ರಾಣೆಬೆನ್ನೂರು ಕೈ ಅಭ್ಯರ್ಥಿ ಕೋಳಿವಾಡ ಮನೆ ಮೇಲೆ ಐಟಿ ದಾಳಿ; ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

ಅಕ್ರಮ ಹಣ, ಮದ್ಯ ಇರುವ ಮಾಹಿತಿ ಮೇರೆಗೆ ಮಂಗಳವಾರ ರಾತ್ರಿ 10 ಗಂಟೆಗೆ ಹಾವೇರಿಯ ವಾಗೀಶ್ ನಗರ 6ನೇ ಕ್ರಾಸ್ ಬಳಿ ಇರುವ ಕೋಳಿವಾಡ ಅವರ ಮನೆಗೆ 20ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. 1 ಗಂಟೆಗಳ ಕಾಲ ಮನೆಯಲ್ಲಾ ಜಾಲಾಡಿ ಪರಿಶೀಲನೆ ನಡೆಸಿದ್ದಾರೆ.

news18-kannada
Updated:December 4, 2019, 8:49 AM IST
ರಾಣೆಬೆನ್ನೂರು ಕೈ ಅಭ್ಯರ್ಥಿ ಕೋಳಿವಾಡ ಮನೆ ಮೇಲೆ ಐಟಿ ದಾಳಿ; ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಕೆಬಿ ಕೋಳಿವಾಡ
  • Share this:
ಹಾವೇರಿ (ಡಿ. 4): ರಾಜ್ಯ ವಿಧಾನಸಭಾ ಉಪಚುನಾವಣೆಗೆ ಕೇವಲ 1 ದಿನ ಬಾಕಿ ಉಳಿದಿದೆ. ಈಗಾಗಲೇ ರಾಜ್ಯದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಾಯಕರ ಬಹಿರಂಗ ಪ್ರಚಾರ ಅಂತ್ಯವಾಗಿದೆ. ಇಂದು ಮನೆಮನೆ ಭೇಟಿ ಮಾಡಿ ಮತಯಾಚನೆ ಮಾಡಲಿದ್ದಾರೆ. ಚುನಾವಣೆಯ ತಲೆಬಿಸಿಯ ನಡುವೆ ಕಾಂಗ್ರೆಸ್​ಗೆ ಮತ್ತೊಂದು ಆಘಾತ ಎದುರಾಗಿದ್ದು, ರಾಣೆಬೆನ್ನೂರು ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ. ಕೋಳಿವಾಡ ಅವರ ಮನೆ ಮೇಲೆ ಐಟಿ ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅಕ್ರಮ ಹಣ, ಮದ್ಯ ಇರುವ ಮಾಹಿತಿ ಮೇರೆಗೆ ಮಂಗಳವಾರ ರಾತ್ರಿ 10 ಗಂಟೆಗೆ ಹಾವೇರಿಯ ವಾಗೀಶ್ ನಗರ 6ನೇ ಕ್ರಾಸ್ ಬಳಿ ಇರುವ ಕೋಳಿವಾಡ ಅವರ ಮನೆಗೆ 20ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. 1 ಗಂಟೆಗಳ ಕಾಲ ಮನೆಯಲ್ಲಾ ಜಾಲಾಡಿ ಪರಿಶೀಲನೆ ನಡೆಸಿದ್ದಾರೆ. ಕೋಳಿವಾಡ ಅವರ ಮನೆಯಲ್ಲಿ 10 ಕೋಟಿ ರೂ. ಹಣ, ಮದ್ಯ ಇಟ್ಟಿರುವ ಶಂಕೆ ಮೇಲೆ ದಾಳಿ ನಡೆಸಲಾಗಿದೆ.

ಆದರೆ, ಕೈ ಅಭ್ಯರ್ಥಿ ಕೆ.ಬಿ. ಕೋಳಿವಾಡ ಅವರ ಮನೆಯಲ್ಲಿ ಹುಡುಕಾಟ ನಡೆಸಿದ ಆದಾಯ ತೆರಿಗೆ ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ಬಂದ ದಾರಿಗೆ ಸುಂಕವಿಲ್ಲ ಎಂದು ವಾಪಾಸಾಗಿದ್ದಾರೆ. ಐಟಿ ದಾಳಿಯಲ್ಲಿ ಏನೂ ಸಿಗಲಿಲ್ಲ ಎಂದು ಅಬಕಾರಿ ಆಯುಕ್ತರು ಹೇಳಿಕೆ ನೀಡಿ ವಾಪಾಸಾಗಿದ್ದಾರೆ. 10 ಕೋಟಿ ರೂ. ಹಣ, ಮದ್ಯ ಇಟ್ಟಿರುವ ಬಗ್ಗೆ ಸಾರ್ವಜನಿಕರ ದೂರು ಆಧರಿಸಿ ದಾಳಿ ನಡೆಸಲಾಗಿತ್ತು. ಚುನಾವಣೆ ಮುನ್ನಾ ದಿನ ಐಟಿ ದಾಳಿ ಮಾಡಿರುವುದು ಉದ್ದೇಶಪೂರ್ವಕ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅನರ್ಹ ಶಾಸಕರಿಗೆ ಪ್ರವೇಶವಿಲ್ಲ ಎಂಬ ಭಿತ್ತಿಪತ್ರ ಮನೆ ಬಾಗಿಲಿಗೆ ಹಾಕಿದ ಕೆ.ಆರ್.ಪೇಟೆಯ ಹೆಮ್ಮನಹಳ್ಳಿ ಗ್ರಾಮಸ್ಥರು

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸ್ಪೀಕರ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ. ಕೋಳಿವಾಡ, ಇದು ಬಿಜೆಪಿ ಪ್ರಯೋಜಿತ ದಾಳಿ. ಸಿಎಂ ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ದಾಳಿ ನಡೆಸಲಾಗಿದೆ ಎಂದು ಆರೋಪ ಮಾಡಿದ್ದಾರೆ.

ಆದರೆ, ಈ ಆರೋಪವನ್ನು ತಳ್ಳಿಹಾಕಿರುವ ಬಿಜೆಪಿ ನಾಯಕರು, ಅನುಕಂಪಕ್ಕಾಗಿ ಕೋಳಿವಾಡ ಅವರೇ ದಾಳಿ ಮಾಡಿಸಿಕೊಂಡಿದ್ದಾರೆ. ಚುನಾವಣೆ ಮುನ್ನ ಐಟಿ, ಅಬಕಾರಿ ದಾಳಿ ಮಾಡಿರುವುದು ಚುನಾವಣಾ ಗಿಮಿಕ್ ಎಂದು ಟೀಕಿಸಿದ್ದಾರೆ.
 
First published:December 4, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ