• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಕರ್ನಾಟಕದ ಒಂದಿಂಚು ಜಾಗವನ್ನೂ ಮಹಾರಾಷ್ಟ್ರಕ್ಕೆ ಬಿಟ್ಟುಕೊಡಲ್ಲ: ರಾಜ್ಯಸಭೆಯಲ್ಲಿ ಜಿ.ಸಿ.ಚಂದ್ರಶೇಖರ್ ತಿರುಗೇಟು

ಕರ್ನಾಟಕದ ಒಂದಿಂಚು ಜಾಗವನ್ನೂ ಮಹಾರಾಷ್ಟ್ರಕ್ಕೆ ಬಿಟ್ಟುಕೊಡಲ್ಲ: ರಾಜ್ಯಸಭೆಯಲ್ಲಿ ಜಿ.ಸಿ.ಚಂದ್ರಶೇಖರ್ ತಿರುಗೇಟು

ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್.

ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್.

ಗಡಿ ಭಾಗದ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವಂತೆ ಹಲವಾರು ವ್ಯಕ್ತಿಗಳು ಮನವಿ ಮಾಡಿದ್ದಾರೆ. ವಿವಿಧ ಸಂಸ್ಥೆಗಳು ಬೇಡಿಕೆ ಇಟ್ಟಿವೆ. ಆದರೆ ಅಂತಹ ಯಾವುದೇ ಪ್ರಸ್ತಾಪವು ಕೇಂದ್ರ ಸರ್ಕಾರದ ಪರಿಗಣನೆಯಲ್ಲಿ ಇಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ‌ಜೊತೆಗೆ 2011ರ ಜನಗಣತಿ ಪ್ರಕಾರ ಮಹಾರಾಷ್ಟ್ರ ಮತ್ತು ಕರ್ನಾಟಕದ ಗಡಿ ಭಾಗಗಳಲ್ಲಿ ಮರಾಠಿ ಮಾತನಾಡುವ ಜನ ಸಂಖ್ಯೆ 55,98,325 ಎಂದು ತಿಳಿಸಿದ್ದಾರೆ.

ಮುಂದೆ ಓದಿ ...
  • Share this:

ನವದೆಹಲಿ (ಮಾ. 18 ಗುರುವಾರ): ಬೆಳಗಾವಿ ನಮ್ಮದು, ಕರ್ನಾಟಕದಲ್ಲಿ ಮರಾಠಿ ಮಾತನಾಡುವ ಭಾಗವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿ ಎಂಬಿತ್ಯಾದಿಯಾಗಿ ಸದಾ ಕಿರಿಕ್ ಮಾಡುವ ಮಹಾರಾಷ್ಟ್ರಕ್ಕೆ ಗುರುವಾರ ರಾಜ್ಯದ ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್ 'ರಾಜ್ಯದ ಒಂದಿಂಚು ಜಾಗವನ್ನೂ  ಮಹಾರಾಷ್ಟ್ರಕ್ಕೆ ಬಿಟ್ಟುಕೊಡಲ್ಲ' ಎಂದು ಸೂಕ್ತ ತಿರುಗೇಟು ನೀಡಿದ್ದಾರೆ.


ರಾಜ್ಯಸಭೆಯ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್ ಅವರು, ಬೆಳಗಾವಿ ಅಂದಿಗೂ, ಇಂದಿಗೂ, ಎಂದಿಗೂ ಕರ್ನಾಟಕದ ಅವಿಭಾಜ್ಯ ಅಂಗ. ನಾವು ಮಹಾತ್ಮ ಗಾಂಧೀಜಿ ಮಾರ್ಗದಲ್ಲಿ  ಹೋರಾಟ ಮಾಡಿ ನಮ್ಮ ಗಡಿಯನ್ನು ಕಾಪಾಡಿಕೊಳ್ಳುತ್ತೇವೆ. ಯಾವ ಕಾರಣಕ್ಕೂ ಎಂಥದೇ ಸಂದರ್ಭದಲ್ಲೂ ಮಹಾರಾಷ್ಟ್ರಕ್ಕೆ ರಾಜ್ಯದ ಒಂದೇ ಒಂದು ಇಂಚು ಜಾಗವನ್ನು ಬಿಟ್ಟುಕೊಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು.


ಬೆಳಗಾವಿಯು 1956ರಲ್ಲಿ ಭಾಷಾವಾರು ರಾಜ್ಯಗಳ ವಿಂಗಡಣೆ ಆದಾಗಿನಿಂದಲೂ ಕರ್ನಾಟಕದ ಅವಿಭಾಜ್ಯ ಅಂಗವಾಗಿದೆ‌.  ಸುಪ್ರೀಂ ಕೋರ್ಟಿನ‌ ನಿವೃತ್ತ ನ್ಯಾಯಮೂರ್ತಿ ಮಹಾಜನ್ ನೇತೃತ್ವದ ಆಯೋಗವು ವರದಿ ಕೂಡ ಬೆಳಗಾವಿ ಕರ್ನಾಟಕದ ಭಾಗ ಎಂದು ಸ್ಪಷ್ಟವಾಗಿ ಹೇಳಿದೆ. ಆದರೆ ಮಹಾರಾಷ್ಟ್ರ ರಾಜಕೀಯವಾಗಿ ಲಾಭ ಮಾಡಿಕೊಳ್ಳಲು ಮತ್ತೆ ಮತ್ತೆ ವಿವಾದ ಸೃಷ್ಟಿಸುತ್ತಿದೆ. ನವೆಂಬರ್ 1ರಂದು ಕರ್ನಾಟಕದಲ್ಲಿ ರಾಜ್ಯೋತ್ಸವ ಆಚರಿಸಲಾಗುತ್ತದೆ. ಆ ಸಂದರ್ಭದಲ್ಲಿ ಪಕ್ಕದ ರಾಜ್ಯಕ್ಕೆ ಶುಭಾಶಯ ಹೇಳುವ ಬದಲು ಮಹಾರಾಷ್ಟ್ರ ಕರಾಳ ದಿನ ಆಚರಿಸಿದೆ ಎಂದು ಜಿ.ಸಿ. ಚಂದ್ರಶೇಖರ್ ಅವರು ಅಸಮಾಧಾನ ವ್ಯಕ್ತಪಡಿಸಿದರು.


ಆಗ ಮಧ್ಯ ಪ್ರವೇಶಿಸಿದ ರಾಜ್ಯಸಭೆಯ ಸಭಾಪತಿಯೂ ಆದ ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಮಾತನಾಡಿ, 'ಈ ವಿಷಯ ಸುಪ್ರೀಂ ಕೋರ್ಟ್​ನಲ್ಲಿ ಇರುವುದರಿಂದ ಇಲ್ಲಿ ಚರ್ಚೆಗೆ ಅವಕಾಶ ಇಲ್ಲ' ಎಂದು ಹೇಳಿದರು. ಆದರೆ ನಿನ್ನೆ ಮತ್ತು ಮೊನ್ನೆ ಇದೇ ವಿಷಯ ಲೋಕಸಭೆಯಲ್ಲಿ ಚರ್ಚೆ ಆಗಿತ್ತು. ಕೇಂದ್ರ ಸರ್ಕಾರದ ವತಿಯಿಂದ ಗೃಹ ಇಲಾಖೆಯ ರಾಜ್ಯ ಸಚಿವ ನಿತ್ಯಾನಂದ ರೈ ಅವರು 'ಕರ್ನಾಟಕದಲ್ಲಿ ಮರಾಠಿ ಮಾತನಾಡುವ ಭಾಗವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡುವ ಪ್ರಸ್ತಾಪ ಕೇಂದ್ರ ಸರ್ಕಾರದ ಮುಂದೆ ಇಲ್ಲ' ಎಂಬ ಉತ್ತರವನ್ನೂ ನೀಡಿದ್ದರು.


ಇದನ್ನು ಓದಿ: ರಾಜ್ಯದ ಮರಾಠಿ ಮಾತನಾಡುವ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶ ಮಾಡುವ ಪ್ರಸ್ತಾಪ ಇಲ್ಲ: ಕೇಂದ್ರ ಸ್ಪಷ್ಟನೆ


ಗಡಿ ಭಾಗದ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವಂತೆ ಹಲವಾರು ವ್ಯಕ್ತಿಗಳು ಮನವಿ ಮಾಡಿದ್ದಾರೆ. ವಿವಿಧ ಸಂಸ್ಥೆಗಳು ಬೇಡಿಕೆ ಇಟ್ಟಿವೆ. ಆದರೆ ಅಂತಹ ಯಾವುದೇ ಪ್ರಸ್ತಾಪವು ಕೇಂದ್ರ ಸರ್ಕಾರದ ಪರಿಗಣನೆಯಲ್ಲಿ ಇಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ‌ಜೊತೆಗೆ 2011ರ ಜನಗಣತಿ ಪ್ರಕಾರ ಮಹಾರಾಷ್ಟ್ರ ಮತ್ತು ಕರ್ನಾಟಕದ ಗಡಿ ಭಾಗಗಳಲ್ಲಿ ಮರಾಠಿ ಮಾತನಾಡುವ ಜನ ಸಂಖ್ಯೆ 55,98,325 ಎಂದು ತಿಳಿಸಿದ್ದಾರೆ. ಆ ಜನ ದುಧಾನಿ, ಇಚಲಕರಂಜಿ, ಕಗಲ್, ಕಮಲ್‌ನಗರ, ಮೈನ್‌ದಾರ್ಗಿ, ನಿಪಾನಿ, ಸದಲ್ಗಿ ಮತ್ತು ಸಂಕೇಶ್ವರದಲ್ಲಿ ಇರುವುದು 2011ರ ಜನಗಣತಿಯಲ್ಲಿ ದೃಢಪಟ್ಟಿದೆ ಎಂದು ಅವರು ಹೇಳಿದ್ದಾರೆ.


ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು 'ಕರ್ನಾಟಕದ ಗಡಿ ಭಾಗದಲ್ಲಿ ಮರಾಠಿ ಮಾತನಾಡುವ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಬೇಕು. ಇದಕ್ಕಾಗಿ‌ ಹೋರಾಟ ಮಾಡಬೇಕಾಗಿದೆ' ಎಂದಿದ್ದರು. ಮಂಗಳವಾರ ಲೋಕಸಭೆಯ ಕಲಾಪದ ವೇಳೆ ಇಂಥದೊಂದು ಪ್ರಶ್ನೆಗೆ ಉತ್ತರ ನೀಡಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ್ ರೈ ಅವರು "ಕರ್ನಾಟಕದ ಗಡಿ ಭಾಗದಲ್ಲಿ ಮರಾಠಿ ಭಾಷೆ ಮಾತನಾಡುವ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡುವ ಪ್ರಸ್ತಾಪದ ಪರಿಗಣನೆ ಇಲ್ಲ" ಎಂದು ಸ್ಪಷ್ಟನೆ ನೀಡಿದ್ದರು.

Published by:HR Ramesh
First published: