ಅ.28ರಂದು ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಚುನಾವಣೆ; ನಾಮಪತ್ರ ಸಲ್ಲಿಸಲು ಅ.8 ಕೊನೆಯ ದಿನ

ನವೆಂಬರ್ 2ರ (ಸೋಮವಾರ) ಬೆಳ್ಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದೆ. ಇನ್ನು, ನವೆಂಬರ್ 5 ರಂದು ಚುನಾವಣೆ ಪ್ರಕ್ರಿಯೆ ಮುಕ್ತಾಯವಾಗಲಿದೆ ಎಂದು ಮಾಹಿತಿ ನೀಡಿದರು.

ಬೀದರ್ ಜಿಲ್ಲಾಧಿಕಾರಿ

ಬೀದರ್ ಜಿಲ್ಲಾಧಿಕಾರಿ

  • Share this:
ಬೀದರ್(ಅ.06): 2020ರ ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಗೆ ಬೀದರ್ ಜಿಲ್ಲೆಯಲ್ಲಿ ಒಟ್ಟು 34 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಸದರಿ ಚುನಾವಣೆಗೆ ಪುರುಷ ಮತದಾರರು 3390 ಹಾಗೂ ಮಹಿಳಾ ಮತದಾರರು 1472 ಸೇರಿ ಒಟ್ಟು 4862 ಮತದಾರರಿದ್ದಾರೆ ಎಂದು ಬೀದರ್​​ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಮಾಹಿತಿ ನೀಡಿದ್ದಾರೆ. ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸದರಿ ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ-2020ರ ಮಾದರಿ ನೀತಿ ಸಂಹಿತೆಯನ್ನು ಸೆಪ್ಟೆಂಬರ್ 29ರಿಂದಲೇ ಜಾರಿ ಮಾಡಲಾಗಿದೆ. ಅಕ್ಟೋಬರ್ 01ರಂದು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 8ರಂದು ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕವಾಗಿದೆ ಎಂದು ತಿಳಿಸಿದರು.

ಅಕ್ಟೋಬರ್ 10ರಂದು ನಾಮ ಪತ್ರಗಳ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 12ರಂದು ನಾಮ ಪತ್ರಗಳನ್ನು ಹಿಂದಕ್ಕೆ ಪಡೆಯುವ ಕೊನೆಯ ದಿನಾಂಕಾಗಿದೆ. ಅಕ್ಟೋಬರ್ 28ರಂದು ಮತದಾನ ನಡೆಯಲಿದ್ದು, ನವೆಂಬರ್ 2ರ (ಸೋಮವಾರ) ಬೆಳ್ಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದೆ. ಇನ್ನು, ನವೆಂಬರ್ 5 ರಂದು ಚುನಾವಣೆ ಪ್ರಕ್ರಿಯೆ ಮುಕ್ತಾಯವಾಗಲಿದೆ ಎಂದು ಮಾಹಿತಿ ನೀಡಿದರು.

ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ-2020ರ ಅಂಗವಾಗಿ ಈಗಾಗಲೆ ವಿವಿಧ ಚುನಾವಣೆ ಕೆಲಸಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಚುನಾವಣೆ ಪ್ರಕ್ರಿಯೆಯಲ್ಲಿ ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡದಂತೆ ತಡೆಗಟ್ಟಲು ವಿಶೇಷವಾಗಿ ಕೋವಿಡ್-19 ರ ನೋಡಲ್ ಅಧಿಕಾರಿಯನ್ನಾಗಿ ಸಹಾಯಕ ಆಯುಕ್ತರು ಬೀದರ ಉಪ ವಿಭಾಗ ಬೀದರ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಡಿಕೆ ಶಿವಕುಮಾರ್ ವಿರುದ್ಧ ಕೇಸ್ ಹಾಕಿ ಬಿಜೆಪಿ ಚುನಾವಣೆ ಗೆಲ್ಲಬೇಕಿಲ್ಲ: ಜಗದೀಶ್ ಶೆಟ್ಟರ್

ಸದರಿ ಚುನಾವಣೆಯನ್ನು ಸುಗಮವಾಗಿ ನಡೆಸುವ ಸಲುವಾಗಿ ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತಂಡಗಳನ್ನು ರಚಿಸಲಾಗಿರುತ್ತದೆ ಎಂದರು. ಸದರಿ ಚುನಾವಣೆ ಪ್ರಯುಕ್ತ ಯಾವುದೇ ನೀತಿ ಸಂಹಿತೆ ಉಲ್ಲಂಘನೆ ಕುರಿತು ದೂರುಗಳಿದ್ದಲ್ಲಿ ನೇರವಾಗಿ ಜಿಲ್ಲಾಡಳಿತಕ್ಕೆ ದೂರು ಸಲ್ಲಿಸಬಹುದು ಎಂದು ಇದೇ ವೇಳೆ ರಾಮಚಂದ್ರನ್ ತಿಳಿಸಿದರು.

ಮುಖ್ಯ ಚುನಾವಣಾಧಿಕಾರಿಗಳ ನಿರ್ದೇಶನದಂತೆ ಕೋವಿಡ್–19 (ಕೊರೋನಾ ವೈರಸ್) ಸಾಂಕ್ರಾಮಿಕವಾಗಿ ಹರಡದಂತೆ ಮುನ್ನೆಚ್ಚರಿಕೆಯಾಗಿ ಚಾಚು ತಪ್ಪದೆ ಪಾಲಿಸುತ್ತಾ ಹಾಗೂ ಸದರಿ ಚುನಾವಣೆಯ ಮತದಾರರನ್ನು ಮತಗಟ್ಟೆ ಸಿಬ್ಬಂದಿಗಳನ್ನಾಗಿ ನೇಮಿಸಬಾರದೆಂಬ ಅಂಶವನ್ನು ಗಣನೆಗೆ ತೆಗೆದುಕೊಂಡು ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನೇಮಕಾತಿ ಮಾಡುವ ಕಾರ್ಯವು ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗವಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್., ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಹಾಗೂ ಇತರರು ಇದ್ದರು.
Published by:Latha CG
First published: