Power Rate: ಸದ್ಯಕ್ಕೆ ವಿದ್ಯುತ್ ದರ ಹೆಚ್ಚಳ ಇಲ್ಲ; ಇಂಧನ ಸಚಿವ ವಿ.ಸುನೀಲ್ ಕುಮಾರ್ ಸ್ಪಷ್ಟನೆ

ವಿದ್ಯುತ್ ದರ ಪರಿಷ್ಕರಣೆಗೆ ರಾಜ್ಯ ಸರಕಾರ ಮುಂದಾಗಿದೆ ಎಂಬ ಬಗ್ಗೆ ಕೆಲವೆಡೆ ತಪ್ಪು ಸಂದೇಶ ರವಾನೆಯಾಗಿದೆ. ಆದರೆ ರಾಜ್ಯ ಸರಕಾರದ ಮುಂದೆ ಅಂಥ ಯಾವುದೇ ಪ್ರಸ್ತಾಪವಿಲ್ಲ ಎಂದು ಇಂಧನ ಸಚಿವ ಸುನೀಲ್​ ಕುಮಾರ್​ ಹೇಳಿದ್ದಾರೆ.

ಸಚಿವ ಸುನಿಲ್ ಕುಮಾರ್

ಸಚಿವ ಸುನಿಲ್ ಕುಮಾರ್

  • Share this:
ಬೆಂಗಳೂರು (ಜೂ 28): ರಾಜ್ಯದಲ್ಲಿ ವಿದ್ಯುತ್​ ದರ ಏರಿಕೆ (Power Rate Hike) ಬಗ್ಗೆ ತಪ್ಪು ಮಾಹಿತಿ ಹರಡುತ್ತಿದೆ. ವಿದ್ಯುತ್ ದರ ಹೆಚ್ಚಳಕ್ಕೆ ರಾಜ್ಯ ಸರಕಾರ (State Government) ಯಾವುದೇ ಸೂಚನೆ ನೀಡಿಲ್ಲ. ಕಲ್ಲಿದ್ದಲು ಹಾಗೂ‌‌ ಪೆಟ್ರೋಲಿಯಂ‌ ಉತ್ಪನ್ನಗಳ ಮಾರುಕಟ್ಟೆ ದರ ಆಧರಿತ ಹೊಂದಾಣಿಕೆ ವೆಚ್ಚದಲ್ಲಿ‌ ಮಾತ್ರ ವ್ಯತ್ಯಾಸವಾಗಿದೆ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ (Sunil Kumar) ಸ್ಪಷ್ಟಪಡಿಸಿದ್ದಾರೆ.

ವಿದ್ಯುತ್ ದರ ಪರಿಷ್ಕರಣೆ ಬಗ್ಗೆ ತಪ್ಪು ಸಂದೇಶ ರವಾನೆ

ವಿದ್ಯುತ್ ದರ ಪರಿಷ್ಕರಣೆಗೆ ರಾಜ್ಯ ಸರಕಾರ ಮುಂದಾಗಿದೆ ಎಂಬ ಬಗ್ಗೆ ಕೆಲವೆಡೆ ತಪ್ಪು ಸಂದೇಶ ರವಾನೆಯಾಗಿದೆ. ಆದರೆ ರಾಜ್ಯ ಸರಕಾರದ ಮುಂದೆ ಅಂಥ ಯಾವುದೇ ಪ್ರಸ್ತಾಪವಿಲ್ಲ.‌ ವಿದ್ಯುತ್ ದರವನ್ನು ವರ್ಷದಲ್ಲಿ ಒಮ್ಮೆ ಮಾತ್ರ ಪರಿಷ್ಕರಿಸುವುದು ವಾಡಿಕೆಯಾಗಿದೆ. ಹೀಗಾಗಿ ದರ ಹೆಚ್ಚಳದ ವದಂತಿ ಬಗ್ಗೆ ಸಾರ್ವಜನಿಕರು ಆತಂಕಗೊಳ್ಳಬೇಕಾದ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ವಿದ್ಯುತ್ ಸರಬರಾಜು‌‌ ಕಂಪನಿ ವ್ಯಾಪ್ತಿಯಲ್ಲಿ‌ ಪರಿಷ್ಕರಣೆ

ರಾಜ್ಯದಲ್ಲಿ 13 ಉಷ್ಣ ವಿದ್ಯುತ್ ಸ್ಥಾವರಗಳಿವೆ. ಇವುಗಳ ಕಾರ್ಯ ನಿರ್ವಹಣೆಗೆ ಅಗತ್ಯವಾದ ಕಲ್ಲಿದ್ದಲು ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಅಗತ್ಯವಿರುತ್ತದೆ.‌ ಇವುಗಳ ಮಾರುಕಟ್ಟೆ ದರದ ಏರಿಳಿತ ಆಧರಿಸಿ ಎಲ್ಲ ವಿದ್ಯುತ್ ಸರಬರಾಜು‌‌ ಕಂಪನಿ ವ್ಯಾಪ್ತಿಯಲ್ಲಿ‌ ಪ್ರತಿ ಮೂರು ತಿಂಗಳಿಗೊಮ್ಮೆ ಹೊಂದಾಣಿಕೆ ವೆಚ್ಚ  ಪರಿಷ್ಕರಣೆ ನಡೆಸುವುದು ನಿರಂತರ ಪ್ರಕ್ರಿಯೆ ಆಗಿರುತ್ತದೆ. ಈ ಸಂಬಂಧ ಎಸ್ಕಾಂಗಳು ಸಲ್ಲಿಸಿದ ಹೊಂದಾಣಿಕೆ ವೆಚ್ಚ ( fuel cost adjustment charges ) ಪ್ರಸ್ತಾಪ ಹಿನ್ನೆಲೆಯಲ್ಲಿ‌ ಕೆಇಆರ್ ಸಿ ಈ ದರ ಪರಿಷ್ಕರಿಸಿದೆ.

ಇದನ್ನೂ ಓದಿ: Vijayapura: ಪ್ಲಾಸ್ಟಿಕ್, ಮದ್ಯದ ಬಾಟಲಿ ಹೆಕ್ಕಿದ ಸ್ವಾಮೀಜಿ! ವಿಡಿಯೋ ನೋಡಿ

ವಾರ್ಷಿಕ ದರ ಪರಿಷ್ಕರಣೆ ಜತೆ ಥಳುಕು ಹಾಕ್ಬೇಡಿ

ಹೊಂದಾಣಿಕೆ ವೆಚ್ಚ ಪರಿಷ್ಕರಣೆ ಕೆಇಆರ್ ಸಿ  ವಿವೇಚನಾಧಿಕಾರವಾಗಿದ್ದು‌‌ ಕಲ್ಲಿದ್ದಲು ದರ ಆಧರಿಸಿ ಈ ಹೊಂದಾಣಿಕೆ ವೆಚ್ಚ ಹೆಚ್ಚೂ ಆಗಬಹುದು, ಕಡಿಮೆಯೂ ಆಗಬಹುದು. ಹೀಗಾಗಿ ಈ ಪ್ರಕ್ರಿಯೆಯನ್ನು ವಾರ್ಷಿಕ ದರ ಪರಿಷ್ಕರಣೆ ಜತೆ ಥಳುಕು ಹಾಕುವ ಅಗತ್ಯವಿಲ್ಲ ಎಂದು ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಅಂದ್ರೆ ಬೆಲೆ ಏರಿಕೆ, ಬೆಲೆ ಏರಿಕೆ ಅಂದ್ರೆ ಬಿಜೆಪಿ

ಬೆಂಗಳೂರು (ಜೂ 28): ವಿದ್ಯುತ್ ದರ ಏರಿಕೆ ವಿರುದ್ದ ಜೆಡಿಎಸ್​ ವರಿಷ್ಠ ಹಾಗೂ ಮಾಜಿ ಸಿಎಂ  ಹೆಚ್​​.ಡಿ  ಕುಮಾರಸ್ವಾಮಿ (H. D Kumaraswamy) ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬಿಜೆಪಿ ವಿರುದ್ಧ ಸರಣಿ ಟ್ವೀಟ್ (Tweet)​ ಮಾಡಿ HDK ಆಕ್ರೋಶ ಹೊರಹಾಕಿದ್ದಾರೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ (Assembly Election) ಹತ್ತಿರವಾಗ್ತಿದೆ. ಈಗ ವಿದ್ಯುತ್ ದರ ಏರಿಕೆ ಮಾಡಿ ಬಳಿಕ ಚುನಾವಣೆ ಸಮಯದಲ್ಲಿ ದರ ಇಳಿಸುವ ಸ್ಟೆಂಟ್ ಮಾಡ್ತಾರೆ. ಇದೇ ಅವರ ಯೋಚನೆ, ವೆಚ್ಚ ಹೊಂದಾಣಿಕೆಯ ಹೊಸ ಐಡಿಯಾ (New Idea) ಅಂದರೆ ಇದೇನಾ? ರಾಜ್ಯದಲ್ಲಿ ಉತ್ತಮ ಮಳೆಯಾಗಿ ಎಲ್ಲ ಜಲಾಶಯಗಳು ಭರ್ತಿಯಾಗಿವೆ. ವಿದ್ಯುತ್ ಉತ್ಪಾದನೆಯೂ ಚೆನ್ನಾಗಿದೆ. ಹೆಚ್ಚುವರಿ ವಿದ್ಯುತ್ ಇದೆ ಎಂದು ಸರಕಾರವೇ ಹೇಳುತ್ತಿದೆ. ಹೀಗಿದ್ದರೂ ದರ ಏರಿಕೆ!! ಇದರ ಹಿಂದಿನ ಹುನ್ನಾರ ಏನು? ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Shivamogga: ಆಸ್ಪತ್ರೆಯಲ್ಲಿ ಕೊಟ್ಟ ಇಂಜೆಕ್ಷನ್​ನಿಂದ 14 ಮಕ್ಕಳು ದಿಢೀರ್​ ಅಸ್ವಸ್ಥ; ಸ್ಥಳಕ್ಕೆ ಶಾಸಕರ ದೌಡು

ಕುಮಾರಸ್ವಾಮಿ ಸರಣಿ ಟ್ವೀಟ್​


 ಬೆಲೆ ಏರಿಕೆ ಬರೆ ಎಳೆಯುವಲ್ಲಿ ಬಿಜೆಪಿ ಸರಕಾರದ್ದು ಸಾರ್ವಕಾಲಿಕ ದಾಖಲೆ. ಏಪ್ರಿಲ್ 1ರಂದು ವಿದ್ಯುತ್ ದರ ಏರಿಸಿ ಜನರಿಗೆ ಶಾಕ್ ನೀಡಿದ್ದ ಸರಕಾರ, ಈಗ ಜುಲೈ 1ರಿಂದ ಮತ್ತೆ ವಿದ್ಯುತ್ ಬರೆ ಎಳೆಯಲು ಸಜ್ಜಾಗಿದೆ.ರಾಜ್ಯದಲ್ಲಿ ಉತ್ತಮ ಮಳೆಯಾಗಿ ಎಲ್ಲ ಜಲಾಶಯಗಳು ಭರ್ತಿಯಾಗಿವೆ. ವಿದ್ಯುತ್ ಉತ್ಪಾದನೆಯೂ ಚೆನ್ನಾಗಿದೆ. ಹೆಚ್ಚುವರಿ ವಿದ್ಯುತ್ ಇದೆ ಎಂದು ಸರಕಾರವೇ ಹೇಳುತ್ತಿದೆ. ಹೀಗಿದ್ದರೂ ದರ ಏರಿಕೆ!! ಇದರ ಹಿಂದಿನ ಹುನ್ನಾರ ಏನು? ಎಂದು ಪ್ರಶ್ನೆ ಮಾಡಿದ್ದಾರೆ.

Published by:Pavana HS
First published: