Rohini Sindhuri: ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ; ವಿಚಾರಣೆಗೆ ಹಾಜರಾಗುವಂತೆ ನೋಟಿಸ್​

ನಾಳೆ ರವಿಶಂಕರ್ ಮುಂದೆ ರೋಹಿಣಿ ಸಿಂಧೂರಿ ಹಾಜರಾಗಬೇಕಿದೆ.  ರೋಹಿಣಿ ಸಿಂಧೂರಿ ಸದ್ಯ ಮುಜರಾಯಿ ಇಲಾಖೆ ಆಯುಕ್ತೆಯಾಗಿದ್ದಾರೆ. ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಕೇಳಿಬಂದಿದ್ದ ಆರೋಪಗಳ ಸಂಬಂಧ ವಿಚಾರಣೆ ನಡೆಯಲಿದೆ. 

ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ

ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ

  • Share this:
ಮೈಸೂರು (ಜು.29) : ರೋಹಿಣಿಗೆ (Rohini) ಮತ್ತೆ ಸಂಕಷ್ಟ ಎದುರಾಗಿದೆ. ಮೈಸೂರು ಡಿಸಿ ಆಗಿದ್ದಾಗ ನಡೆದಿದ್ದ ಹಲವು ಅಕ್ರಮಗಳ ಬಗ್ಗೆ ನಾಳೆ ತನಿಖೆ ನಡೆಯಲಿದೆ. ನಾಳೆ ವಿಧಾನಸೌಧದಲ್ಲಿ ರೋಹಿಣಿ ವಿಚಾರಣೆ (Inquiry) ಆರಂಭವಾಗಲಿದೆ. ನಾಳೆ ಬೆಳಗ್ಗೆ 11ಕ್ಕೆ ಖುದ್ದು ಹಾಜರಾಗಿ ವಿವರಣೆ ನೀಡಲು ಸೂಚನೆ ನೀಡಲಾಗಿದೆ. ಈ ಸಂಬಂಧ ರೋಹಿಣಿ ಸಿಂಧೂರಿಗೆ ವಸತಿ ಇಲಾಖೆ ಪತ್ರ (Housing Department letter) ಬರೆದಿದೆ.  ತನಿಖಾಧಿಕಾರಿಯಾಗಿ ವಸತಿ ಇಲಾಖೆ ಕಾರ್ಯದರ್ಶಿ ಡಾ.ಜೆ.ರವಿಶಂಕರ್ (Dr J Ravishankar) ಅವರನ್ನು ಸರ್ಕಾರ ನೇಮಕ ಮಾಡಿದೆ. ವಿಚಾರಣೆ ನಡೆಸಿ ಸರ್ಕಾರಕ್ಕೆ (Government) ವರದಿ ಸಲ್ಲಿಸಲು ರವಿಶಂಕರ್ ನೇಮಕಗೊಂಡಿದ್ದಾರೆ. 

ನಾಳೆ ರವಿಶಂಕರ್ ಮುಂದೆ ರೋಹಿಣಿ ಸಿಂಧೂರಿ ಹಾಜರಾಗಬೇಕಿದೆ.  ರೋಹಿಣಿ ಸಿಂಧೂರಿ ಸದ್ಯ ಮುಜರಾಯಿ ಇಲಾಖೆ ಆಯುಕ್ತೆಯಾಗಿದ್ದಾರೆ. ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಕೇಳಿ ಬಂದಿದ್ದ ಆರೋಪಗಳ ಸಂಬಂಧ ವಿಚಾರಣೆ ನಡೆಯಲಿದೆ.

ರೋಹಿಣಿ ಸಿಂಧೂರಿ ವಿರುದ್ಧ ಆರೋಪಿಸಿದ್ದ ಸಾರಾ ಮಹೇಶ್

ಮೈಸೂರಿನ ಕೆಆರ್ ನಗರ ಶಾಸಕ ಸಾರಾ ಮಹೇಶ್ ಅವರು ಐಎಎಸ್ ಅಧಿಕಾರಿ, ಆಗಿನ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಹಗರಣ ನಡೆದಿದೆ ಎಂಬ ಆರೋಪ, ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸದಲ್ಲಿ 50 ಲಕ್ಷ ವೆಚ್ಚದಲ್ಲಿ ಅನಧಿಕೃತವಾಗಿ ಸ್ವಿಮ್ಮಿಂಗ್ ಪೂಲ್ ಹಾಗೂ ಜಿಮ್ ನಿರ್ಮಾಣ ಮಾಡಿ ಪಾರಂಪರಿಕ ಕಟ್ಟಡಕ್ಕೆ ಹಾನಿ ಮಾಡಿರುವುದು, ಕರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಮುಚ್ಚಿಟ್ಟಿರುವುದು ಹಾಗೂ ಚಾಮರಾಜನಗರ ಆಕ್ಸಿಜನ ದುರಂತ ಪ್ರಕರಣಕ್ಕೆ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪಗಳನ್ನು ಸಿಂಧೂರಿ ವಿರುದ್ಧ ಮಾಡಲಾಗಿತ್ತು.

ಇದನ್ನೂ ಓದಿ: Murder Case: ಚಿಕನ್​ ಅಂಗಡಿ ತೆರೆದಿದ್ದೇ ಕೊಲೆಗೆ ಕಾರಣವಾಯ್ತಾ? ಪ್ರವೀಣ್​ ಸಹೋದರನ ಸ್ಫೋಟಕ ಹೇಳಿಕೆ

ಏನಿದು ಪರಿಸರ ಸ್ನೇಹಿ ಬ್ಯಾಗ್ ಖರೀದಿ ಹಗರಣ?

ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ರೋಹಿಣಿ ಸಿಂಧೂರಿ ಅವರು ಮಹಾನಗರ ಪಾಲಿಕೆ, ನಗರಸಭೆ, ಪುರಸಭೆಗಳ ಪೂರ್ವಾನುಮತಿ ಇಲ್ಲದೆ 14.71 ಲಕ್ಷ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್‌ಗಳನ್ನು 14 ಕೋಟಿ ರೂ.ಗೆ ಖರೀದಿ ಮಾಡಿದ್ದರು ಅಂತ ಆರೋಪಿಸಲಾಗಿತ್ತು. ಚಿಲ್ಲರೆ ಮಾರುಕಟ್ಟೆಯಲ್ಲಿ 10ರಿಂದ 13 ರೂ.ಗೆ ಸಿಗುವ ಪ್ರತಿ ಬ್ಯಾಗ್‌ಗೆ 52 ರೂ. ಕೊಡಲಾಗಿದೆ. ಸಾರ್ವಜನಿಕರ ತೆರಿಗೆ ಹಣವನ್ನು ರೋಹಿಣಿ ಸಿಂಧೂರಿ ದುಂದು ವೆಚ್ಚ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದ ಶಾಸಕ ಸಾ.ರಾ.ಮಹೇಶ್, ತನಿಖೆಗೆ ಆಗ್ರಹಿಸಿದ್ದರು.

14 ಕೋಟಿ ಅವ್ಯವಹಾರ ನಡೆದಿರುವ ಬಗ್ಗೆ ಆರೋಪ

ಕೈ ಮಗ್ಗ ನಿಗಮ ಬಿಟ್ಟು ಖಾಸಗಿ ವ್ಯಕ್ತಿಗೆ ಟೆಂಡರ್ ನೀಡಿ ರೋಹಿಣಿ ಸಿಂಧೂರಿ ಕಿಕ್ ಬ್ಯಾಕ್ ಪಡೆದಿದ್ದಾರೆ ಅಂತ ಆರೋಪಿಸಲಾಗಿತ್ತು. ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ನೆಪದಲ್ಲಿ ಒಟ್ಟು 14 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಸಾ.ರಾ. ಮಹೇಶ್‌ ಆರೋಪಿಸಿ ತನಿಖೆಗೆ ಆಗ್ರಹಿಸಿದ್ದರು.

ಪಾರಂಪರಿಕ ಕಟ್ಟಡಕ್ಕೆ ಧಕ್ಕೆ ತಂದ ಆರೋಪ

ಮೈಸೂರು ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸ ಪಾರಂಪರಿಕ ಕಟ್ಟಡವಾಗಿದೆ. ಯಾವುದೇ ಹೊಸ ಕಟ್ಟಡ ಕಾಮಗಾರಿಯನ್ನು ಅಲ್ಲಿ ಮಾಡುವಂತಿಲ್ಲ. ಆದರೆ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ಈಜುಕೊಳ, ಜಿಮ್ ನಿರ್ಮಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಇದನ್ನೂ ಓದಿ: Dakshina Kannada: 4 ತಾಲೂಕಿನಲ್ಲಿ 144 ಸೆಕ್ಷನ್​ ಮುಂದುವರಿಕೆ; 3 ದಿನ ಮದ್ಯ ಮಾರಾಟ ಬಂದ್​

ಸರ್ಕಾರಕ್ಕೆ ಉತ್ತರ ನೀಡಿದ್ದ ರೋಹಿಣಿ ಸಿಂಧೂರಿ

ತಮ್ಮ ಮೇಲೆ ಬಂದಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಈ ಹಿಂದೆಯೇ ರೋಹಿಣಿ ಸಿಂಧೂರಿ ಸ್ಪಷ್ಟನೆ ನೀಡಿದ್ದರು. “ಜಿಲ್ಲಾಧಿಕಾರಿ ವಸತಿ ಕಚೇರಿ ಆವರಣದಲ್ಲಿ ಈಜುಕೊಳ ನಿರ್ಮಿಸಬೇಕೆಂಬುದು 5 ವರ್ಷಗಳ ಹಿಂದಿನ ಯೋಜನೆಯಾಗಿದೆ. ಹೊಸ ತಂತ್ರಜ್ಞಾನ ಬಳಸಿ ನಿರ್ಮಾಣ ಕಾರ್ಯ ನಡೆಸಲು ನಿರ್ಮಿತಿ ಕೇಂದ್ರ ನಿರ್ಧರಿಸಿತ್ತು. ಅದರ ಪ್ರಾಯೋಗಿಕ ಯೋಜನೆಯಾಗಿ ಈಜುಕೊಳ ನಿರ್ಮಾಣವಾಗಿದೆ” ಎಂದು ಸ್ಪಷ್ಟನೆ ನೀಡಿದ್ದರು.
Published by:Pavana HS
First published: