ಬೆಂಗಳೂರು: ಸಿಎಂ (CM) ಬಸವರಾಜ ಬೊಮ್ಮಾಯಿ (Basavaraj Bommai) ಅವರು ತಮ್ಮ ಚೊಚ್ಚಲ ಬಜೆಟ್ನಲ್ಲಿ (Budget) ಕೃಷಿ (Agriculture), ಆರೋಗ್ಯ (Health), ಗ್ರಾಮೀಣಾಭಿವೃದ್ಧಿ (Rural Development) ಸೇರಿದಂತೆ ವಿವಿಧ ಇಲಾಖೆಗಳಿಗೆ ಭರಪೂರ ಕೂಡುಗೆ ನೀಡಿದ್ದಾರೆ. ಜೊತೆಗೆ ರಾಜ್ಯದ ನೀರಾವರಿ ಯೋಜನೆಗಳಿಗೂ (Irrigation Project) ಸಾಕಷ್ಟು ಅನುದಾನ ನೀಡಿದ್ದಾರೆ. ಹಲವು ನೀರಾವರಿ ಯೋಜನೆಗಳ ಅಭಿವೃದ್ಧಿ ಬಗ್ಗೆ ಘೋಷಿಸಿದ್ದಾರೆ. ಈ ಪೈಕಿ ಮೇಕೆದಾಟು ಯೋಜನೆ (Mekedatu Project) ಬಗ್ಗೆಯೂ ಸಿಎಂ ತಮ್ಮ ಬಜೆಟ್ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ. ಮುಖ್ಯವಾಗಿ ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಸಿಎಂ ಘೋಷಿಸಿದ್ದಾರೆ. ಈ ಮೂಲಕ ಮೇಕೆದಾಟು ಪಾದಯಾತ್ರೆ ಮಾಡಿದ್ದ ಕಾಂಗ್ರೆಸ್ಗೆ (Congress) ಟಾಂಗ್ ಕೊಟ್ಟಿದ್ದಾರೆ ಅಂತ ತಜ್ಞರು ವಿಶ್ಲೇಷಣೆ ಮಾಡುತ್ತಿದ್ದಾರೆ.
ವಿವಿಧ ನೀರಾವರಿ ಯೋಜನೆಗಳಿಗೆ ಉತ್ತೇಜನ
ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್ನಲ್ಲಿ ರಾಜ್ಯದ ಹಲವು ನೀರಾವರಿಗಳಿಗೆ ಅನುದಾನ ಘೋಷಣೆ ಮಾಡಿದ್ದಾರೆ. ಇವುಗಳಲ್ಲಿ ಪ್ರಮುಖವಾಗಿ ಕೃಷ್ಣಾಮೇಲ್ದಂಡೆ 3ನೇ ಹಂತದ ಯೋಜನೆಗೆ 5ಸಾವಿರ ಕೋಟಿ ರೂಪಾಯಿ, ಕಳಸಾ ಬಂಡೂರಿ ಯೋಜನೆಗೆ 1000 ಕೋಟಿ ರೂಪಾಯಿ ಮೀಸಲಿಡಲಾಗಿದೆ.
ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ರೂಪಾಯಿ
ಇನ್ನು ಭದ್ರಾ ಮೇಲ್ದಂಡೆ ಯೋಜನೆಗಾಗಿ 3000 ಕೋಟಿ ನೀಡಲಾಗುವುದು ಎಂದು ಸಿಎಂ ಹೇಳಿದರು. ಜೊತೆಗೆ ಎತ್ತಿನಹೊಳಿ ಯೋಜನೆಗಾಗಿ 3000 ಕೋಟಿ ಕೊಡಲಾಗುವುದು ಎಂದು ಬೊಮ್ಮಾಯಿ ಮಾಹಿತಿ ನೀಡಿದರು. ಇನ್ನು ಮೇಕೆದಾಟು ಯೋಜನೆಗೆ 1 ಸಾವಿರ ರೂಪಾಯಿ ಅನುದಾನ ನೀಡುವುದಾಗಿ ಸಿಎಂ ಘೋಷಿಸಿದ್ದಾರೆ.
ಇದನ್ನೂ ಓದಿ: Karnataka Budget 2022: ಗ್ರಾಮಗಳ ಅಭಿವೃದ್ಧಿಗೆ ಸಿಎಂ ಕೊಟ್ಟಿದ್ದೇನು? ಸಮಾಜ ಕಲ್ಯಾಣಕ್ಕೆ ಸಿಕ್ಕ ಅನುದಾನವೆಷ್ಟು?
ಕೇಂದ್ರ ಸರ್ಕಾರದ ಹಸಿರು ನಿಶಾನೆ ಬಳಿಕ ಯೋಜನೆ
ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಹಸಿರು ನಿಶಾನೆ ತೋರಿಸಿದ ನಂತರ ಯೋಜನೆ ಆರಂಭಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಜೆಟ್ ಭಾಷಣದಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆಗಾಗಿ ಬಜೆಟ್ನಲ್ಲಿ 1 ಸಾವಿರ ಕೋಟಿ ರೂಪಾಯಿ ತೆಗೆದಿರಿಸಲಾಗುವುದು ಎಂದು ತಿಳಿಸಿದರು.
ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡಿದ್ದ ಕಾಂಗ್ರೆಸ್
ಮೇಕೆದಾಟು ಯೋಜನೆ ಬಗ್ಗೆ ರಾಜ್ಯ ಸರ್ಕಾರ ಹಾಗೂ ಕೇಂದ್ರದಲ್ಲಿರುವ ಎನ್ಡಿಎ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಅಂತ ರಾಜ್ಯ ಕಾಂಗ್ರೆಸ್ ಗಂಭೀರ ಆರೋಪ ಮಾಡಿತ್ತು. ಮೇಕೆದಾಟು ಯೋಜನೆ ಜಾರಿ ಮಾಡುವಂತೆ ಆಗ್ರಹಿಸಿ, ಕಾಂಗ್ರೆಸ್ ನಾಯಕರು ಎರಡು ಬಾರಿ ಪಾದಯಾತ್ರೆ ಮಾಡಿದ್ದರು. 2ನೇ ಹಂತದ ಪಾದಯಾತ್ರೆ ನಿನ್ನೆಯಷ್ಟೇ ಕಾಂಗ್ರೆಸ್ ನಾಯಕರು ಮುಗಿಸಿದ್ದರು.
ಕಾಂಗ್ರೆಸ್ ಪಾದಯಾತ್ರೆಗೆ ಟಾಂಗ್ ಕೊಟ್ರಾ ಸಿಎಂ?
ಕಾಂಗ್ರೆಸ್ ನಾಯಕರು ನಿನ್ನೆಯಷ್ಟೇ ಮೇಕೆದಾಟು ಪಾದಯಾತ್ರೆ ಮುಗಿಸಿದ್ದರು. ಮೇಕೆದಾಟು ಯೋಜನೆಯನ್ನು ಸರ್ಕಾರ ನಿರ್ಲಕ್ಷ್ಯಿಸುತ್ತಿದೆ ಅಂತ ಸಾರ್ವಜನಿಕವಾಗಿ ಆರೋಪ ಮಾಡಿದ್ದರು. ಪಾದಯಾತ್ರೆ ಮುಗಿದ ಮರುದಿನವೇ ಬಜೆಟ್ನಲ್ಲಿ ಮೇಕೆದಾಟು ಯೋಜನೆಗೆ ಸಿಎಂ ಅನುದಾನ ಘೋಷಣೆ ಮಾಡಿದ್ದಾರೆ. ಈ ಮೂಲಕ ಸರ್ಕಾರ ಮೇಕೆದಾಟು ಯೋಜನೆ ಆರಂಭಕ್ಕೆ ಬದ್ಧವಾಗಿದೆ ಅಂತ ಸೂಚ್ಯವಾಗಿ ಹೇಳಿದ್ದಾರೆ. ಇದು ಕಾಂಗ್ರೆಸ್ ಪಾದಯಾತ್ರೆಗೆ ಟಾಂಗ್ ಕೊಡುವ ಯತ್ನ ಅಂತ ಹೇಳಲಾಗುತ್ತಿದೆ.
ಇದನ್ನೂ ಓದಿ: Karnataka Budget 2022: ಯಾವುದೇ ಹೊಸ ತೆರಿಗೆ ಇಲ್ಲ! ಸಿಎಂ ಘೋಷಣೆ ಕೇಳಿ ನಿರಾಳವಾಗಿ ಉಸಿರಾಡಿದ ಜನಸಾಮಾನ್ಯ
ಏನಿದು ಮೇಕೆದಾಟು ಯೋಜನೆ?
ಮೇಕೆದಾಟು ಎನ್ನುವುದು ಕರ್ನಾಟಕ ರಾಜ್ಯದ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ದಕ್ಷಿಣ ಭಾಗದಲ್ಲಿ ದಟ್ಟವಾದ ಅರಣ್ಯದ ನಡುವೆ ಕಾವೇರಿ ನದೀ ಪಾತ್ರದಲ್ಲಿರುವ ಒಂದು ಪ್ರೇಕ್ಷಣೀಯ ವಿಹಾರಸ್ಥಳ, ಬೆಂಗಳೂರಿನಿಂದ 90 ಕಿ. ಮೀ. ದೂರದಲ್ಲಿದೆ. ಮೇಕೆ ಹಾರುವಷ್ಟು ಸ್ಥಳ ಇತ್ತು ಎನ್ನುವುದರಿಂದ ಈ ಹೆಸರು ಬಂದಿದೆ.
ಇಲ್ಲಿ ಕಾವೇರಿನದಿ, ಆಳವಾದ ಕಂದರಕ್ಕೆ ಧುಮುಕುತ್ತದೆ. ಇದರಲ್ಲಿ ನೀರಾವರಿ ಯೋಜನೆ ಆರಂಭಿಸಲು ಈ ಹಿಂದೆ ಕರ್ನಾಟಕ ಸರ್ಕಾರ ನಿರ್ಧರಿಸಿತ್ತು. ಇದಕ್ಕೆ ಪಕ್ಕದ ತಮಿಳುನಾಡು ರಾಜ್ಯ ಸರ್ಕಾರ ವಿರೋಧಿಸಿತ್ತು. ಸದ್ಯ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ