New Year 2021: ಬೆಂಗಳೂರಿಗರೇ ಎಚ್ಚರ!; ಸಿಲಿಕಾನ್ ಸಿಟಿಯಲ್ಲಿ ಇಂದು ಮಧ್ಯಾಹ್ನದಿಂದಲೇ ನಿಷೇಧಾಜ್ಞೆ ಜಾರಿ

Bangalore New Year Celebration: ಬೆಂಗಳೂರಿನಲ್ಲಿ ರೂಪಾಂತರ ಕೊರೊನಾ ಪ್ರಕರಣಗಳು ಬೆಳಕಿಗೆ ಬಂದ ಹಿನ್ನಲೆಯಲ್ಲಿ ಇಂದು ಮಧ್ಯಾಹ್ನದಿಂದಲೇ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್

ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್

  • Share this:
ಬೆಂಗಳೂರು (ಡಿ. 31): ಗ್ರ್ಯಾಂಡ್ ಆಗಿ ಹೊಸ ವರ್ಷವನ್ನು ಬರಮಾಡಿಕೊಳ್ಳಬೇಕೆಂದು ಬಯಸಿದವರಿಗೆ ಈ ವರ್ಷ ಕೊರೋನಾ ಅಡ್ಡಿಪಡಿಸಿದೆ. New Year Celebration ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ 12 ಗಂಟೆಯಿಂದಲೇ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ 12 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆಯವರೆಗೆ 144 ಸೆಕ್ಷನ್ ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಇಂದು ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಹೇರಲು ನಿರ್ಧರಿಸಲಾಗಿತ್ತು. ಆದರೆ, ಬೆಂಗಳೂರಿನಲ್ಲಿ ರೂಪಾಂತರ ಕೊರೊನಾ ಪ್ರಕರಣಗಳು ಬೆಳಕಿಗೆ ಬಂದ ಹಿನ್ನಲೆಯಲ್ಲಿ ಇಂದು ಮಧ್ಯಾಹ್ನದಿಂದಲೇ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನಲ್ಲಿ ಹೊಸ ಮಾದರಿಯ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಅದರಿಂದ ಮುಂಜಾಗ್ರತಾ ಕ್ರಮವಾಗಿ ಸುರಕ್ಷತಾ ದೃಷ್ಟಿಯಿಂದ ಇಂದು ಮಧ್ಯಾಹ್ನದಿಂದಲೇ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಕೊರೋನಾ ಸೋಂಕು ಹರಡುವಿಕೆ ತಡೆಯುವ ಸಲುವಾಗಿ ಹೊಸ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: New Year 2021: ಹೊಸ ವರ್ಷಾಚರಣೆ ಹಿನ್ನೆಲೆ; ಬೆಂಗಳೂರಿನಲ್ಲಿ ಇಂದು ರಾತ್ರಿ ಈ 6 ರಸ್ತೆಗಳು ಬಂದ್

ಒಂದೆಡೆ ಹೊಸ ವರ್ಷಾಚರಣೆ, ಮತ್ತೊಂದೆಡೆ ರೂಪಾಂತರ ಕೊರೊನಾ ಹಾವಳಿಯಿಂದ ಬೆಂಗಳೂರಿನಲ್ಲಿ ಖಾಕಿ ಕಣ್ಗಾವಲು ಕೂಡ ಹೆಚ್ಚಾಗಿದೆ. ನಿನ್ನೆ ತಡರಾತ್ರಿಯಿಂದ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ವಾಹನಗಳ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ವಾಹನಗಳ ಮಾಹಿತಿ ಪಡೆಯುತ್ತಿದ್ದ ಪೊಲೀಸರು ಯಾವ ಕಾರಣಕ್ಕಾಗಿ ಬಂದಿದ್ದೀರಿ, ಎಲ್ಲಿಗೆ ಹೋಗುತ್ತಿದೀರಾ, ಉದ್ದೇಶವೇನು ಎಂದು ಮಾಹಿತಿ ಕಲೆ ಹಾಕಿದ್ದಾರೆ. ವಾಹನಗಳ ದಾಖಲೆ, ಚಾಲಕರ ಮಾಹಿತಿ, ಇನ್ಶೂರೆನ್ಸ್ ತಪಾಸಣೆ ಮಾಡಿದ್ದಾರೆ. ಹಾಗೇ, ಪ್ರತಿಯೊಬ್ಬರಿಗೂ ಮಾಸ್ಕ್ ಕಡ್ಡಾಯಗೊಳಿಸಿದ್ದಾರೆ.

ಹೊಸ ವರ್ಷಾಚರಣೆಗೆ ನಿಷೇಧಾಜ್ಞೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಇಂದು ರಾತ್ರಿ 8 ಗಂಟೆ ಬಳಿಕ ಬೆಂಗಳೂರಿನ 6 ಪ್ರಮುಖ ರಸ್ತೆಗಳು ಕಂಪ್ಲೀಟ್ ಬಂದ್ ಆಗಲಿವೆ. ಹೀಗಾಗಿ, ಈ ರಸ್ತೆಗಳತ್ತ ಬಂದರೆ ತೊಂದರೆ ಅನುಭವಿಸಬೇಕಾದೀತು. ಬೆಂಗಳೂರಿನ ಚರ್ಚ್ ಸ್ಟ್ರೀಟ್, ಮ್ಯೂಸಿಯಂ ರೋಡ್, ರೆಸಿಡೆನ್ಸಿ ರೋಡ್, ರೆಸ್ಟ್ ಹೌಸ್ ಪಾರ್ಕ್ ರೋಡ್​ಗಳಿಗೆ ಬ್ಯಾರಿಕೇಡ್ ಹಾಕಿ ಲಾಕ್ ಮಾಡಲಾಗುವುದು. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಕೂಡ ಸಂಪೂರ್ಣ ಬಂದ್ ಆಗಲಿವೆ. ಜೊತೆಗೆ ನಗರದ ಎಲ್ಲಾ ಫ್ಲೈ ಓವರ್ ಗಳು ಕೂಡ ಬಂದ್ ಆಗಲಿವೆ.
Published by:Sushma Chakre
First published: