ಬೆಂಗಳೂರು: ರಾಮನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿರುವ ನಿಖಿಲ್ ಕುಮಾರಸ್ವಾಮಿ (Nikhil Kumaraswamy), ಇಂದು ಬಿ ಫಾರಂ ಪಡೆಯಲು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ (Former PM HD Deve Gowda) ನಿವಾಸಕ್ಕೆ ತೆರಳಿದ್ದರು. ಈ ವೇಳೆ ದೇವೇಗೌಡರ ಆರೋಗ್ಯ ಸ್ಥಿತಿ ಕಂಡು ನಿಖಿಲ್ ಕುಮಾರಸ್ವಾಮಿ ಭಾವುಕರಾಗಿ ಕಣ್ಣೀರಿಟ್ಟರು. ಬಿ ಫಾರಂ ಪಡೆಯುವ ವೇಳೆ ತಂದೆ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ (HD Kumaraswamy), ತಾಯಿ ಅನಿತಾ ಕುಮಾರಸ್ವಾಮಿ (Anita Kumaraswamy) ಮತ್ತು ಪತ್ನಿ ರೇವತಿ ಉಪಸ್ಥಿತರಿದ್ದರು.
ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿರುವ ಅನಿತಾ ಕುಮಾರಸ್ವಾಮಿ ಚುನಾವಣೆ ಕಣದಿಂದ ಹಿಂದೆ ಸರಿದಿದ್ದಾರೆ. ಈ ಹಿನ್ನೆಲೆ ನಿಖಿಲ್ ಕುಮಾರಸ್ವಾಮಿ ರಾಮನಗರದಿಂದ ಸ್ಪರ್ಧೆ ಮಾಡುತ್ತಿದ್ದಾರೆ.
2018ರಲ್ಲಿ ರಾಮನಗರ ಮತ್ತು ಚನ್ನಪಟ್ಟಣದಿಂದ ಸ್ಪರ್ಧೆ ಮಾಡಿದ್ದ ಹೆಚ್ ಡಿ ಕುಮಾರಸ್ವಾಮಿ ಎರಡೂ ಕ್ಷೇತ್ರಗಳಲ್ಲಿ ಗೆದ್ದಿದ್ದರು. ರಾಮನಗರ ಶಾಸಕ ರಾಜೀನಾಮೆ ನೀಡಿ, ಚನ್ನಪಟ್ಟಣದಲ್ಲಿ ಎಂಎಲ್ಎ ಆಗಿ ಮುಂದುವರಿದಿದ್ದರು.
ಕುಮಾರಸ್ವಾಮಿ ರಾಜೀನಾಮೆ ಬಳಿಕ ರಾಮನಗರ ಉಪ ಚುನಾವಣೆಯಲ್ಲಿ ಜೆಡಿಎಸ್ ನಿಂದ ಅನಿತಾ ಕುಮಾರಸ್ವಾಮಿ ಶಾಸಕಿಯಾಗಿ ಆಯ್ಕೆಯಾಗಿದ್ದರು.
ಇಂದು ರೇವಣ್ಣ ನಾಮಪತ್ರ ಸಲ್ಲಿಕೆ
ನಾಮಪತ್ರ ಸಲ್ಲಿಕೆಗೂ ಮುನ್ನ ಮಾಜಿ ಸಚಿವ ಹೆಚ್.ಡಿ.ರೇವಣ್ಣ (Former Minister HD Revanna) ಲಕ್ಷ್ಮಿ ರಂಗನಾಥಸ್ವಾಮಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ನೆರವೇರಿಸಿದರು.
ಇದನ್ನೂ ಓದಿ: Jagadish Shettar: ನನ್ನನ್ನು ಒತ್ತಾಯದಿಂದ ಹೊರಗೆ ಹಾಕಲಾಯ್ತು; ಕಾಂಗ್ರೆಸ್ ಸೇರಿದ ಬಳಿಕ ಫಸ್ಟ್ ರಿಯಾಕ್ಷನ್
ರೇವಣ್ಣಗೆ ಪತ್ನಿ ಭವಾನಿ ರೇವಣ್ಣ, ಪುತ್ರರಾದ ಪ್ರಜ್ವಲ್ ಹಾಗೂ ಸೂರಜ್ ಸಾಥ್ ನೀಡಿದರು. ಮಧ್ಯಾಹ್ನ 12.15 ಕ್ಕೆ ಹೊಳೆನರಸೀಪುರ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್ ಡಿ ರೇವಣ್ಣ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ