ಪ್ರವಾಹ ಸಂತ್ರಸ್ತರಿಗೆ ಪರಿಹಾರ ಘೋಷಿಸದ ಕೇಂದ್ರ; ಇಂದು ‘ಉತ್ತರ ಕರ್ನಾಟಕ ಉಳಿಸಿ‘ ಬೃಹತ್​​ ರ‍್ಯಾಲಿ

ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಪ್ರವಾಹದಿಂದ ಜನ ತತ್ತರಿಸಿದ್ದಾರೆ. ಮನೆ - ಮಠ ಕಳೆದುಕೊಂಡು ನಿರ್ಗತಿಕರಾಗಿದ್ದು, ಬದುಕು ದುಸ್ಥರವಾಗಿದೆ. ಆದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡಿಗಾಸೂ ನೀಡಿಲ್ಲ. ನೆರೆ ಪೀಡಿತರ ಕಣ್ಣೀರು ಒರೆಸುವ ಪ್ರಯತ್ನ ಮಾಡಿಲ್ಲ.

G Hareeshkumar | news18-kannada
Updated:October 3, 2019, 9:32 AM IST
ಪ್ರವಾಹ ಸಂತ್ರಸ್ತರಿಗೆ ಪರಿಹಾರ ಘೋಷಿಸದ ಕೇಂದ್ರ; ಇಂದು ‘ಉತ್ತರ ಕರ್ನಾಟಕ ಉಳಿಸಿ‘ ಬೃಹತ್​​ ರ‍್ಯಾಲಿ
ಕೃಷ್ಣೆ ಸೃಷ್ಟಿಸಿರುವ ಭೀಕರ ಪ್ರವಾಹಕ್ಕೆ ನಲುಗಿರುವ ಉತ್ತರ ಕರ್ನಾಟಕ.
  • Share this:
ಬೆಂಗಳೂರು(ಸೆ.03): ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಖಂಡಿಸಿ ಇಂದು ನಗರದಲ್ಲಿ ಉತ್ತರ ಕರ್ನಾಟಕ ಸಂಘ- ಸಂಸ್ಥೆಗಳ ಮಹಾ ಸಂಸ್ಥೆಯಿಂದ ಬೃಹತ್​​ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ. 

ಬೆಳಿಗ್ಗೆ 9.30ಕ್ಕೆ ರಾಜಾಜಿನಗರದ ಬಾಷ್ಯಂ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ  ರಾಮಮಂದಿರ ಮಾರ್ಗವಾಗಿ ಸಾತಂತ್ರ್ಯ ಉದ್ಯಾನವನದ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ನಡೆಸಲಾಗುವುದು. ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ  ಶಂಕರ್ ಬಿದರಿ ಅವರು ಪ್ರತಿಭಟನೆಗೆ ಚಾಲನೆ ನೀಡಲಿದ್ದಾರೆ

ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಪ್ರವಾಹದಿಂದ ಜನ ತತ್ತರಿಸಿದ್ದಾರೆ. ಮನೆ - ಮಠ ಕಳೆದುಕೊಂಡು ನಿರ್ಗತಿಕರಾಗಿದ್ದು, ಬದುಕು ದುಸ್ಥರವಾಗಿದೆ. ಆದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡಿಗಾಸೂ ನೀಡಿಲ್ಲ. ನೆರೆ ಪೀಡಿತರ ಕಣ್ಣೀರು ಒರೆಸುವ ಪ್ರಯತ್ನ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ಪತ್ರಿಕಾ ಹೇಳಿಕೆ


ಉತ್ತರ ಭಾರತದ ಬಿಹಾರದಲ್ಲಿ ಉಂಟಾದ ಪ್ರವಾಹಕ್ಕೆ ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಿದೆ. ನೆರವು ನೀಡುವ ಭರವಸೆಯನ್ನು ನೀಡಿದೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡುವ ಮೂಲಕ ನೈತಿಕ ಬೆಂಬಲ ನೀಡಿದ್ದಾರೆ. ಆದರೆ ಕರ್ನಾಟಕವನ್ನು ಸಂಪೂರ್ಣವಾಗಿ ಮರೆತು ಹೋಗಿದ್ದಾರೆ.

ಇದನ್ನೂ ಓದಿ : ಮೋದಿ ನೋಡಿ 25 ಜನರನ್ನು ಕಳುಹಿಸಿದ್ದೀರಿ, ಪರಿಹಾರ ಬರುವರೆಗೂ ಸಂಯಮದಿಂದ ಕಾಯಿರಿ; ಸಂಸದ ರಮೇಶ ಜಿಗಜಿಣಗಿ

ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಭಾಗದ ಹಲವಾರು ಸಂಘ ಸಂಸ್ಥೆಗಳ ಸಾವಿರಾರು ಜನ ಸದಸ್ಯರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ಪ್ರಕಟಣೆ ಮೂಲಕ ತಿಳಿಸಿದೆ.
First published:October 3, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ