ಬೆಳಗಾವಿ: ಛತ್ರಪತಿ ಶಿವಾಜಿ ಮಹಾರಾಜರ (Chhatrapati Shivaji Maharaj) ಫೋಟೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ದುಷ್ಕರ್ಮಿಗಳು ವಿಕೃತಿಯನ್ನು ಮೆರೆದಿದ್ದಾರೆ. ಈ ಕುರಿತಂತೆ ಶಾಸಕ ಅಭಯ್ ಪಾಟೀಲ್ (MLA Abhay Patil) ಬೆಳಗಾವಿ ನಗರ ಪೊಲೀಸ್ ಆಯುಕ್ತರನ್ನ (Police Commissioner Belagavi) ಭೇಟಿಯಾಗಿ ದುಷ್ಕರ್ಮಿಗಳ ವಿರುದ್ಧ ಕ್ರಮಕೈಗೊಳ್ಳಲು ಆಗ್ರಹಿಸಿದ್ದಾರೆ. ಶಿವಾಜಿ ಮಹಾರಾಜರ ಹಾಗೂ ರಾಮ ಸೀತಾ (Sita Rama) ಅವರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಅಪ್ಲೋಡ್ ಮಾಡಲಾಗಿದೆ. ಅಶ್ಲೀಲ ರೀತಿಯಲ್ಲಿ ಫೋಟೋ ಎಡಿಟ್ ಮಾಡಿದ ವಿರುದ್ಧ ಕ್ರಮಕ್ಕೆ ಒತ್ತಾಯ ಮಾಡಿ ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯರು, ಶಾಸಕರಿಗೆ ಸಾಥ್ ನೀಡಿದ್ದಾರೆ.
ಏನಿದು ಪ್ರಕರಣ?
ಶಿವಾಜಿ ಮಹಾರಾಜರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. RX ಇಮ್ರಾನ್, ಕಿಂಗ್ ಕೀ ಜಾನ್, ಇಸ್ಲಾಂ ಜಿಂದಾಬಾದ್ ಹೆಸರಿನ ಐಡಿ ಇರುವ ಇನ್ಸ್ಟಾಗ್ರಾಮ್ನಲ್ಲಿ ಅಶ್ಲೀಲ ಫೋಟೋಗಳನ್ನು ಶೇರ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ್ ಪಾಟೀಲ್ ನಿನ್ನೆ ಸಂಜೆ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಅವರನ್ನ ಭೇಟಿ ಮಾಡಿ, ಆರೋಪಿಗಳ ವಿರುದ್ಧ ಕೂಡಲೇ ಕೇಸ್ ದಾಖಲಿಸಿ ಯಾವುದೇ ಮೂಲೆಯಲ್ಲಿದ್ದರೂ ಬಂಧಿಸುವಂತೆ ಒತ್ತಾಯ ಮಾಡಿದ್ದಾರೆ.
ಮಹಿಳೆ ಮೇಲೆ ಹತ್ತಿದ ಲಾರಿ, ಮಹಿಳೆ ಸ್ಥಳದಲ್ಲೇ ಸಾವು!
ರಸ್ತೆ ರಿಪೇರಿ ಕೆಲಸ ಆಗುತ್ತಿರುವ ಹಿನ್ನೆಲೆಯಲ್ಲಿ ಒನ್ ವೇ ನಲ್ಲಿ ಸ್ಕೂಟರ್ ಮೇಲೆ ಬರುತ್ತಿದ್ದ ಮಹಿಳೆಯೊಬ್ಬರು ಮೇಳೆ ಕ್ಯಾಂಟರ್ ಹರಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕು ಮಾಚೋಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ಸುಂಕದಕಟ್ಟೆಯಿಂದ ತಾವರೆಕೆರೆ ತನಕ ಚತುಸ್ಪಥ ರಸ್ತೆ ಕಾಮಗಾರಿ ನಡೆಯುತ್ತಿದೆ. ರಸ್ತೆ ಕಾಮಗಾರಿಯಿಂದ ರಸ್ತೆಗಳು ಅದ್ವಾನ ಆಗಿದೆ. ರಸ್ತೆಯಲ್ಲಿ ತನ್ನ ಪಾಡಿಗೆ ಬರುತ್ತಿದ್ದ ಖಾಸಗಿ ಕಾಲೇಜಿನ ಉದ್ಯೋಗಿ 34 ವರ್ಷದ ನಳಿನಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ರಸ್ತೆ ಗುಂಡಿಯಿಂದಲೇ ಈ ಘಟನೆ ನಡೆದಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಇದೇ ರಸ್ತೆಯಲ್ಲಿ ಹಲವು ಅಪಘಾತಗಳು ನಡೆದಿದ್ದು, ಮೂರ್ನಾಲ್ಕು ಸಾವುಗಳು ಸಂಭವಿಸಿವೆ. ದೊಡ್ಡ ದೊಡ್ಡ ರಾಜಕಾರಣಿಗಳು ಬಂದಾಗ ಒಂದೇ ದಿನದಲ್ಲಿ ಡಾಂಬರು ಕೆಲಸ ಆಗುತ್ತೆ, ಆದರೆ ಈ ಕಾಮಗಾರಿ ಶುರುವಾಗಿ ಮೂರು ವರ್ಷಗಳು ಆಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಲಾರಿ ಮತ್ತು ಚಾಲಕನನ್ನ ವಶಕ್ಕೆ ಪಡೆದಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಮಹಿಳೆ ಬಲಿಯಾಗಿದ್ದಾರೆ.
ಇದನ್ನೂ ಓದಿ: Crime News: ಸರಸಕ್ಕೆ ಅಡ್ಡಿಯಾದ ಮಗು; ಬಿಯರ್ ಬಾಟಲಿಯಿಂದ ಹೊಡೆದು 3 ವರ್ಷದ ಕಂದಮ್ಮನನ್ನೇ ಕೊಲೆಗೈದ ಮಲತಂದೆ
ಭೀಕರ ಅಪಘಾತ; ಖಾಸಗಿ ಬಸ್ ಹರಿದು ಮಹಿಳೆ ತಲೆ ಛಿದ್ರ ಛಿದ್ರ
ಬೆಂಗಳೂರಿನ ಯಶವಂತಪುರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ, ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ ಮಹಿಳೆ ಮೇಲೆ ಖಾಸಗಿ ಬಸ್ ಹರಿದಿದೆ. ತಲೆಯ ಮೇಲೆ ಬಸ್ ಹರಿದ ಪರಿಣಾಮ ವಿನುತಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಯಶವಂತಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಮೃತ ವಿನುತಾ ಕಾಮಾಕ್ಷಿಪಾಳ್ಯದಲ್ಲಿರುವ ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ