ಬೆಂಗಳೂರು(ಜ. 21): ಮಹಾರಾಷ್ಟ್ರ ಕಾಂಗ್ರೆಸ್ ಮತ್ತು ಯುಪಿಎ ಮಾದರಿಯಲ್ಲೇ ರಾಜ್ಯದಲ್ಲೂ ಸ್ಥಾನ ಹಂಚಿಕೆ ಆಗಲಿ. ನಮ್ಮದು ರಾಷ್ಟ್ರೀಯ ಪಕ್ಷ ದೇಶಕ್ಕೆ ಒಂದೇ ಮಾದರಿ ಇರಬೇಕು. ಹಾಗಾಗಿ ರಾಜ್ಯದಲ್ಲೂ ವಿರೋಧ ಪಕ್ಷದ ನಾಯಕ ಮತ್ತು ಸಿಎಲ್ಪಿ ಸ್ಥಾನ ಪ್ರತ್ಯೇಕವಾಗಲಿ ಸಿದ್ದರಾಮಯ್ಯಗೆ ಪರೋಕ್ಷವಾಗಿ ಮಾಜಿ ಸಚಿವ ಹೆಚ್ ಕೆ ಪಾಟೀಲ್ ತಿರುಗೇಟು ನೀಡಿದ್ದಾರೆ.
ವಿಪಕ್ಷ ನಾಯಕ ಮತ್ತು ಸಿಎಲ್ಪಿ ನಾಯಕ ಹುದ್ದೆ ಪ್ರತ್ಯೇಕವಾಗಲಿ. ಸಮ್ಮಿಶ್ರ ಸರ್ಕಾರ ಇದ್ದಾಗ ಹುದ್ದೆ ವಿಭಾಗವಾಗಿತ್ತು. ಕೇಂದ್ರದಲ್ಲಿ ಯುಪಿಎ ಅವಧಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಸೇರಿದಂತೆ ಹುದ್ದೆ ಹಂಚಿಕೆ ಆಗಿತ್ತು. ಮಹಾರಾಷ್ಟ್ರದಲ್ಲೂ ಹಿಂದೆ ಸಿಎಲ್ಪಿ ಮತ್ತು ವಿಪಕ್ಷ ಸ್ಥಾನ ಹಂಚಿಕೆ ಆಗಿತ್ತು. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ನೀವಾ ಅನ್ನೊ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ ಎಂದರು.
ಕೆಪಿಸಿಸಿಯಲ್ಲಿ 4 ಕಾರ್ಯಾಧ್ಯಕ್ಷ ಸ್ಥಾನ ನೀಡಿ ಎಂದು ಹೈಕಮಾಂಡ್ಗೆ
ಸಿದ್ದರಾಮಯ್ಯ ಮನವಿ ಮಾಡಿದ್ದರು. ಇದಕ್ಕೆ ನೇರವಾಗಿ ವಿರೋಧ ವ್ಯಕ್ತಪಡಿಸಿದ ಹೆಚ್.ಕೆ. ಪಾಟೀಲ್, ನಾಲ್ಕು ಕಾರ್ಯಾಧ್ಯಕ್ಷ ಸ್ಥಾನ ಅವಶ್ಯಕತೆ ಇಲ್ಲ. ಯಾಕೆ ನಾಲ್ಕು ಕಾರ್ಯಾಧ್ಯಕ್ಷ ಬೇಕು ಅಂತಿದ್ದಾರೋ ಗೊತ್ತಿಲ್ಲ. ಈಗ ಇರೋ ಒಂದು ಕಾರ್ಯಾಧ್ಯಕ್ಷ ಸ್ಥಾನ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನ ಮುಂದುವರೆಸಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯಗೆ ಎಚ್ ಕೆ. ಪಾಟೀಲ್ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ :
ಅಗತ್ಯಕ್ಕಿಂತ ಹೆಚ್ಚು ತಿಂದ್ರೆ ವಾಂತಿಯಾಗುತ್ತೆ - ಮತ್ತೊಂದು ಅಪರೇಷನ್ ಕಮಲದ ವಿರುದ್ಧ ಹೊರಟ್ಟಿ ಕಿಡಿ
ಅಧ್ಯಕ್ಷ ಸ್ಥಾನದ ಆಯ್ಕೆ ಈಗಾಗಲೇ ವಿಳಂಬ ಆಗಿದೆ. ಕೂಡಲೇ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಆಗಲಿ. ಪಕ್ಷದ ಹಿತದೃಷ್ಟಿಯಿಂದ ಅಧ್ಯಕ್ಷರ ಆಯ್ಕೆ ಮುಖ್ಯವಾಗಿದೆ. ಜಿಲ್ಲಾ ಪಂಚಾಯತಿ ಮತ್ತು ಗ್ರಾಮ ಪಂಚಾಯ್ತಿ ಚುನಾವಣೆ ಬರುತ್ತಿದೆ. ಹೀಗಾಗಿ ಪಕ್ಷ ಸಂಘಟನೆ ಮುಖ್ಯ ಕೂಡಲೇ ಹೈಕಮಾಂಡ್ ಅಧ್ಯಕ್ಷರ ನೇಮಕ ಮಾಡಲಿ ಎಂದು ಮಾಜಿ ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ