New year guidelines: ಡಿ. 31ರಂದು ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿ; ನಿಯಮ ಮೀರಿದರೆ ಕ್ರಮ

ನಗರದ ಕೆಲವೆಡೆ ವಿಶೇಷ ನಿಗಾ ಇಡಲಾಗಿದ್ದು, ಎಂಜಿ ರಸ್ತೆ, ಕಮರ್ಷಿಯಲ್​ ಸ್ಟ್ರೀಟ್​, ಚರ್ಚ್​ಸ್ಟ್ರೀಟ್, ಕೋರಮಂಗಲ, ಇಂದಿರಾನಗರಗಳಲ್ಲಿ ಹೆಚ್ಚಿನ ಬಂದೋಬಸ್ತ್​ ಮಾಡಲಾಗುವುದು

ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್

ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್

  • Share this:
ಬೆಂಗಳೂರು (ಡಿ. 28): ರೂಪಾಂತರಗೊಂಡ ಕೊರೋನಾ ವೈರಸ್​ ಹಿನ್ನಲೆ ಈ ಬಾರಿ ಹೊಸ ವರ್ಷಾಚರಣೆಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರಲ್ಲಿ ಡಿ. 31ರಂದು ನಿಷೇಧಾಜ್ಞೆ ವಿಧಿಸಲಾಗಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಡಿ. 31ರ ಸಂಜೆ ಆರುಗಂಟೆಯಿಂದ ಜ.1 ಬೆಳಗ್ಗೆ ಆರುಗಂಟೆವರೆಗೆ ಸೆಕ್ಷನ್​ 144 ಜಾರಿಯಲ್ಲಿರಲಿದೆ.  ರಾಜಧಾನಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಸಂಭ್ರಮಾಚರಣೆಗೆ ಅವಕಾಶ ಇರುವುದಿಲ್ಲ. ಇಡೀ ಬೆಂಗಳೂರಲ್ಲಿ ನಾಕಾಬಂದಿ ಇರಲಿದ್ದು, 10 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗುವುದು ಎಂದು ನಗರ ಪೊಲೀಸ್​ ಆಯುಕ್ತ ಕಮಲ್​ಪಂತ್​ ತಿಳಿಸಿದರು. ಹೊಸವರ್ಷದ ಮಾರ್ಗಸೂಚಿ ಪ್ರಕಟಿಸಿ ಮಾತನಾಡಿದ ಸಾರ್ವಜನಿಕ ಸ್ಥಳಗಳಲ್ಲಿ ವರ್ಷಾಚರಣೆ ನಿಷೇಧ ಇರಲಿದ್ದು, ಐದಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಆದರೆ, ಖಾಸಗಿ ಸ್ಥಳಗಳಲ್ಲಿ ಆಚರಣೆಗೆ ಅವಕಾಶ ನೀಡಲಾಗಿದೆ. ಪಬ್​ಗಳಲ್ಲಿ ಈವೆಂಟ್​, ಶೋ ನಡೆಸುವಂತಿಲ್ಲ ಹಾಗೂ ವಿಶೇಷ ಡಿಜೆ ವ್ಯವಸ್ಥೆ ಮಾಡುವಂತಿಲ್ಲ. ಹೊಟೇಲ್​ಗಳಲ್ಲಿ ಮಾರ್ಗಸೂಚಿ ಪಾಲಿಸಬೇಕು ಎಂದು ತಿಳಿಸಿದರು.

ನಗರದ ಕೆಲವೆಡೆ ವಿಶೇಷ ನಿಗಾ ಇಡಲಾಗಿದ್ದು, ಎಂಜಿ ರಸ್ತೆ, ಕಮರ್ಷಿಯಲ್​ ಸ್ಟ್ರೀಟ್​, ಚರ್ಚ್​ಸ್ಟ್ರೀಟ್, ಕೋರಮಂಗಲ, ಇಂದಿರಾನಗರಗಳಲ್ಲಿ ಹೆಚ್ಚಿನ ಬಂದೋಬಸ್ತ್​ ಮಾಡಲಾಗುವುದು. ಈ ಏರಿಯಾಗಳಲ್ಲಿ ಕೂಪನ್​ ಬುಕ್ಕಿಂಗ್ ಕಡ್ಡಾಯವಾಗಿದೆ. ಸಂಭ್ರಮಾಚರಣೆ ವೇಳೆ ವಿಶೇಷ ಡಿಜೆಗೆ ನಿರ್ಬಂಧ ಹಾಕಲಾಗಿದ್ದು, ನಿಯಮ ಮೀರಿದರೆ ಮಾಲೀಕರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮಾಲ್​ಗಳು, ಹೊಟೇಲ್​, ಕ್ಲಬ್​, ಪಬ್​ಗಳಲ್ಲಿ ಕೋವಿಡ್​ ಮಾರ್ಗಸೂಚಿ ಪಾಲನೆ ಕಡ್ಡಾಯವಾಗಿದೆ. ಜ.31ರ ರಾತ್ರಿ ಅನವಶ್ಯಕ ಸಂಚಾರಕ್ಕೆ ಯಾವುದೇ ಅವಕಾಶವಿಲ್ಲ. ವೀಲಿಂಗ್, ಡ್ರ್ಯಾಗ್​ ರೇಸ್​ಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಿಯಮ ಮೀರಿ ಸಂಚಾರ ಮಾಡಿದರೆ, ವಾಹನ ಜಪ್ತಿ ಮಾಡಲಾಗುವುದು. ಯಾವುದೇ ಸಾರ್ವಜನಿಕ ಸ್ಥಳ ರಸ್ತೆ, ಪಾರ್ಕ್​ ಬಳಿ ಯಾವುದೇ ಸಂಭ್ರಮಾಚರಣೆ ನಡೆಸಲು ಅವಕಾಶ ನೀಡಲಾಗಿಲ್ಲ. ಡಿಜೆ ಹಾಗೂ ಯಾವುದೇ ಸಂಗೀತ ಕಾರ್ಯಕ್ರಮಗಳಿಗೆ ಅವಕಾಶ ನೀಡಲಾಗುವುದಿಲ್ಲ. ಆದರೆ, ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್, ಖಾಸಗಿ ಕ್ಲಬ್ ಗಳಲ್ಲಿ ಕಾರ್ಯಕ್ರಮಕ್ಕೆ ಅವಕಾಶ ಇದೆ ಎಂದು ಸ್ಪಷ್ಟಪಡಿಸಿದರು

ಅಂತರಾಷ್ಟ್ರೀಯ ಮಟ್ಟದಲ್ಲಿ ಕೋವಿಡ್​ ಹೆಚ್ಚುತ್ತಿರುವ ಹಿನ್ನಲೆ ಜನರ ಆರೋಗ್ಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು
Published by:Seema R
First published: