ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೂ ಪ್ರಗ್ಯಾ ಸಿಂಗ್​ಗೂ ಸಂಬಂಧವಿಲ್ಲ; ಎಸ್ಐಟಿ ಸ್ಪಷ್ಟನೆ

ಗೌರಿ ಲಂಕೇಶ್​​ ಹತ್ಯೆ ಪ್ರಕರಣದಲ್ಲಿ ಪ್ರಗ್ಯಾ ಸಿಂಗ್​ ಕೈವಾಡವಿರಬಹುದು ಎಂದು ಆಂಗ್ಲ ಮಾಧ್ಯಮವೊಂದು ವರದಿ ಮಾಡಿತ್ತು. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿತ್ತು.

Rajesh Duggumane | news18
Updated:May 9, 2019, 4:34 PM IST
ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೂ ಪ್ರಗ್ಯಾ ಸಿಂಗ್​ಗೂ ಸಂಬಂಧವಿಲ್ಲ; ಎಸ್ಐಟಿ ಸ್ಪಷ್ಟನೆ
ಪ್ರಗ್ಯಾ-ಗೌರಿ ಲಂಕೇಶ್​​
  • News18
  • Last Updated: May 9, 2019, 4:34 PM IST
  • Share this:
ಬೆಂಗಳೂರು (ಮೇ 9): ಹಿರಿಯ ಪತ್ರಕರ್ತೆ ಗೌರಿ ಲಂಕೇಶ್​ ಹತ್ಯೆ ಪ್ರಕರಣಕ್ಕೂ ಲೋಕಸಭಾ ಚುನಾವಣೆಯಲ್ಲಿ ಭೋಪಾಲ್​ನಲ್ಲಿ ಬಿಜೆಪಿ ಪಕ್ಷದಿಂದ ಕಣಕ್ಕೆ ಇಳಿದಿರುವ ಸಾಧ್ವಿ ಪ್ರಗ್ಯಾ ಸಿಂಗ್​ ಠಾಕೂರ್​ಗೂ ಯಾವುದೇ ಸಂಬಂಧವಿಲ್ಲ ಎಂದು ವಿಶೇಷ ತನಿಖಾ ದಳ ಸ್ಪಷ್ಟನೆ ನೀಡಿದೆ.

ಗೌರಿ ಲಂಕೇಶ್​​ ಹತ್ಯೆ ಪ್ರಕರಣದಲ್ಲಿ ಪ್ರಗ್ಯಾ ಸಿಂಗ್​ ಕೈವಾಡವಿರಬಹುದು ಎಂದು ಆಂಗ್ಲ ಮಾಧ್ಯಮವೊಂದು ವರದಿ ಮಾಡಿತ್ತು. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿತ್ತು. ಈ ಬಗ್ಗೆ ಎಸ್​​ಐಟಿ ಇಂದು ಪತ್ರಿಕಾ ಪ್ರಕಟಣೆ ಹೊರಡಿಸುವ ಮೂಲಕ ಸ್ಪಷ್ಟನೆ ನೀಡಿದೆ. ಗೌರಿ ಲಂಕೇಶ್​​ ಹತ್ಯೆ ಪ್ರಕರಣದಲ್ಲಿ ಪ್ರಗ್ಯಾ ಕೈವಾಡವಿದೆ ಎಂಬುದಕ್ಕೆ ಯಾವುದೇ ಸಾಕ್ಷಿ ಇಲ್ಲ ಎಂದಿದೆ.

“ಗೌರಿ ಲಂಕೇಶ್​ ಹತ್ಯೆ ಪ್ರಕರಣದ ತನಿಖೆ ವೇಳೆ ಪ್ರಾಗ್ಯಾ ಕೈವಾಡವಿರುವ ಯಾವುದೇ ಅಂಶ ಸಿಕ್ಕಿಲ್ಲ. ಇದಕ್ಕೆ ಪೂರಕವಾಗುವ ಯಾವುದೇ ಅಂಶವೂ ನಮ್ಮ ಬಳಿ ಇಲ್ಲ. ಕೋರ್ಟ್​​ಗೆ ಸಲ್ಲಿಕೆ ಮಾಡಿರುವ ದಾಖಲೆಗಳಲ್ಲೂ ಈ ಅಂಶ ಉಲ್ಲೇಖವಿಲ್ಲ,” ಎಂದು ಎಸ್​ಐಟಿ ಹೇಳಿದೆ.  ಸೆಪ್ಟೆಂಬರ್​ 5 2017ರಂದು ಗೌರಿ ಲಂಕೇಶ್​ ಅವರನ್ನು ಮನೆಯ ಎದುರೇ ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ತನಿಖೆಯನ್ನು ಎಸ್​ಐಟಿಗೆ ವಹಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಎಸ್​ಐಟಿ 16 ಜನರನ್ನು ಬಂಧಿಸಿದೆ.

ಇದನ್ನೂ ಓದಿ: ಮಾಲೆಗಾಂವ್ ಬಾಂಬ್​ ಸ್ಫೋಟದ​​ ಆರೋಪಿ ಸಾಧ್ವಿ ಪ್ರಗ್ಯಾ ಬಿಜೆಪಿ ಸೇರ್ಪಡೆ; ಭೂಪಾಲ್​ನಲ್ಲಿ ದಿಗ್ವಿಜಯ ಸಿಂಗ್ ವಿರುದ್ಧ ಕಣಕ್ಕೆ

2008ರಲ್ಲಿ ಮಹಾರಾಷ್ಟ್ರದಲ್ಲಿ ನಡೆದ ಬಾಂಬ್​ ಸ್ಫೋಟ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಲ್ಲಿ ಪ್ರಗ್ಯಾ ಠಾಕೂರ್​ ಕೂಡ ಒಬ್ಬರು. ಈ ಸ್ಫೋಟದಲ್ಲಿ 6 ಜನ ಮೃತಪಟ್ಟು, 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.  ಈ ಪ್ರಕರಣದಲ್ಲಿ ಅವರು ಕೂಡ ಮುಖ್ಯ ಆರೋಪಿ. ಇತ್ತೀಚೆಗೆ ಬಿಜೆಪಿ ಸೇರಿದ್ದ ಅವರು, ಭೋಪಾಲ್​ನಲ್ಲಿ ಕಾಂಗ್ರೆಸ್​ ಅಭ್ಯರ್ಥಿ ದಿಗ್ವಿಜಯ್​ ಸಿಂಗ್​ ವಿರುದ್ಧ ಕಣಕ್ಕೆ ಇಳಿದಿದ್ದಾರೆ.

First published:May 9, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading