ಮೈಸೂರು (ಡಿ. 31): ಮತ್ತೆ ಹೆಚ್ಚುತ್ತಿರುವ ಕೊರೋನಾದಿಂದಾಗಿ ಈ ಬಾರಿಯ New Year Celebrationಗೂ ಬ್ರೇಕ್ ಬಿದ್ದಿದೆ. ಬೆಂಗಳೂರು ಮಾತ್ರವಲ್ಲದೆ ಮೈಸೂರಿನಲ್ಲಿ ಕೂಡ ಹೊಸ ವರ್ಷಕ್ಕೆ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಇಂದು ರಾತ್ರಿ 11.30ರೊಳಗೆ ಎಲ್ಲ ಕಾರ್ಯಕ್ರಮ ಮುಗಿಸಬೇಕು. ಹೋಟೆಲ್, ರೆಸ್ಟೋರೆಂಟ್, ಪಬ್ ಅಂಗಡಿ, ಮುಗ್ಗಟ್ಟುಗಳನ್ನು ಮುಚ್ಚಬೇಕು ಎಂದು ಈಗಾಗಲೇ ಎಲ್ಲ ಅಧಿಕಾರಿಗಳನ್ನೂ ಕರೆದು ಸೂಚನೆ ನೀಡಲಾಗಿದೆ. ಇಂದು ಸಂಜೆ 6 ಗಂಟೆಯಿಂದ ಜನವರಿ 2ರ ಸಂಜೆಯವರೆಗೂ Chamundi Hill ಪ್ರವೇಶ ನಿಷೇಧಿಸಲಾಗಿದೆ.
ಮೈಸೂರಿನಲ್ಲಿ ಇಂದು ರಾತ್ರಿ ಡಿಜೆ, ಡ್ಯಾನ್ಸ್ ಸೇರಿ ಯಾವುದೇ ಕಾರ್ಯಕ್ರಮ ಮಾಡಬಾರದೆಂದು ಸೂಚಿಸಲಾಗಿದೆ. ರಸ್ತೆಯಲ್ಲಿ ಎಲ್ಲೂ ಕೂಡ ಪಾರ್ಟಿ ಮಾಡುವ ಹಾಗಿಲ್ಲ. ರಸ್ತೆಯಲ್ಲಿ ಓಡಾಡಿ ಶುಭಾಶಯ ತಿಳಿಸುವುದು, ಮನರಂಜನೆಗೆ ಅವಕಾಶ ಇಲ್ಲ. ಈ ದಿನ ವಿಶೇಷ ದಿನ ಎಂದು ಪರಿಗಣಿಸಿ ಕ್ರಮ ಕೈಗೊಳ್ಳಲಾಗಿದೆ. 5ಕ್ಕೂ ಹೆಚ್ಚು ಮಂದಿ ಸೇರದಂತೆ ಸೂಚನೆ ನೀಡಲಾಗಿದೆ. ಮೈಸೂರಿನ ಎಲ್ಲ ಠಾಣಾಧಿಕಾರಿಗಳನ್ನು ಆಯಾ ವ್ಯಾಪ್ತಿಗೆ ಗಸ್ತಿಗೆ ನೀಯೋಜನೆ ಮಾಡಲಾಗಿದೆ ಎಂದು ಮೈಸೂರು ಕಾನೂನು ಸುವ್ಯವಸ್ಥೆ ಡಿಸಿಪಿ ಪ್ರಕಾಶ್ ಗೌಡ ಹೇಳಿದ್ದಾರೆ.
ಇಂದು ಸಂಜೆ 6 ಗಂಟೆಯಿಂದಲೇ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಜನವರಿ 2ರವರೆಗೂ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಅನಗತ್ಯವಾಗಿ ಹೊಸ ವರ್ಷದ ದಿನ ಓಡಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರಿನಲ್ಲಿ ಹೊಸ ವರ್ಷದ ಮಾರ್ಗಸೂಚಿ ಬಗ್ಗೆ ಡಿಸಿಪಿ ಪ್ರಕಾಶ್ ಗೌಡ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: New Year 2021: ಬೆಂಗಳೂರಿಗರೇ ಎಚ್ಚರ!; ಸಿಲಿಕಾನ್ ಸಿಟಿಯಲ್ಲಿ ಇಂದು ಮಧ್ಯಾಹ್ನದಿಂದಲೇ ನಿಷೇಧಾಜ್ಞೆ ಜಾರಿ
ಮೈಸೂರಿನಲ್ಲಿ ಹೊಸ ವರ್ಷಾಚರಣೆಗೆ ಹೊಸ ನಿಯಮಾವಳಿ ಜಾರಿಗೊಳಿಸಲಾಗಿದೆ. ಮೈಸೂರಿನಲ್ಲಿ ಹೊಸ ವರ್ಷಾಚರಣೆಯ ವಿಶೇಷ ಕಾರ್ಯಕ್ರಮ ಆಯೋಜಿಸುವಂತಿಲ್ಲ. ಮೈಸೂರಿನ ಯಾವುದೇ ಕ್ಲಬ್, ಪಬ್, ರೆಸ್ಟೋರೆಂಟ್, ರೆಸಾರ್ಟ್ ಹಾಗೂ ಹೋಟೆಲ್‌ಗಳಲ್ಲಿ ವಿಶೇಷ ಪಾರ್ಟಿ ಇಲ್ಲ. ರಸ್ತೆಗಳಲ್ಲಿ ಡಿಜೆ ಹಾಗೂ ಸಂಗೀತ ಕಾರ್ಯಕ್ರಮ ಆಯೋಜಿಸುವಂತಿಲ್ಲ. ಡಿ. 31ರ ರಾತ್ರಿ ಮೈಸೂರಿನ ಹಲವು ರಸ್ತೆಗಳಲ್ಲಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿದೆ. ಮೈಸೂರು ಅರಮನೆಯಲ್ಲೂ ಹೊಸ ವರ್ಷ ಸ್ವಾಗತ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ