ಕೇರಳದಲ್ಲಿ ನಿಫಾ ವೈರಸ್ ಪತ್ತೆ ಹಿನ್ನೆಲೆ​; ರಾಜ್ಯದಲ್ಲೂ ಹೈ ಅಲರ್ಟ್​ ಘೋಷಣೆ

ಬಾವಲಿ ತಿಂದು ಬಿಟ್ಟ ಹಣ್ಣಿನ ಬಗ್ಗೆ ಎಚ್ಚರಿಕೆ ಇರಲಿ. ಈ ಸಮಯದಲ್ಲಿ ಕೇರಳಕ್ಕೆ ಹೋಗುವುದು ಬೇಡ. ಕೇರಳದ ಗಡಿ ಪ್ರದೇಶಗಳಲ್ಲಿ ನಿಗಾ ವಹಿಸುವಂತೆ ಆದೇಶಿಸಲಾಗಿದೆ.

Latha CG | news18
Updated:June 6, 2019, 2:46 PM IST
ಕೇರಳದಲ್ಲಿ ನಿಫಾ ವೈರಸ್ ಪತ್ತೆ ಹಿನ್ನೆಲೆ​; ರಾಜ್ಯದಲ್ಲೂ ಹೈ ಅಲರ್ಟ್​ ಘೋಷಣೆ
ಸಾಂದರ್ಭಿಕ ಚಿತ್ರ
Latha CG | news18
Updated: June 6, 2019, 2:46 PM IST
ಬೆಂಗಳೂರು(ಜೂ.06): ನೆರೆಯ ರಾಜ್ಯ ಕೇರಳದಲ್ಲಿ ಕಾಣಿಸಿಕೊಂಡಿರುವ ನಿಫಾ ವೈರಸ್​​ ಈಗ ಎಲ್ಲೆಡೆ ಆತಂಕ ಸೃಷ್ಟಿಸಿದೆ . ಹೀಗಾಗಿ ಕರ್ನಾಟಕದಲ್ಲಿಯೂ ಹೈ ಅಲರ್ಟ್​ ಘೋಷಣೆ ಮಾಡಲಾಗಿದೆ. ಕೇರಳದಲ್ಲಿ ಕಳೆದ ವರ್ಷ 17 ಪ್ರಕರಣಗಳು  ದಾಖಲಾಗಿತ್ತು. ಈ ವರ್ಷ ಕೇರಳದ 5 ಮಂದಿಯಲ್ಲಿ ನಿಫಾ ವೈರಸ್​​ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಹೈ ಅಲರ್ಟ್​ ಘೋಷಿಸಲಾಗಿದೆ. ಈ ಸಂದರ್ಭದಲ್ಲಿ ಪ್ರವಾಸಿಗರು ಕೇರಳಕ್ಕೆ ಹೋಗುವುದನ್ನು ಆದಷ್ಟು ತಡೆಗಟ್ಟುವುದು ಒಳಿತು ಎಂದು ತಿಳಿಸಲಾಗಿದೆ.

 ಈ ಕುರಿತು ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. "ರಾಜ್ಯದಲ್ಲೂ ನಿಫಾ ವೈರಸ್ ಕುರಿತು ಹೈಅಲರ್ಟ್​ ಘೋಷಣೆ ಮಾಡಲಾಗಿದೆ.  ಸಾರ್ವಜನಿಕರು ಆತಂಕಪಡುವ ಅಗತ್ಯ ಇಲ್ಲ. ಗಡಿಭಾಗದಲ್ಲಿ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸರ್ಕಾರದಿಂದ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರದಿಂದಲೂ ಈ ಬಗ್ಗೆ ಪತ್ರ ಬಂದಿದೆ. ಕಳೆದ ಬಾರಿ ಕೇರಳದಲ್ಲಿ ನಿಫಾದಿಂದ ಹಲವರು ಸಾವನ್ನಪ್ಪಿದ್ದಾರೆ. ನಮ್ಮ ರಾಜ್ಯದಲ್ಲಿ ಯಾವುದೇ ಸಾವು ಆಗಿರಲಿಲ್ಲ. ನಿಫಾ ವೈರಸ್ ಬಗ್ಗೆ ಮಾಹಿತಿಯಿದ್ದರೆ ತಕ್ಷಣ ತಿಳಿಸಿ. ಕೂಡಲೇ ಸರ್ಕಾರಿ ಆಸ್ಪತ್ರೆಗೆ ಮಾಹಿತಿ ನೀಡಿ," ಎಂದು ಸಾರ್ವಜನಿಕರಿಗೆ ಸಚಿವ ಶಿವಾನಂದ ಪಾಟೀಲ್ ಮನವಿ ಮಾಡಿದ್ದಾರೆ.

ಕೇರಳಕ್ಕೆ ಹೊಂದಿಕೊಂಡಿರುವ 8 ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದತೆ 8 ಜಿಲ್ಲೆಗಳಲ್ಲಿ ನಿಗಾ ವಹಿಸಲಾಗಿದೆ. ಅಲ್ಲದೆ ಪ್ರತಿದಿನ ವೈದ್ಯಕೀಯ ವರದಿ ನೀಡಲು ಸರ್ಕಾರ ಸೂಚಿಸಿದೆ. ಒಂದು ವೇಳೆ ನಿಫಾ ಸೋಂಕು ಪತ್ತೆಯಾದಲ್ಲಿ ಅವರನ್ನು ಜನರಿಂದ ಪ್ರತ್ಯೇಕಿಸಲು ಸೂಚಿಸಲಾಗಿದೆ.  

ಇದನ್ನೂ ಓದಿ: ಕೇರಳದಲ್ಲಿ ಮತ್ತೆ ನಿಫಾ: 23ವರ್ಷದ ಯುವಕನಲ್ಲಿ ಕಾಣಿಸಿಕೊಂಡ ವೈರಸ್​​; ಆತಂಕ ಬೇಡ ಎಂದ ಸರ್ಕಾರ

ಬಾವಲಿ ತಿಂದು ಬಿಟ್ಟ ಹಣ್ಣಿನ ಬಗ್ಗೆ ಎಚ್ಚರಿಕೆ ಇರಲಿ. ಈ ಸಮಯದಲ್ಲಿ ಕೇರಳಕ್ಕೆ ಹೋಗುವುದು ಬೇಡ. ಕೇರಳದ ಗಡಿ ಪ್ರದೇಶಗಳಲ್ಲಿ ನಿಗಾ ವಹಿಸುವಂತೆ ಆದೇಶಿಸಲಾಗಿದೆ. ಸದ್ಯ ನಿಫಾ ವೈರಸ್ ಬಗ್ಗೆ ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಇಲಾಖೆಯ ಉಪ ನಿರ್ದೇಶಕ ಡಾ.ಬಿ.ಜಿ.ಪ್ರಕಾಶ್ ಕುಮಾರ್ ತಿಳಿಸಿದ್ದಾರೆ.

ಆಸ್ಪತ್ರೆಗಳಲ್ಲಿ ಪ್ರತ್ಯೇಕ ಬೆಡ್ ವ್ಯವಸ್ಥೆ ಮಾಡಬೇಕು. ಜೊತೆಗೆ ತಮಿಳುನಾಡಿನ ಊಟಿ, ನೀಲಗಿರಿ, ಕನ್ಯಾಕುಮಾರಿ, ಕೊಯಮುತ್ತೂರು, ದಿಂಡಿಗಲ್, ತಿರುವನ್ವೇಲಿ, ತೇಣಿಯಲ್ಲೂ ಕಟ್ಟೆಚ್ಚರ ಘೋಷಿಸಲಾಗಿದೆ. ಒಟ್ಟಿನಲ್ಲಿ ಮತ್ತೆ ನಿಫಾ ವೈರಸ್ ಭೀತಿ ಸೃಷ್ಟಿಸಿದ್ದು, ಎರ್ನಾಕುಲಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ದಾಖಲಾಗಿರುವ ಕಾಲೇಜು ವಿದ್ಯಾರ್ಥಿಯಲ್ಲಿ ಈ ವೈರಸ್ ಪತ್ತೆಯಾಗಿದೆ. ಹಾಗಾಗಿ ರಾಜ್ಯದ ಗಡಿಭಾಗದಲ್ಲಿ ಭಾರೀ ನಿಗಾ ವಹಿಸಲಾಗಿದೆ.
Loading...

ಕೇರಳದಲ್ಲಿ ಮಾರಕ ರೋಗ ನಿಫಾ ಪತ್ತೆ ಹಿನ್ನಲೆ ಕೊಡಗು ಜಿಲ್ಲಾ ಆರೋಗ್ಯಾಧಿಕಾರಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಕೇರಳ ಕೊಡಗು ಗಡಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ಕೇರಳದಿಂದ ಕೊಡಗಿಗೆ ಹೆಚ್ಚು ಜನ ಬರುವ ಹಿನ್ನೆಲೆ, ನಿಫಾ ಬಗ್ಗೆ ಆರೋಗ್ಯ ಇಲಾಖೆಯಿಂದ ಜಾಗೃತಿ ಮೂಡಿಲಾಗುತ್ತಿದೆ. ನಿಫಾ ಲಕ್ಷಣ ಕಂಡುಬಂದರೆ ತಕ್ಷಣ ತಿಳಿಸಲು ಸೂಚನೆ ನೀಡಲಾಗಿದೆ. ನಿಫಾ ಹರಡದಂತೆ ತಡೆಗಟ್ಟಲು ಸಹಕರಿಸಲು ಆರೋಗ್ಯಾಧಿಕಾರಿಗಳು  ಮನವಿ ಮಾಡಿದ್ದಾರೆ.

First published:June 6, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...