸಬೇಕು, ಕಟ್ಟಿರುವ ಉದ್ದಿಮೆಯನ್ನು ಮತ್ತಷ್ಟು ಎತ್ತರಕ್ಕೆ ಬೆಳೆಸಬೇಕು, ಬೆಳೆಸಿರುವ ಉದ್ಯಮವನ್ನು ವಿಸ್ತರಿಸಬೇಕು ಅಂತ ಅಂದುಕೊಂಡಿರುವವರಿಗೆ ಅನುಕೂಲವಾಗಲಿದೆ. ಹೆಚ್ಚು ಜನರಿಗೆ ಈ ವಿಚಾರ ತಲುಪಬೇಕು ಎನ್ನುವ ಉದ್ದೇಶದಿಂದ ಕನ್ನಡದಲ್ಲೇ ಈ ಕೋರ್ಸ್ ಅನ್ನು ವಿನ್ಯಾಸಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಉದ್ದಿಮೆದಾರರನ್ನು ಪ್ರೋತ್ಸಾಹಿಸಲು ಮತ್ತಷ್ಟು ಕೋರ್ಸ್ ಗಳನ್ನು ರೂಪಿಸಲಾಗುತ್ತದೆ' ಎಂದು ವಿವರಿಸಿದರು.
Published by: Anitha E
First published: October 8, 2020, 1:04 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading