Hijab Row: ಹಿಜಾಬ್ ಧರಿಸಿ ಬಂದ್ರೆ ಪರೀಕ್ಷೆಗೆ ಎಂಟ್ರಿ ಇಲ್ಲ: ಸರ್ಕಾರದ ಸ್ಪಷ್ಟನೆ; ಬಿಕಾಂ ಎಕ್ಸಾಂಗೆ ಮುಸ್ಕಾನ್ ಗೈರು

ಹೈಕೋರ್ಟ್ (Karnataka High Court) ಕರ್ನಾಟಕ ಸರ್ಕಾರ ಹೊರಡಿಸಿರುವ ಏಕರೂಪ ವಸ್ತ್ರ ಸಂಹಿತೆ  (Dress Code) ಆದೇಶವನ್ನು ಎತ್ತಿ ಹಿಡಿದಿದೆ. ಹಾಗಾಗಿ ಪರೀಕ್ಷೆಗೆ ಹಾಜರಾಗಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಎಲ್ಲ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Hijab Row: ಹಿಜಾಬ್ ವಿವಾದದ ನಡುವೆ ರಾಜ್ಯದಲ್ಲಿ ಪದವಿ ಪರೀಕ್ಷೆಗಳು (Exams) ನಡೆಯುತ್ತಿವೆ. ಇತ್ತ ಪಿಯು ಪೂರ್ವ ಸಿದ್ಧತಾ ಪರೀಕ್ಷೆಗಳು (PU Exams) ನಡೆಯುತ್ತಿದ್ದು, ಹಿಜಾಬ್ ಪರ ಪ್ರತಿಭಟನೆ ನಡೆಸಿದ ಬಹುತೇಕ ವಿದ್ಯಾರ್ಥಿನಿಯರು ಗೈರಾಗುತ್ತಿದ್ದಾರೆ. ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿಗಳಿಗೆ ಯಾವುದೇ ವಿನಾಯ್ತಿ ನೀಡಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (Minister B C Nagesh) ಸಹ ಸ್ಪಷ್ಟಪಡಿಸಿದ್ದಾರೆ. ಹೈಕೋರ್ಟ್ (Karnataka High Court) ಕರ್ನಾಟಕ ಸರ್ಕಾರ ಹೊರಡಿಸಿರುವ ಏಕರೂಪ ವಸ್ತ್ರ ಸಂಹಿತೆ  (Dress Code) ಆದೇಶವನ್ನು ಎತ್ತಿ ಹಿಡಿದಿದೆ. ಹಾಗಾಗಿ ಪರೀಕ್ಷೆಗೆ ಹಾಜರಾಗಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಎಲ್ಲ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪನ್ನು ಅನುಸರಿಸಬೇಕು. ವಿದ್ಯಾರ್ಥಿಗಳು ತಮ್ಮ ತಪ್ಪನ್ನು ಅರಿತುಕೊಂಡು ಪರೀಕ್ಷೆಗೆ ಹಾಜರಾಗಬೇಕು. ಪರೀಕ್ಷೆಗಳಿಂದ ದೂರವಾದ್ರೂ ಬೋರ್ಡ್ ನಡೆಸುವ ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಬೇಕು. ಪೂರಕ ಪರೀಕ್ಷೆಯಲ್ಲಿ ಹಿಜಾಬ್ ಗೆ ಯಾವುದೇ ಅನುಮತಿ ಇರಲ್ಲ ಎಂದು ಒತ್ತಿ ಒತ್ತಿ ಹೇಳಿದರು.

ಪರೀಕ್ಷೆಗೆ ಗೈರಾದ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಮುಸ್ಕಾನ್

ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದ ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ನಿನ್ನೆ ನಡೆದ ಬಿಕಾಂ ಪರೀಕ್ಷಗೆ ಗೈರಾಗಿದ್ದಾರೆ. ಮುಸ್ಕಾನ್ ಮಂಡ್ಯದ ಪಿಇಎಸ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಪರೀಕ್ಷಾ ಪ್ರವೇಶ ಪತ್ರವನ್ನು ಪಡೆದುಕೊಂಡಿಲ್ಲ. ಅಲ್ಲಾಹು ಅಕ್ಬರ್ ಘೋಷಣೆ ಬಳಿಕ ಮುಸ್ಕಾನ್ ಹಿಜಾಬ್ ಐಕಾನ್ ಆಗಿದ್ದಾರೆ.

ಇದನ್ನೂ ಓದಿ:  Karnataka Assembly: ಹಿಜಾಬ್ ಹಿಂದಿರೋ ಕಾಣದ ಕೈಗಳು ಯಾವುದು ಗೊತ್ತಾ?, ಹರ್ಷ ಕೊಲೆ ಹಿಂದಿನ ಸತ್ಯ ಜನರಿಗೆ ತಿಳಿಸಿ- HDK ಆಗ್ರಹ

ಹಿಜಾಬ್ ಅವಕಾಶ ಕೊಡದಕ್ಕೆ ಕಾಲೇಜಿಗೆ ಕಳುಹಿಸಲ್ಲ ಎಂದು ಮುಸ್ಕಾನ್ ತಂದೆ ಹೇಳಿಕೆ ನೀಡಿದ್ದಾರೆ. ಹಿಜಾಬ್ ಧರಿಸಲು ಅನುಮತಿ ನೀಡುವ ಕಾಲೇಜಿಗೆ ಮಗಳನ್ನು ಸೇರಿಸಲು ಮುಸ್ಕಾನ್ ತಂದೆ ನಿರ್ಧರಿಸಿದ್ದಾರೆ.  ಈ ಹಿನ್ನೆಲೆ ಮುಸ್ಕಾನ್ ಪರೀಕ್ಷೆಗೆ ಗೈರಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ತುರ್ತು ಅರ್ಜಿ ವಿಚಾರಣೆಗೆ ಸುಪ್ರಿಂ ನಕಾರ

ಶಾಲೆಗಳಲ್ಲಿ ಹಿಜಾಬ್ (Hijab) ಧರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಮಾರ್ಚ್ 15ರಂದು ಕರ್ನಾಟಕ ಹೈಕೋರ್ಟ್ (Karnataka High Court) ನೀಡಿರುವ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿನಲ್ಲಿ (Supreme Court) ಮೇಲ್ಮನವಿ ಸಲ್ಲಿಸಲಾಗಿದೆ‌. ಈ ಬಗ್ಗೆ ತುರ್ತಾಗಿ ವಿಚಾರಣೆ ನಡೆಸಬೇಕೆಂದು ಕಳೆದ ವಾರ ಮನವಿ ಮಾಡಿಕೊಳ್ಳಲಾಗಿತ್ತು. ಆದರೆ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿ ಸೂಚಿಸಿರಲಿಲ್ಲ. ಆಗ ಹೋಳಿ (Holi) ಹಬ್ಬದ ಬಳಿಕ ವಿಚಾರಣೆಗೆ ದಿನಾಂಕ ನಿಗಧಿ ಮಾಡಲಾಗುವುದು ಎಂದು ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಮತ್ತೊಮ್ಮೆ ಸುಪ್ರೀಂ ಕೋರ್ಟಿನಲ್ಲಿ ವಿಷಯ ಪ್ರಸ್ತಾಪಿಸಲಾಗಿದ್ದು ಸುಪ್ರೀಂ ಕೋರ್ಟ್ ಮತ್ತೊಮ್ಮೆ ತುರ್ತು ವಿಚಾರಣೆಗೆ ನಿರಾಕರಿಸಿದೆ.

ಹೈಕೋರ್ಟ್ ತೀರ್ಪು ಹೊರಬೀಳುತ್ತಿದ್ದಂತೆ ನಿಬಾ ನಾಜ್ ಎಂಬ ವಿದ್ಯಾರ್ಥಿನಿ ಸುಪ್ರೀಂ ಕೋರ್ಟಿನಲ್ಲಿ ವಕೀಲ ಅನಸ್ ತನ್ವೀರ್ ಮೂಲಕ ಅರ್ಜಿ ಸಲ್ಲಿಕೆ ಮಾಡಿದ್ದರು. ಇದಲ್ಲದೆ ಉಡುಪಿಯಲ್ಲಿ ಪ್ರತಿಭಟನೆ ಮಾಡಿದ ಆರು ವಿದ್ಯಾರ್ಥಿನಿಯರ ಪರ ಹೈಕೋರ್ಟಿನಲ್ಲಿ ವಾದ ಮಂಡಿಸಿದ್ದ ವಕೀಲರಾದ ಸಂಜಯ್ ಹೆಗಡೆ ಮತ್ತು ದೇವದತ್ ಕಾಮತ್ ಅವರು ಮಾರ್ಚ್ 16ರಂದು ಪ್ರತ್ಯೇಕವಾಗಿ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು.

ತುರ್ತು ಅರ್ಜಿ ವಿಚಾರಣೆ ಕಾಮತ್ ಮನವಿ

ಅರ್ಜಿ ಸಲ್ಲಿಕೆಯ ಬಳಿಕ ಓಪನ್ ಕೋರ್ಟಿನಲ್ಲಿ ಮೆನ್ಷನ್ ಮಾಡಿ ತುರ್ತಾಗಿ ವಿಚಾರಣೆ ನಡೆಸಬೇಕೆಂದು ಮನವಿ ಮಾಡಿಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸುಪ್ರೀಂ ಕೋರ್ಟ್ ಹೋಳಿ ಹಬ್ಬದ ಬಳಿಕ ವಿಚಾರಣೆಗೆ ದಿನಾಂಕ ನಿಗಧಿ ಮಾಡಲಾಗುವುದು ಎಂದು ಹೇಳಿತು.

ಇದನ್ನೂ ಓದಿ:  Hijab ವಿವಾದದ ನಡುವೆ ಹೀಗೊಂದು Friendship Story, ಹಿಂದೂ ಗೆಳೆಯನಿಗೆ ಕಿಡ್ನಿ ಕೊಡಲು ಮುಂದಾದ ಮುಸ್ಲಿಂ ವ್ಯಕ್ತಿ!

ಆಗ ವಕೀಲ ಸಂಜಯ್ ಹೆಗಡೆ ಸೋಮವಾರವಾದರೂ (ಮಾರ್ಚ್ 21) ವಿಚಾರಣೆ ನಡೆಸಿ ಎಂದು ಕೇಳಿಕೊಂಡಿದ್ದರು. ಸುಪ್ರೀಂ ಕೋರ್ಟ್ ಅದಕ್ಕೂ ಮಾನ್ಯ ಮಾಡಲಿಲ್ಲ. ಇದಾದ ಮೂರು ದಿನವಾದರೂ ಪ್ರಕರಣದ ಬಗ್ಗೆ ವಿಚಾರಣೆ ನಡೆಸಲು ಲಿಸ್ಟ್ ಆಗದಿದ್ದ ಕಾರಣಕ್ಕೆ ಇಂದು ವಕೀಲ ದೇವದತ್ ಕಾಮತ್ ಮತ್ತೊಮ್ಮೆ ವಿಷಯ ಪ್ರಸ್ತಾಪಿಸಿದರು. ಆದರೆ ಸುಪ್ರೀಂ ಕೋರ್ಟ್ ಗುರುವಾರ ಕೂಡ ಮಾನ್ಯ ಮಾಡಲಿಲ್ಲ.
Published by:Mahmadrafik K
First published: