ಬೆಂಗಳೂರು (ಆಗಸ್ಟ್ 28): ಬೆಳಗಾವಿಯ ಪೀರನವಾಡಿಯಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗಾಗಿ ಹೋರಾಟ ನಡೆಸುತ್ತಿರುವವರ ಮೇಲಿನ ಪೊಲೀಸರ ಲಾಠಿ ಪ್ರಹಾರ ಖಂಡನೀಯ. ರಾಜ್ಯ ಸರ್ಕಾರ ನೆಲ, ಜಲ, ಭಾಷೆ ಮತ್ತು ನಾಡಿನ ಹೆಮ್ಮೆಯ ವ್ಯಕ್ತಿತ್ವಗಳ ವಿಷಯದಲ್ಲಿ ರಾಜಿ ಮಾಡಿಕೊಳ್ಳುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬೆಳಗಾವಿಯ ಪೀರನವಾಡಿಯಲ್ಲಿ ಮಹಾರಾಷ್ಟ್ರ ಮೂಲದ ಎಂಇಎಸ್ ಮತ್ತು ಶಿವಸೇನೆ ಶಿವಾಜಿ ಮಹಾರಾಜ ಅವರ ಪ್ರತಿಮೆ ಸ್ಥಾಪನೆಗೆ ಮುಂದಾಗಿತ್ತು. ಆದರೆ, ಇದನ್ನು ವಿರೋಧಿಸಿದ್ದ ಕನ್ನಡ ಪರ ಹೋರಾಟಗಾರರು ಈ ಸ್ಥಳದಲ್ಲಿ ಕರ್ನಾಟಕದ ಸ್ವಾತಂತ್ಯ್ರ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗಾಗಿ ಹೋರಾಟಕ್ಕೆ ಮುಂದಾಗಿದ್ದರು. ಆದರೆ, ಈ ವೇಳೆ ರಾಜ್ಯ ಸರ್ಕಾರ ಕನ್ನಡ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ನಡೆಸಿದೆ.
ಬೆಳಗಾವಿಯ ಪೀರನವಾಡಿಯಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗಾಗಿ ಹೋರಾಟ ನಡೆಸುತ್ತಿರುವವರ ಮೇಲಿನ ಪೊಲೀಸರ ಲಾಠಿ ಪ್ರಹಾರ ಖಂಡನೀಯ.
ನಾನು ಈಗಷ್ಟೆ ಅಲ್ಲಿನ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಕಮಿಷನರ್ ಜೊತೆ ಮಾತನಾಡಿ ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ನಿಭಾಯಿಸುವಂತೆ ತಿಳಿಸಿದ್ದೇನೆ. #sangollirayanna
1/2
— Siddaramaiah (@siddaramaiah) August 28, 2020
ಸಂಗೊಳ್ಳಿ ರಾಯಣ್ಣನ ಪ್ರತಿಮೆಸ್ಥಾಪನೆಯನ್ನು @BJP4Karnataka ಸರ್ಕಾರ ನಿರ್ಲಕ್ಷದಿಂದ ವಿವಾದ ಮಾಡಿಕೊಂಡಿದೆ.
ನೆಲ,ಜಲ,ಭಾಷೆ ಮತ್ತು ನಾಡಿನ ಹೆಮ್ಮೆಯ ವ್ಯಕ್ತಿತ್ವಗಳ ವಿಷಯದಲ್ಲಿ ರಾಜಿ ಸಲ್ಲದು.
ಕನ್ನಡ ಸಂಘಟನೆಗಳು
ಮತ್ತು ರಾಯಣ್ಣ ಅಭಿಮಾನಿಗಳು ಕೂಡಾ ಸಂಯಮದಿಂದ ವರ್ತಿಸಿ ವಿವಾದ ಇತ್ಯರ್ಥಕ್ಕೆ ಸಹಕರಿಸಬೇಕು
2/2
— Siddaramaiah (@siddaramaiah) August 28, 2020
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ