ಕಪಾಲಿ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣ ವಿಚಾರದಲ್ಲಿ ರಾಜಕೀಯ ಬೇಡ; ಬಿಎಸ್​ವೈ ಮನವಿ ಮಾಡಿದ ಕ್ರೈಸ್ತ ನಿಯೋಗ

ಕುರಿತು ಇಂದು ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವ ಕ್ರೈಸ್ತ ಸಮುದಾಯದ ನಿಯೋಗದ ಪ್ರಮುಖ ಮುಖಂಡರು ತಮಗೆ ಕಪಾಲಿ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

news18-kannada
Updated:January 5, 2020, 3:27 PM IST
ಕಪಾಲಿ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣ ವಿಚಾರದಲ್ಲಿ ರಾಜಕೀಯ ಬೇಡ; ಬಿಎಸ್​ವೈ ಮನವಿ ಮಾಡಿದ ಕ್ರೈಸ್ತ ನಿಯೋಗ
ಸಿಎಂ ಬಿಎಸ್ ಯಡಿಯೂರಪ್ಪ.
  • Share this:
ಬೆಂಗಳೂರು (ಜನವರಿ 05); ರಾಜ್ಯದಲ್ಲಿ ಇತ್ತೀಚೆಗೆ ಸುದ್ದಿ ಕೇಂದ್ರದಲ್ಲಿ ಸದ್ದು ಮಾಡುತ್ತಿರುವ ಕಪಾಲಿ ಬೆಟ್ಟದಲ್ಲಿ ಏಸು ಕ್ರಿಸ್ತನ ಪ್ರತಿಮೆಯನ್ನು ನಿರ್ಮಾಣ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕ್ರೈಸ್ತ ಧರ್ಮೀಯರ ನಿಯೋಗ ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಕಳೆದ ವಾರ ಕಪಾಲಿ ಬೆಟ್ಟದಲ್ಲಿ ಏಸು ಕ್ರಿಸ್ತನ ಪ್ರತಿಮೆಯನ್ನು ನಿರ್ಮಾಣ ಮಾಡುವ ಕುರಿತ ಸುದ್ದಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿತ್ತು. ಈ ಹಿನ್ನೆಲೆಯಲ್ಲಿ ಕೆಂಡಕಾರಿದ್ದ ಬಿಜೆಪಿ ನಾಯಕರು ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಅಲ್ಲದೆ, ಈ ಕುರಿತು ಪ್ರತಿಕ್ರಿಯಿಸಿದ್ದ ಯಡಿಯೂರಪ್ಪ ಕಪಾಲಿ ಬೆಟ್ಟದಲ್ಲಿ ಏಸು ಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ ಅನುಮತಿ ನೀಡಿದವರು ಯಾರು? ಈ ಕುರಿತು ತನಿಖೆ ಆಗಲಿ ಆನಂತರ ಪ್ರತಿಮೆ ನಿರ್ಮಾಣದ ಕುರಿತು ಚಿಂತನೆ ನಡೆಸೋಣ ಎಂದು ಕಡ್ಡಿ ಮುರಿದಂತೆ ತಿಳಿಸಿದ್ದರು.

ಈ ಕುರಿತು ಇಂದು ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವ ಕ್ರೈಸ್ತ ಸಮುದಾಯದ ನಿಯೋಗದ ಪ್ರಮುಖ ಮುಖಂಡರು ತಮಗೆ ಕಪಾಲಿ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಯಡಿಯೂರಪ್ಪ ಭೇಟಿ ನಂತರ ಮಾಧ್ಯಮಗಳ ಎದುರು ಹೇಳಿಕೆ ನೀಡಿರುವ ಕ್ರೈಸ್ತ ಮುಖಂಡ ಪೀಟರ್ ಮಚಾದೋ, “ಕಪಾಲಿ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣ ವಿಚಾರದಲ್ಲಿ ರಾಜಕೀಯ ಮಾಡೋದು ಬೇಡ. ಸುಮಾರು ವರ್ಷಗಳಿಂದಲೂ ಕ್ರೈಸ್ತ ಸಮುದಾಯದವರು ಈ ಜಾಗದಲ್ಲಿ ಯೇಸುವನ್ನು ಪೂಜಿಸುತ್ತಿದ್ದೇವೆ. ಇದೇ ಜಾಗದಲ್ಲಿ ಇದೀಗ ಏಸು ಪ್ರತಿಮೆ ನಿರ್ಮಾಣವಾಗುತ್ತಿದೆ. ಇದಕ್ಕೆ ವಿರೋಧ ಬೇಡ ಎಂದು ಸಿಎಂ ಯಡಿಯೂರಪ್ಪ ಅವರ ಬಳಿ ಮನವಿ ಮಾಡಿದ್ದೇವೆ” ಎಂದು ತಿಳಿಸಿದ್ದಾರೆ.

ಏಸು ಪ್ರತಿಮೆಗೆ ಕೇಳಿ ಬರುತ್ತಿರುವ ವಿರೋಧದ ಬಗ್ಗೆಯೂ ಮಾತನಾಡಿರುವ ಅವರು, “ಕಪಾಲಿ ಬೆಟ್ಟದಲ್ಲಿ ಹಿಂದು ದೇವತೆಗಳನ್ನು ಪೂಜೆ ಮಾಡ್ತಾ ಇದ್ದರು ಎನ್ನುವ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಇನ್ನೂ ನಾವು ಯಾರನ್ನು ಮತಾಂತರ ಮಾಡುತ್ತಿಲ್ಲ. ಮತಾಂತರ ಮಾಡೋದು ಅಷ್ಟು ಸುಲಭದ ಕೆಲಸವೂ ಅಲ್ಲ. ಹಿಂದೆ ಬಂದಿದ್ದ ಕ್ರೈಸ್ತ ಮೆಷಿನರಿಗಳು ಮತಾಂತರ ಮಾಡಿರಬಹದು. ಆದರೆ, ನಾವು ಒಂದುವರೆ ಲಕ್ಷ ಮಕ್ಕಳಿಗೆ ವಿದ್ಯಾಭ್ಯಾಸ ನೀಡುತ್ತಿದ್ದೇವೆ, ಈ ಪೈಕಿ ಒಬ್ಬರನ್ನಾದರೂ ಮತಾಂತರ ಮಾಡಿದ್ದನ್ನು ತೋರಿಸಲಿ” ಎಂದಿದ್ದಾರೆ.

ಇದನ್ನೂ ಓದಿ : ಕಪಾಲ ಬೆಟ್ಟದಲ್ಲಿ ಯೇಸು ಪ್ರತಿಮೆಗೆ ಮಂಜೂರಾದ ಜಮೀನಿನ ಸುತ್ತ ವಿವಾದ; ತನಿಖೆಗೆ ಸರ್ಕಾರ ಚಿಂತನೆ
Published by: MAshok Kumar
First published: January 5, 2020, 3:27 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading