ಬೆಂಗಳೂರು(ಫೆ. 04): ಸಚಿವ ಸಂಪುಟ ವಿಸ್ತರಣೆಗೆ ಇನ್ನೇನು ಎರಡು ದಿನ ಬಾಕಿ ಉಳಿದಿದ್ದು, ಮೂಲ ಬಿಜೆಪಿಗರಲ್ಲಿ ಅಸಮಾಧಾನ ಸ್ಪೋಟವಾಗಿದೆ. ಇದಕ್ಕೆ ಕಾರಣ ಸೋತವರಿಗೆ ಮಣೆಹಾಕುತ್ತಿರುವುದು. ಸಿಪಿ ಯೋಗೇಶ್ವರ್ಗೆ ಸಚಿವ ಸ್ಥಾನ ನೀಡಲು ಸಿಎಂ ಮುಂದಾಗಿರುವುದು ನಾಯಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಇದೇ ಹಿನ್ನೆಲೆಯಲ್ಲಿ ಮುಂದಿನ ನಡೆ ಕುರಿತು ಇಂದು ಮೂಲ ಬಿಜೆಪಿ ನಾಯಕರು ರಹಸ್ಯ ಸಭೆ ನಡೆಸಿದ್ದಾರೆ.
ಸೋತವರಿಗೆ ಸಚಿವ ಸ್ಥಾನ ನೀಡುತ್ತಿರುವ ಬಗ್ಗೆ ಆಕ್ರೋಶಕ್ಕೆ ಒಳಗಾಗಿರುವ ನಾಯಕರು ಈ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಈಗಾಗಲೇ 10:3 ಅನುಪಾತದಲ್ಲಿ ಸಂಪುಟ ವಿಸ್ತರಣೆ ವೇಳೆ ಯೋಗೇಶ್ವರ್ ಸ್ಥಾನ ನೀಡಿದರೆ, ಮುಂದೇನು ಎಂಬ ಬಗ್ಗೆ ಚರ್ಚಿಸಲು ರಾಜುಗೌಡ ಹಾಗೂ ರೇಣುಕಾಚಾರ್ಯ ನೇತೃತ್ವದಲ್ಲಿ ಸಭೆ ನಡೆಸಿದ್ದಾರೆ.
ಚುನಾವಣೆಯಲ್ಲಿ ಗೆದ್ದಿರುವ ಹಲವಾರು ಆಕಾಂಕ್ಷಿಗಳು ಪಕ್ಷದಲ್ಲಿದ್ದಾರೆ. ಈ ನಡುವೆ ಸರ್ಕಾರ ರಚನೆಗೆ ಪ್ರಮುಖ ಪಾತ್ರವಹಿಸಿದ ನೂತನ ಬಿಜೆಪಿ ನಾಯಕರಿಗೆ ಮಣೆ ನೀಡಲಾಗಿದೆ. ಈ ನಡುವೆ ಆಪರೇಷನ್ ಕಮಲ ನಡೆಸಿದ ಪರಾಜಿತ ಅಭ್ಯರ್ಥಿ ಸಿಪಿ ಯೋಗೇಶ್ವರ್ಗೆ ಸ್ಥಾನ ನೀಡುವುದು ಎಷ್ಟರ ಮಟ್ಟಿಗೆ ಸರಿ ಎಂಬ ವಾದ ಮೂಲ ಬಿಜೆಪಿ ನಾಯಕರಿಂದ ಕೇಳಿ ಬಂದಿದೆ. ‘
ಈಗಾಗಲೇ
ಸೋತ ಸವದಿಗೆ ಹೈ ಕಮಾಂಡ್ ಡಿಸಿಎಂ ಪಟ್ಟ ಕರುಣಿಸಿದೆ. ಈಗ ಮತ್ತೊಮ್ಮೆ ಅದೇ ತಪ್ಪು ಬೇಡ. ಇದರಿಂದ ಪಕ್ಷದಲ್ಲಿ ಮತ್ತಷ್ಟು ಅಸಮಾಧಾನ ಸ್ಪೋಟಗೊಳ್ಳಲಿದೆ. ಇದರ ಬದಲು
ಹೈದ್ರಾಬಾದ್ ಕರ್ನಾಟಕಕ್ಕೆ ಆದ್ಯತೆ ನೀಡಿ. ಸಮತೋಲನ ಕಾಪಾಡಿಕೊಳ್ಳಬೇಕು ಎಂಬ ಮಾತು ಕೇಳಿಬಂದಿದೆ.
ಇದನ್ನು ಓದಿ: ಇಂಗ್ಲಿಷ್ ಸಂಕಷ್ಟ: ರಮೇಶ್ ಜಾರಕಿಹೊಳಿಗೆ ಕೈ ತಪ್ಪಲಿದೆಯಾ ನೀರಾವರಿ ಖಾತೆ?
ಇನ್ನು ಪಕ್ಷದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದ್ದು, ಯಾರು ಸಂಪುಟ ಸೇರಲಿದ್ದಾರೆ, ಯಾರಿಲ್ಲ ಎಂಬ ಕುತೂಹಲ ದಿನೇ ದಿನೇ ಹೆಚ್ಚುತ್ತಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ