ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ ಪ್ರಕರಣ: ಎನ್​​​ಐಎ ಅಧಿಕಾರಿಗಳು ಇಂದು ಮಂಗಳೂರಿಗೆ ಭೇಟಿ

ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ವಿಚಾರಣೆ ಮತ್ತಷ್ಟು ಚುರುಕುಗೊಳಿಸಿದ್ದು,  ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ವ್ಯಕ್ತಿ ಬಗ್ಗೆ ತೀವ್ರ ಶೋಧ ಕಾರ್ಯ ನಡೆಸಲಾಗುತ್ತಿದೆ.

ಏರ್​ಪೋರ್ಟ್​ನಲ್ಲಿ ಪತ್ತೆಯಾದ ಸಜೀವ ಬಾಂಬ್​ ಪರಿಶೀಲನೆ ನಡೆಸುತ್ತಿರುವ ಪೊಲೀಸರು.

ಏರ್​ಪೋರ್ಟ್​ನಲ್ಲಿ ಪತ್ತೆಯಾದ ಸಜೀವ ಬಾಂಬ್​ ಪರಿಶೀಲನೆ ನಡೆಸುತ್ತಿರುವ ಪೊಲೀಸರು.

  • Share this:
ಮಂಗಳೂರು(ಜ.21) : ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ ಪ್ರಕರಣದ ಹಿನ್ನೆಲೆಯಲ್ಲಿ ಇಂದು (ಎನ್​​​ಐಎ) ರಾಷ್ಟ್ರೀಯ ತನಿಖಾ ದಳದ ನಾಲ್ವರ ಅಧಿಕಾರಿಗಳ ತಂಡ ಮಂಗಳೂರಿಗೆ ಭೇಟಿ ನೀಡಲಿದ್ದಾರೆ.

ಬಜ್ಪೆ ವಿಮಾನ‌ ನಿಲ್ದಾಣ, ಕೆಂಜಾರು ಹಾಗೂ  ಬಾಂಬ್​​​​​​​​​​​​​​  ಇಟ್ಟ ಸ್ಥಳವನ್ನು ಎನ್ಐ​​ಎ ಅಧಿಕಾರಿಗಳ ತಂಡವು ಪರಿಶೀಲನೆ ನಡೆಸಲಿದೆ. ನಿನ್ನೆ ಬೆಳಗ್ಗೆ ಬಾಂಗಗ ಇಟ್ಟು ಹೋದ ಆ ಶಂಕಿತ ವ್ಯಕ್ತಿ ಸಂಚರಿಸಿದ ಬಸ್, ಆಟೋ ಚಾಲಕನನ್ನು ಎನ್​​​ಎಎ ಅಧಿಕಾರಿಗಳು  ವಿಚಾರಣೆ ನಡೆಸಲಿದ್ದಾರೆ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ವಿಚಾರಣೆ ಮತ್ತಷ್ಟು ಚುರುಕುಗೊಳಿಸಿದ್ದು,  ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ವ್ಯಕ್ತಿ ಬಗ್ಗೆ ತೀವ್ರ ಶೋಧ ಕಾರ್ಯ ನಡೆಸಲಾಗುತ್ತಿದೆ. ಈ ಬಗ್ಗೆ  ಮಂಗಳೂರಿನಿಂದ ಏರ್ ಪೋರ್ಟ್ ಗೆ ಹೋಗುವ ರಸ್ತೆಯ ನೂರಾರು ಸಿಸಿಟಿವಿಗಳ ಪರಿಶೀಲನೆ ನಡೆಸಲಾಗಿದ್ದು, ಬಾಂಬ್ ಇಟ್ಟು ಕಾವೂರು ಬಳಿ ಬಸ್ ನಿಂದ  ವ್ಯಕ್ತಿ ಇಳಿದಿರುವ ಶಂಕ್ಯೆಯನ್ನು ಪೊಲೀಸರು ವ್ಯಕ್ತಪಡಿಸಲಾಗಿದೆ.

ಪ್ರಕರಣದ ತನಿಖೆಗೆ ಮೂರು ತಂಡಗಳನ್ನು ರಚನೆ

ಪ್ರಕರಣದ ತನಿಖೆಗೆ ಮೂರು ತಂಡಗಳನ್ನು ರಚನೆ ಮಾಡಲಾಗಿದ್ದು, ಶಂಕಿತ ವ್ಯಕ್ತಿಯ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಅಲ್ಲದೆ, ಘಟನೆ ಸಂಬಂಧ ಸಾಕಷ್ಟು ಸುಳಿವುಗಳು ಈಗಾಗಲೇ ಲಭ್ಯವಾಗಿವೆ. ಹೀಗಾಗಿ ಶೀಘ್ರದಲ್ಲೇ ಈ ಪ್ರಕರಣವನ್ನು ಬೇಧಿಸಿ ತಪ್ಪಿತಸ್ಥರನ್ನು ಕಾನೂನಿನ ಚೌಕಟ್ಟಿನ ಅಡಿಯಲ್ಲಿ ತಂದು ನಿಲ್ಲಿಸಲಾಗುವುದು" ಎಂದು ಮಂಗಳೂರು ನಗರ ಪೊಲೀಸ್​ ಆಯುಕ್ತ ಡಾ. ಹರ್ಷ ತಿಳಿಸಿದ್ದಾರೆ.

ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ ಟಿಕೆಟ್ ಕೌಂಟರ್ ಹತ್ತಿರ ಸ್ಫೋಟಕ ವಸ್ತು ಪತ್ತೆ ಆಗಿದ್ದು, ಬಾಂಬ್ ಇರುವ ಸಂಶಯ ವ್ಯಕ್ತವಾಗಿದೆ. ಈ ಬಗ್ಗೆ ಮೊದಲ ಹಂತದ ತನಿಖೆ ಆಗಿದೆ. ಈ ಪ್ರಕರಣವನ್ನು ಶೀಘ್ರದಲ್ಲೇ ಭೇದಿಸುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ : ಮಂಗಳೂರು ಏರ್​ಪೋರ್ಟ್​ನಲ್ಲಿ ಪತ್ತೆಯಾಯ್ತು ಸಜೀವ ಬಾಂಬ್; ಭದ್ರತಾ ವೈಫಲ್ಯ, ವಿಮಾನ ನಿಲ್ದಾಣ ಕೆಲಕಾಲ ಬಂದ್

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸೋಮವಾರ ಬೆಳಗ್ಗೆ ಅನುಮಾನಾಸ್ಪದ ಬ್ಯಾಗೊಂದು ಸೋಮವಾರ ಬೆಳಗ್ಗೆ 10 ಗಂಟೆಗೆ ಪತ್ತೆಯಾಗಿತ್ತು. ವಿಮಾನ ನಿಲ್ದಾಣದ ಟಿಕೆಟ್‌ ಕೌಂಟರ್‌ನಲ್ಲಿ ಬ್ಯಾಗ್ ಪತ್ತೆಯಾಗಿದ್ದು ಅನುಮಾನಕ್ಕೆ ಕಾರಣವಾಗಿತ್ತು. ಕೂಡಲೇ ಪರಿಶೀಲನೆ ನಡೆಸಿದ ಭದ್ರತಾ ಸಿಬ್ಬಂದಿ ಬ್ಯಾಗ್‌ನಲ್ಲಿರುವುದು ಬಾಂಬ್ ಎಂದು ಪತ್ತೆ ಮಾಡಿದ್ದಾರೆ.

ವಿಮಾನ ನಿಲ್ದಾಣದಿಂದ ಸುಮಾರು ಎರಡು ಕಿಮೀ ದೂರದಲ್ಲಿರುವ  ಕೆಂಜಾರು ಮೈದಾನಕ್ಕೆ ಬಾಂಬ್ ಪ್ರತಿರೋಧಕ ವಾಹನವನ್ನು ಸಾಗಿಸಿ ಬಾಂಬ್ ನಿಷ್ಕ್ರಿಯಗೊಳಿಸಲು ಪ್ರಯತ್ನಿಸಲಾಗಿತ್ತು. ಆದರೆ ಎರಡು ಗಂಟೆಗಳ ಕಾಲದ ಪ್ರಯತ್ನದ ಹೊರತಾಗಿಯೂ ಬಾಂಬ್ ನಿಷ್ಕ್ರಿಯಗೊಳಿಸಲು ಸಾಧ್ಯವಾಗದೆ ಹೋದಾಗ 12 ಅಡಿ ಆಳದ ಗುಂಡಿಯಲ್ಲಿ ಮರಳು ಚೀಲಗಳನ್ನು ಇಟ್ಟು ನಡುವೆ ಬಾಂಬ್ ಇರಿಸಿ ಸ್ಪೋಟಿಸಲಾಗಿದೆ

 
First published: