• Home
 • »
 • News
 • »
 • state
 • »
 • ಕೃಷಿ, ನೀರಾವರಿ ಯೋಜನೆಗಳ ಜಾರಿಯಲ್ಲಿ ರಾಜಿ ಇಲ್ಲ: ಡಿಸಿಎಂ ಅಶ್ವತ್ಥನಾರಾಯಣ

ಕೃಷಿ, ನೀರಾವರಿ ಯೋಜನೆಗಳ ಜಾರಿಯಲ್ಲಿ ರಾಜಿ ಇಲ್ಲ: ಡಿಸಿಎಂ ಅಶ್ವತ್ಥನಾರಾಯಣ

ಡಿಸಿಎಂ ಅಶ್ವತ್ಹನಾರಾಯಣ

ಡಿಸಿಎಂ ಅಶ್ವತ್ಹನಾರಾಯಣ

ರಾಮನಗರ ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ. ನಾಡಪ್ರಭು ಕೆಂಪೇಗೌಡರ ಮಾಗಡಿ ತಾಲೂಕಿನಲ್ಲೂ ಕೃಷಿ, ನೀರಾವರಿಗೆ ಪೂರಕವಾದ ಅನೇಕ ಯೋಜನೆಗಳು ಭರದಿಂದ ಕಾರ್ಯಗತವಾಗುತ್ತಿವೆ

 • Share this:

  ರಾಮನಗರ(ಡಿಸೆಂಬರ್​. 24): ರೈತರಿಗೆ ಪೂರಕವಾದ ಕೃಷಿ ಮತ್ತು ನೀರಾವರಿ ಯೋಜನೆಗಳನ್ನು ಕಾರ್ಯಗತ ಮಾಡುವ ವಿಷಯದಲ್ಲಿ ರಾಜ್ಯ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು. ರೈತ ದಿನದ ಅಂಗವಾಗಿ ಅನ್ನದಾತರನ್ನು ಹಾಗೂ ಬಿಜೆಪಿ ಕಾರ್ಯಕರ್ತರು, ಮುಖಂಡರನ್ನು ಭೇಟಿ ನೀಡಿ ಸಂವಾದ ನಡೆಸಿದ ನಂತರ ಹುಚ್ಚಹನುಮಗೌಡನ ಪಾಳ್ಯ ಗ್ರಾಮದಲ್ಲಿ ಮಾತನಾಡಿದ ಅವರು, ಕೃಷಿಗೆ ನೀರು ಓದಗಿಸುವುದು ಹಾಗೂ ಮನೆಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವುದು ಸರಕಾರದ ಬದ್ಧತೆ ಎಂದರು. ರಾಮನಗರ ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ. ನಾಡಪ್ರಭು ಕೆಂಪೇಗೌಡರ ಮಾಗಡಿ ತಾಲೂಕಿನಲ್ಲೂ ಕೃಷಿ, ನೀರಾವರಿಗೆ ಪೂರಕವಾದ ಅನೇಕ ಯೋಜನೆಗಳು ಭರದಿಂದ ಕಾರ್ಯಗತವಾಗುತ್ತಿವೆ. ಈ ಪೈಕಿ 66 ಕೆರೆಗಳನ್ನು ತುಂಬಿಸಿ 211 ಗ್ರಾಮಗಳಿಗೆ ನೀರು ಪೂರೈಸುವ ಶ್ರೀರಂಗ ಏತ ನೀರಾವರಿ ಯೋಜನೆಯೂ ಒಂದು. ಸುಮಾರು 175 ಕೋಟಿ ರೂಪಾಯಿ ವೆಚ್ಚದಲ್ಲಿ ಹೇಮಾವತಿ ನದಿಯಿಂದ ನೀರು ತರಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.


  ಸತ್ತೆಗಾಲ ನೀರಾವರಿ ಯೋಜನೆ:


  ಕಾವೇರಿ ನದಿಯ ಸತ್ತೆಗಾಲ ಅಣೆಕಟ್ಟೆಯಿಂದ ಗುರುತ್ವಾಕರ್ಷಣೆ ತಂತ್ರಜ್ಞಾನದ ಮೂಲಕ ಇಗ್ಗಲೂರು ಬ್ಯಾರೇಜಿಗೆ ನೀರು ಹರಿಸಿ, ಅಲ್ಲಿಂದ ಮೊಗೇನಹಳ್ಳಿ ಕೆರೆ, ಕಣ್ವ ಮತ್ತು ಮಂಚನಬೆಲೆ ಜಲಾಶಯಗಳಿಗೆ ಹಾಗೂ ವೈ.ಜಿ.ಗುಡ್ಡ ಕೆರೆಗೆ ನೀರನ್ನು ತುಂಬಿಸಲಾಗುವುದು. ನಾಲ್ಕು ತಾಲ್ಲೂಕುಗಳಿಗೆ ನೀರೊದಗಿಸುವ ಈ ಯೋಜನೆಯನ್ನು 540 ಕೋಟಿ ರೂ. ವೆಚ್ಚದಲ್ಲಿ ಕಾರ್ಯಗತ ಮಾಡಲಾಗುತ್ತಿದೆ. ಈ ಮೂಲಕ ಜಿಲ್ಲೆಯ ಎಲ್ಲ ಮನೆಗಳಿಗೂ ಶಾಶ್ವತವಾಗಿ ನದಿ ನೀರನ್ನು ಪೂರೈಕೆ ಮಾಡಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದರು.


  ಇದರ ಜತೆಗೆ, ಕೆಂಪೇಗೌಡರ ವೀರ ಸಮಾಧಿಯನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಮಾಗಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲಾಗುತ್ತಿದೆ. ನರೇಗಾ ಯೋಜನೆಯಲ್ಲಿ ಕೆರೆಗಳ ಹೂಳೆತ್ತಿಸಲಾಗಿದೆ. ಎತ್ತಿನಹೊಳೆ ಯೋಜನೆಯಿಂದಲೂ ನಮಗೆ ನೀರು ಬರುವುದಿದೆ. ತಿಪ್ಪಗೊಂಡನಹಳ್ಳಿ ಜಲಾಶಯದಲ್ಲಿ ಹೂಳೆತ್ತುವುದಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.


  ಇದನ್ನೂ ಓದಿ : Vinay Guruji: ಜೈವಿಕ ಕೃಷಿ ಹೆಚ್ಚಿಸಿ, ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ ವಿನಯ್ ಗುರೂಜಿ ಮನವಿ


  ಮುಖ್ಯವಾಗಿ ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ಕೊಳಚೆನೀರು ಹರಿದು ಬರುತ್ತಿದೆ. ಅದನ್ನು ತಪ್ಪಿಸಲಾಗುವುದು. ಆ ಜಲಾಶಯದ ತುಂಬಾ ನೀರು ತುಂಬಿದರೆ ಸುತ್ತಮುತ್ತ ರೈತರ ಜಮೀನಿನಲ್ಲಿರುವ ಬೋರ್‌ವೆಲ್‌ಗಳಲ್ಲಿ ಅಂತರ್ಜಲ ಉಕ್ಕಿ ಕೃಷಿಗೆ ಅನುಕೂಲವಾಗಲಿದೆ. ಇದಕ್ಕೆ ಸರಕಾರಕ್ಕೆ ಆದಷ್ಟು ಬೇಗ ಕ್ರಮ ಕೈಗೊಳ್ಳಲಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.


  ದಂಡೇನಹಳ್ಳಿ ಸುತ್ತಮುತ್ತ ಕೆಐಎಡಿಬಿಯಿಂದ ಭೂ ಸ್ವಾಧೀನ ಇಲ್ಲ


  ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿಯ ದಂಡೇನಹಳ್ಳಿ ಸುತ್ತಮುತ್ತ ಕೆಐಎಡಿಬಿಯಿಂದ ಯಾವುದೇ ಜಮೀನು ಸ್ವಾಧೀನ ಮಾಡಿಕೊಳ್ಳುತ್ತಿಲ್ಲ ಎಂದು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.


  ತಾಲೂಕಿನ ತಮ್ಮ ಊರಾದ ಚಿಕ್ಕಲ್ಯದಲ್ಲಿ ರೈತರ ಜತೆ ಮಾತನಾಡಿದ ಅವರು, ಸ್ವಾಧೀನ ಮಾಡಿಕೊಳ್ಳಲಾಗುತ್ತಿದೆ ಎಂದು ಸುಳ್ಳು ಸುದ್ದಿಗಳನ್ನು ಕೆಲವರು ಹಬ್ಬಿಸುತ್ತಿದ್ದಾರೆ. ಇದರಲ್ಲಿ ಸತ್ಯಾಂಶವಿಲ್ಲ. ಈಗಾಗಲೇ ಬಿಡದಿ ಬಳಿ ಹತ್ತು ಸಾವಿರ ಎಕರೆ ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ಆ ಭೂಮಿಯನ್ನೇ ಇನ್ನೂ ವಶಕ್ಕೆ ಪಡೆದಿಲ್ಲ. ಕೆಲವರು ರೈತರನ್ನು ದಾರಿ ತಪ್ಪಿಸಿ ಜಮೀನು ಲಪಟಾಯಿಸಲು ಈ ರೀತಿ ಮಾಡುತ್ತಿರಬಹುದು. ಎಚ್ಚರದಿಂದ ಇರು ಎಂದು ಸಲಹೆ‌ ನೀಡಿದರು.

  Published by:G Hareeshkumar
  First published: