ಬೆಂಗಳೂರು (ನ.29): ಕಾಂಗ್ರೆಸ್ ಆರೋಪಕ್ಕೆ ಟ್ವೀಟ್ (Tweet) ಮೂಲಕ ಬಸವರಾಜ ಬೊಮ್ಮಾಯಿ (Basavaraj Bommai) ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಟ್ವೀಟ್ ಗೆ ಸಂಬಂಧಿಸಿದಂತೆ ರೌಡಿಶೀಟರ್ ಗಳ (Rowdy Sheeter) ಕುರಿತಾದ ಪತ್ರಕರ್ತರ ಪ್ರಶ್ನೆಗೆ ನಾನು ಉತ್ತರಿಸಿದ್ದೇನೆ. ಇದನ್ನು ಇಷ್ಟಕ್ಕೆ ಸೀಮಿತವಾಗಿ ನೋಡಬೇಕು. ನಮ್ಮ ಪಕ್ಷವು (Party) ಯಾವುದೇ ರೌಡಿಶೀಟರ್ ಗಳಿಗೆ ಮನ್ನಣೆ ಕೊಡುವುದಿಲ್ಲ ಹಾಗೂ ಅವರನ್ನು ಸಹಿಸುವುದಿಲ್ಲ. ನಮ್ಮ ಪಕ್ಷದ ಅಧ್ಯಕ್ಷರು ಈಗಾಗಲೇ ತಿಳಿಸಿರುವಂತೆ ಸೈಲೆಂಟ್ ಸುನೀಲರನ್ನು (Silent Sunila) ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದ ಟ್ವೀಟ್ ಗೆ ಸಂಬಂಧಿಸಿದಂತೆ ರೌಡಿ ಶೀಟರ್ ಗಳ ಕುರಿತಾದ ಪತ್ರಕರ್ತರ ಪ್ರಶ್ನೆಗೆ ನಾನು ಉತ್ತರಿಸಿದ್ದೇನೆ. ಇದನ್ನು ಇಷ್ಟಕ್ಕೆ ಸೀಮಿತವಾಗಿ ನೋಡಬೇಕು. ನಮ್ಮ ಪಕ್ಷವು ಯಾವುದೇ ರೌಡಿ ಶೀಟರ್ ಗಳಿಗೆ ಮನ್ನಣೆ ಕೊಡುವುದಿಲ್ಲ ಹಾಗೂ ಅವರನ್ನು ಸಹಿಸುವುದಿಲ್ಲ.
1/2
— Basavaraj S Bommai (@BSBommai) November 29, 2022
ಬಿಜೆಪಿ ಪಕ್ಷಕ್ಕೆ ರೌಡಿಶೀಟರ್ಗಳ ಸೇರ್ಪಡೆ ಹಾಗೂ ಚಾಮರಾಜಪೇಟೆಯಲ್ಲಿ (Chamarajapete) ಸೈಲೆಂಟ್ ಸುನೀಲ್ ಸ್ಫರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ (Government) ವಿರುದ್ಧ ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದ್ರು. ಕಳ್ಳರು, ಸುಳ್ಳರು, ಭ್ರಷ್ಟರು, ರೌಡಿಗಳು ಎಲ್ಲರಿಗೂ ಒಂದೇ ಸೂರು ಅಂದ್ರೆ ಅದು ಬಿಜೆಪಿ (BJP) ಎಂದು ಕಾಂಗ್ರೆಸ್ ಟ್ವೀಟ್ (Congress Tweet) ಮಾಡಿದೆ. ವಾಂಟೆಡ್ ಲಿಸ್ಟ್ನಲ್ಲಿರುವ ರೌಡಿ ಪೊಲೀಸರ ಕೈಗೆ ಸಿಗುವುದಿಲ್ಲ. ಆದರೆ ಬಿಜೆಪಿ ನಾಯಕರ ಜೊತೆಯಲ್ಲಿರುತ್ತಾನೆ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
ರೌಡಿಶೀಟರ್ಗಳ ಸೇರ್ಪಡೆಗೆ ಕಾಂಗ್ರೆಸ್ ಕಿಡಿ
ಪೊಲೀಸರು ಹುಡುಕುತ್ತಿದ್ದ ರೌಡಿಯ ಜೊತೆಗೆ ನಿಮ್ಮ ನಾಯಕರಿಗೆ ಏನು ಕೆಲಸ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. ರೌಡಿಶೀಟರ್ ಬಂಧನ ಆಗದಿರುವ ಹಿಂದೆ ಬಿಜೆಪಿ ಕೈವಾಡವಿದೆಯೇ? ಕ್ರಿಮಿನಲ್ಗಳೊಂದಿಗೆ ಬಿಜೆಪಿಯ ನೆಂಟಸ್ತಿಕೆ ಇರುವಾಗ ರಾಜ್ಯದಲ್ಲಿ ಅಪರಾಧ ಪ್ರಕರಣ ಸಂಖ್ಯೆ ಏರದಿರುತ್ತದೆಯೇ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದ್ರು.
ವಾಂಟೆಡ್ ಲಿಸ್ಟ್ನಲ್ಲಿರುವ ರೌಡಿ ಪೊಲೀಸರ ಕೈಗೆ ಸಿಗುವುದಿಲ್ಲ, ಆದರೆ ಬಿಜೆಪಿ ನಾಯಕರ ಜೊತೆಯಲ್ಲಿರುತ್ತಾನೆ!
ಕಳ್ಳರು, ಸುಳ್ಳರು, ಭ್ರಷ್ಟರು, ರೌಡಿಗಳು ಎಲ್ಲರಿಗೂ ಒಂದೇ ಸೂರು - ಬಿಜೆಪಿ.
ಪೊಲೀಸರು ಹುಡುಕುತ್ತಿದ್ದ ರೌಡಿಯ ಜೊತೆಗೆ ನಿಮ್ಮ ನಾಯಕರಿಗೆ ಏನು ಕೆಲಸ @BJP4Karnataka?
ಆತನ ಬಂಧನ ಆಗದಿರುವ ಹಿಂದೆ ಬಿಜೆಪಿ ಕೈವಾಡವಿದೆಯೇ?
— Karnataka Congress (@INCKarnataka) November 28, 2022
ರೌಡಿಗಳನ್ನು ಹಿಡಿಯುವ ಯೋಗ್ಯತೆ ನಿಮ್ಮ ಇಲಾಖೆಗೆ ಇಲ್ಲವೇ ಅಥವಾ ನೀವೇ ಪೊಲೀಸರನ್ನು ಕಟ್ಟಿ ಹಾಕಿದ್ದೀರಾ? ಸಿಸಿಬಿ ಪೊಲೀಸರ ಕೈಗೆ ಸಿಗದ ರೌಡಿ ಈಗ ಬಿಜೆಪಿ ನಾಯಕರ ಕೈಗೆ ಸಿಕ್ಕಿದ್ದು ಹೇಗೆ ಎಂದು ಬಿಜೆಪಿ ನಡೆಗೆ ಟ್ವೀಟ್ ಮೂಲಕವೇ ಕಾಂಗ್ರೆಸ್ ಲೇವಡಿ ಮಾಡಿದೆ.
ಇದನ್ನೂ ಓದಿ: Fighter Ravi: ಸೈಲೆಂಟ್ ಸುನೀಲ ಬೆನ್ನಲ್ಲೇ ಮತ್ತೊಬ್ಬ ರೌಡಿಶೀಟರ್ ಬಿಜೆಪಿ ಸೇರ್ಪಡೆ, ಕಮಲ ಹಿಡಿದ ಫೈಟರ್ ರವಿ
ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ?
ಬಿಜೆಪಿಯ ಕೃಪಾಕಟಾಕ್ಷದಿಂದ ಸೈಲೆಂಟ್ ಸುನಿಲ್ ಎಂಬ ರೌಡಿಯ ಮುಂದೆ ಈಗ ಪೊಲೀಸರೇ ಸೈಲೆಂಟ್! ಸಚಿವ ಜ್ಞಾನೇಂದ್ರ ಅರಗ ಅವರೇ, ಸೈಲೆಂಟ್ ಸುನೀಲನಿಗೆ ಪೊಲೀಸರು ಹುಡುಕುತ್ತಿರಲಿಲ್ಲವೇ? ಬಿಜೆಪಿ ನಾಯಕರೊಂದಿಗೆ ವೇದಿಕೆಯಲ್ಲಿದ್ದಾಗ ಅಲ್ಲಿ ಪೊಲೀಸರೀರಲಿಲ್ಲವೇ? ಬಂಧಿಸದಂತೆ ಪೊಲೀಸರಿಗೆ ತಡೆದವರು ಯಾರು? ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ? ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ