ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ (Mudigere) ಬಿಜೆಪಿ (BJP) ಶಾಸಕ ಕುಮಾರಸ್ವಾಮಿಗೆ (MP Kumaraswamy) ಸಂಕಷ್ಟ ಎದುರಾಗಿದ್ದು, ಚೆಕ್ ಬೌನ್ಸ್ (Cheque Bounce) ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ (People's Representatives Court) ಜಾಮೀನು ರಹಿತ ವಾರೆಂಟ್ (Non Bailable Warrant) ಜಾರಿ ಮಾಡಿದೆ. ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಲಯ ಚಿಕ್ಕಮಗಳೂರು (Chikkamagaluru) ಎಸ್ಪಿ ಉಮಾ ಪ್ರಶಾಂತ್ ಅವರಿಗೆ ನೋಟಿಸ್ ನೀಡಿ ಆದೇಶ ನೀಡಿದೆ. 1 ಕೋಟಿ 38 ಲಕ್ಷದ 65 ಸಾವಿರದ 8 ಚೆಕ್ ಬೌನ್ಸ್ ಪ್ರಕರಣದಲ್ಲಿ ಕುಮಾರಸ್ವಾಮಿ ಬಂಧನಕ್ಕೆ ಆದೇಶ ನೀಡಲಾಗಿದೆ.
ಏನಿದು ಪ್ರಕರಣ?
ಕಳೆದ ಫೆಬ್ರವರಿಯಲ್ಲಿ ಚೆಕ್ಬೌನ್ಸ್ ಪ್ರಕರಣದಲ್ಲಿ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಅವರಿಗೆ 4 ವರ್ಷಗಳ ಕಾಲ ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ನೀಡಿತ್ತು.
ಹೆಚ್.ಆರ್ ಹೂವಪ್ಪಗೌಡ ಎಂಬವರಿಂದ ಶಾಸಕ ಕುಮಾರಸ್ವಾಮಿ ಅವರು ಸುಮಾರು 1.35 ಕೋಟಿ ರೂಪಾಯಿ ಸಾಲ ಪಡೆದುಕೊಂಡಿದ್ದರಂತೆ. ಈ ಹಣ ಪಾವತಿ ಮಾಡಲು ಶಾಸಕರು 8 ಚೆಕ್ಗಳನ್ನು ನೀಡಿದ್ದರಂತೆ. ಆದರೆ ಕುಮಾರಸ್ವಾಮಿ ಅವರು ನೀಡಿದ ಎಲ್ಲಾ ಚೆಕ್ಗಳು ಬೌನ್ಸ್ ಆಗಿದ್ದರಿಂದ ಸಾಲ ನೀಡಿದ್ದ ಹೂವಪ್ಪಗೌಡ ಅವರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದರು.
ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರತಿ ಚೆಕ್ಬೌನ್ಸ್ಗೆ ತಲಾ 6 ತಿಂಗಳಿನಿಂತೆ ಶಿಕ್ಷೆ ವಿಧಿಸಿ ಆದೇಶ ನೀಡಿತ್ತು. ಈ ವೇಳೆ 30 ದಿನದ ಒಳಗೆ ಹಣ ಮರುಪಾವತಿ ಮಾಡಲು ಸೂಚನೆ ನೀಡಿತ್ತು. ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯದಲ್ಲಿ ಕಳೆದ ಮೂರು ವರ್ಷದಿಂದ ಪ್ರಕರಣದ ವಿಚಾರಣೆ ನಡೆದಿತ್ತು ಎಂಬ ಮಾಹಿತಿ ಲಭ್ಯವಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ