ಮಂಗಳೂರು: ಬಿಹಾರದ (Bihar) ಪ್ರಧಾನಿ ನರೇಂದ್ರ ಮೋದಿ (PM Narendra Modi) ಕಾರ್ಯಕ್ರಮದಲ್ಲಿ ಗಲಭೆ ಸೃಷ್ಟಿಸಲು ಹಣಕಾಸಿ ನೆರವು (Finance Help) ನೀಡಿದ್ದ ಆರೋಪದಡಿ ಬಂಟ್ವಾಳದ (Bantwal, Mangaluru) ನಾಲ್ವರ ಮನೆ ಮೇಲೆ ಎನ್ಐಎ ದಾಳಿ (NIA Raid) ನಡೆಸಿದೆ. ಭಾನುವಾರ ರಾತ್ರಿ ಈ ದಾಳಿ ನಡೆದಿದೆ ನಂದಾವರ (Nandavara) ನಿವಾಸಿಗಳಾದ ಮಹಮ್ಮದ್ ಸಿನಾನ್, ಇಕ್ಬಾಲ್, ಸರ್ಪಾಜ್ ನವಾಜ್ ಮತ್ತು ನೌಫಲ್ ಎಂಬವರ ಮನೆ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸದ್ಯ ನಾಲ್ವರನ್ನು ವಶಕ್ಕೆ ಪಡೆಸಿಕೊಳ್ಳಲಾಗಿದೆ. ಎನ್ಐಎ ಅಧಿಕಾರಿಗಳು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ನಾಲ್ವರು ಆರೋಪಿಗಳು ಹಲವು ಬ್ಯಾಂಕ್ ಖಾತೆಗಳಿಗೆ ನಿರಂತರ ಹಣ ರವಾನೆ ಮಾಡಿರುವ ಮಾಹಿತಿ ಲಭ್ಯವಾಗಿದೆ. ಕಳೆದ ಹಲವು ತಿಂಗಳಿನಿಂದ ಈ ನಾಲ್ಕು ಜನರ ವ್ಯವಹಾರದ ಮೇಲೆ ಎನ್ಐಎ ಟೀಂ ಕಣ್ಣಿಟ್ಟಿತ್ತು.
ವಶಕ್ಕೆ ಪಡೆದುಕೊಂಡಿರುವ ಯುವಕರನ್ನು ಹೆಚ್ಚಿನ ವಿಚಾರಣೆಗಾಗಿ ಬಿಹಾರಕ್ಕೆ ಕರೆದೊಯ್ಯುವ ಸಾಧ್ಯತೆಗಳಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರವೀಣ್ ಹತ್ಯೆ ಪ್ರಕರಣದ ಆರೋಪಿ ಅರೆಸ್ಟ್
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು (BJP Activist Praveen Nettar) ಹತ್ಯೆ ಪ್ರಕರಣದ ಮತ್ತೋರ್ವ ಆರೋಪಿಯನ್ನು ಎನ್ಐಎ (NIA) ಬಂಧಿಸಿದೆ. ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ಆರೋಪಿ ತೌಫಿಲ್ ತಲೆಮರೆಸಿಕೊಂಡಿದ್ದನು.
ಮಾರ್ಚ್ 4ರಂದು ರಾತ್ರಿ ಸುಮಾರು 9.30ಕ್ಕೆ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದಾಸರಹಳ್ಳಿಯಲ್ಲಿ (Dasarahalli) ತೌಫಿಲ್ ಬಂಧನವಾಗಿದೆ. ತೌಫಿಲ್ ಪತ್ತೆಗೆ ಎನ್ಐಎ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು.
10ಕ್ಕೂ ಅಧಿಕಾರಿಗಳಿಂದ ದಾಳಿ
ಎನ್ಐಎ ಅಧಿಕಾರಿಗಳಿಗೆ ದಾಸರಹಳ್ಳಿಯಲ್ಲಿ ತೌಫಿಲ್ ಇರೋ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಆಟೋ ಚಾಲಕ ಮತ್ತು ಪ್ಲಂಬರ್ ರೀತಿಯಲ್ಲಿ ತೌಫಿಲ್ ಮನೆಗೆ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದರು. ಸುಮಾರು 10ಕ್ಕೂ ಹೆಚ್ಚು ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಅಧಿಕಾರಿಗಳ ಮೇಲೆ ದಾಳಿಗೆ ಯತ್ನ
ಮೊದಲಿಗೆ ಫ್ಲಂಬರ್ ಅಂತ ಕೈಯಲ್ಲಿ ರಿಂಚ್ ಹಿಡಿದು ಮನೆ ಒಳಗೆ ಇಬ್ಬರು ಅಧಿಕಾರಿಗಳು ಹೋಗಿದ್ದರು. ಈ ವೇಳೆ ತೌಫಿಲ್ ಮನೆಯಲ್ಲಿ ಮಟನ್ ಕಟ್ ಮಾಡುತ್ತಿದ್ದನು. ಅಧಿಕಾರಿಗಳನ್ನ ನೋಡಿ ಗಲಿಬಿಲಿಗೊಂಡು ತೌಫಿಲ್ ಅವರ ಮೇಲೆ ಅಟ್ಯಾಕ್ ಮಾಡಲು ಮುಂದಾಗಿದ್ದನು.
ಇದನ್ನೂ ಓದಿ: Mangaluru Blast: ಮಂಗಳೂರಿನಲ್ಲಿ NIA ತಂಡದಿಂದ ಪರಿಶೀಲನೆ, ಮೈಸೂರಿನಲ್ಲಿ ಶಂಕಿತನ ರೂಮ್‌ನಲ್ಲೂ ಶೋಧ
ಅಷ್ಟರಲ್ಲಿ ಅಧಿಕಾರಿಗಳು ತೌಫಿಲ್ನನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದು ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಲ
ಕುಕ್ಕರ್ ಬ್ಲಾಸ್ಟ್-ಐಸಿಸ್ ಪ್ಲ್ಯಾನ್!
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಸ್ಐಎಸ್ ಉಗ್ರ ಸಂಘಟನೆ ಕೊನೆಗೂ ಸ್ಫೋಟದ ಹೊಣೆ ಹೊತ್ತಿದೆ. ಐಸಿಸ್ ಸಂಘಟನೆಯ ವಕ್ತಾರ ಐಎಸ್ಕೆಪಿ ನಡೆಸುವ ವಾಯ್ಸ್ ಆಫ್ ಕೂರಸ ನಿಯತಕಾಲಿಕೆಯಲ್ಲಿ ಕರ್ನಾಟಕದ ಮಂಗಳೂರು ಮತ್ತು ತಮಿಳುನಾಡಿನ ಕೊಯಮತ್ತೂರು ಸ್ಪೋಟದ ಹೊಣೆ ಹೊತ್ತಿರುವ ಕುರಿತಾಗಿ ಪ್ರಕಟಿಸಲಾಗಿದೆ.
ಇತ್ತೀಚೆಗೆ ಶಂಕಿತ ಉಗ್ರ ಶಾರಿಕ್ನನ್ನು ಬೆಂಬಲಿಸಿ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿತ್ತು. ಶಂಕಿತ ಉಗ್ರ ಶಾರಿಕ್ ನಮ್ಮ ಸಹೋದರ. ಮಂಗಳೂರಿನ ಕದ್ರಿ ದೇವಾಲಯದ ಮೇಲೆ ದಾಳಿಗೆ ಯತ್ನಿಸಲಾಗಿತ್ತು.
ಉಗ್ರರ ಎಚ್ಚರಿಕೆ
ಮಂಗಳೂರು ಕೇಸರಿ ಭಯೋತ್ಪಾದಕರ ಭದ್ರಕೋಟೆಯಾಗಿದೆ. ಈ ಕಾರ್ಯಾಚರಣೆಯ ನಮ್ಮ ಉದ್ದೇಶ ಈಡೇರದಿದ್ದರೂ ರಾಜ್ಯ, ಕೇಂದ್ರ ಗುಪ್ತಚರ ಸಂಸ್ಥೆಗಳ ಕಣ್ತಪ್ಪಿಸಿ ದಾಳಿಗೆ ಸಿದ್ಧತೆ ಮಾಡಿಕೊಳ್ಳುತ್ತೇವೆ ಎಂದು ಉಗ್ರರು ಎಚ್ಚರಿಕೆ ನೀಡಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ