JDS ಭದ್ರಕೋಟೆಯಲ್ಲಿ Operation Lotus; ಇತ್ತ BSY ಅಖಾಡದಲ್ಲಿ ಡಿಕೆಶಿ ಅಬ್ಬರ

ಮಂಡ್ಯ ಗೆದ್ದರೆ ಇಂಡಿಯಾ ಗೆದ್ದ ಹಾಗೆ ಎಂಬ ಮಾತಿದೆ. ಈ ಹಿನ್ನೆಲೆ ಮಂಡ್ಯ ಜಿಲ್ಲೆಯಲ್ಲಿ ಪಕ್ಷವನ್ನು ಬಲಿಷ್ಠಗೊಳಿಸಲು ಮುಂದಾಗಿದೆ. ಮುಂದಿನ ಚುನಾವಣೆಯಲ್ಲಿ ಮಂಡ್ಯದ ನಾಲ್ಕೈದು ಕ್ಷೇತ್ರದ ಮೇಲೆ ಬಿಜೆಪಿ‌ ಕಣ್ಣು ಇರಿಸಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ರಾಜ್ಯದಲ್ಲಿ ಅವಧಿಯೂ ಮುನ್ನ ಅಂದ್ರೆ ಡಿಸೆಂಬರ್ ನಲ್ಲಿಯೇ ಚುನಾವಣೆ (Karnataka Assembly Election) ನಡೆಯುವ ಸಾಧ್ಯತೆಗಳಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆಡಳಿತದಲ್ಲಿರುವ ಬಿಜೆಪಿ ಸರ್ಕಾರ (BJP Government) ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದೆ. ಹಳೇ ಮೈಸೂರು ಭಾಗಕ್ಕೆ ಹೆಚ್ಚು ಒತ್ತು ನೀಡಿರುವ ಬಿಜೆಪಿ, ಸ್ಥಳೀಯ ಯುವ ನಾಯಕರನ್ನು ಪಕ್ಷಕ್ಕೆ (Operation Lotus) ಸೇರ್ಪಡೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದೆ. ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್ (Congress) ಮತ್ತು ಜೆಡಿಎಸ್ (JDS) ಸಾಂಪ್ರದಾಯಿಕ ಎದುರಾಳಿಗಳಾಗಿದ್ದು, ಬಿಜೆಪಿ ಇಲ್ಲಿ ಅಷ್ಟು ಪ್ರಾಬಲ್ಯ ಹೊಂದಿಲ್ಲ. ಜೆಡಿಎಸ್ ಭದ್ರಕೋಟೆ ಎಂದು ಬಿಂಬಿತವಾಗಿರುವ ಮಂಡ್ಯ ಜಿಲ್ಲೆಯಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ (Former Minister CP Yogeshwar) ನೇತೃತ್ವದಲ್ಲಿ ಪಕ್ಷ ಸಂಘಟನೆಗೆ ಬಿಜೆಪಿ ಮುಂದಾಗಿದೆ. ಮುಂದಿನ ತಿಂಗಳು ಮಂಡ್ಯದಲ್ಲಿ ಬಿಜೆಪಿಯ ಬೃಹತ್ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Union Minister Amit Shah), ಉತ್ತರ ಪ್ರದೇಶ ಸಿಎಂ‌ ಯೋಗಿ ಆದಿತ್ಯನಾಥ್ (Uttar Pradesh CM Yogi Adityanath) ಭಾಗಿಯಾಗಲಿದ್ದಾರೆ .

ಬೃಹತ್ ಸಮಾವೇಶ ಹಿನ್ನೆಲೆ ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಬಿಜೆಪಿ ಮುಂದಾಗಿದೆ. ವಿವಿಧ ಕಾರ್ಯಕ್ರಮಗಳ ಮೂಲಕ ಮಾಡಿ ಕೆಳ ಹಂತದ‌ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದೆ.

ಮಂಡ್ಯ ಗೆದ್ದರೆ ಇಂಡಿಯಾ ಗೆದ್ದ ಹಾಗೆ ಎಂಬ ಮಾತಿದೆ. ಈ ಹಿನ್ನೆಲೆ ಮಂಡ್ಯ ಜಿಲ್ಲೆಯಲ್ಲಿ ಪಕ್ಷವನ್ನು ಬಲಿಷ್ಠಗೊಳಿಸಲು ಮುಂದಾಗಿದೆ. ಮುಂದಿನ ಚುನಾವಣೆಯಲ್ಲಿ ಮಂಡ್ಯದ ನಾಲ್ಕೈದು ಕ್ಷೇತ್ರದ ಮೇಲೆ ಬಿಜೆಪಿ‌ ಕಣ್ಣು ಇರಿಸಿದೆ.

ಇವರೆಲ್ಲ ಬಿಜೆಪಿ ಸೇರ್ತಾರಾ?

ಇದಕ್ಕಾಗಿಯೇ ಸಂಸದೆ ಸುಮಲತಾ ಅಂಬರೀಶ್, ಪುತ್ರ ಅಭಿಷೇಕ್ ಮತ್ತು ಬೆಂಬಲಿಗರನ್ನು ಸೆಳೆಯುವ ನಿಟ್ಟಿನಲ್ಲಿ ಬಿಜೆಪಿ ಕೆಲಸ ಮಾಡುತ್ತಿದೆ. ಮುಂದಿನ ತಿಂಗಳು ಮಂಡ್ಯದಲ್ಲಿನ ಸಮಾವೇಶದಲ್ಲಿ ಸ್ಥಳೀಯ ನಾಯಕರು ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆಗಳಿವೆ.

ಇದನ್ನೂ ಓದಿ:  Mandya Politics: ಸುಮಲತಾ ಮಾತ್ರವಲ್ಲ ಇವರೆಲ್ಲರನ್ನ ಸೆಳೆಯಲು ಕಮಲ ಕಸರತ್ತು; JDS ಭದ್ರಕೋಟೆ ಕೆಡವಲು ತಂತ್ರಗಾರಿಕೆ

BSY ಅಖಾಡದಲ್ಲಿ ಡಿ.ಕೆ.ಶಿವಕುಮಾರ್

ಇತ್ತ ಕಾಂಗ್ರೆಸ್ ಸಹ ಚುನಾವಣೆ ಸಿದ್ಧತೆ ನಡೆಸಿದೆ. ಬಿಜೆಪಿ ಭದ್ರಕೋಟೆಯಾಗಿರುವ ಶಿವಮೊಗ್ಗ ತಮ್ಮ ತೆಕ್ಕೆಗೆ ತೆಗೆದುಕೊಳ್ಳುವ ಉದ್ದೇಶದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆ ಆಯೋಜನೆ ಮಾಡಲಾಗಿದೆ. ನಗರದ ತುಂಬೆಲ್ಲಾ ಕಾಂಗ್ರೆಸ್ ಬಾವುಟ ಮತ್ತು ನಾಯಕರ  ಫ್ಲೆಕ್ಸ್ ಗಳು ರಾರಾಜಿಸುತ್ತಿವೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದುರಾಡಳಿತ ಹಾಗೂ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿವೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಹಿನ್ನೆಲೆ ಜನಧ್ವನಿ ಜಾಥಾ ಹಾಗೂ ಬಹಿರಂಗ ಸಭೆಯನ್ನು ಕಾಂಗ್ರೆಸ್ ನಡೆಸಲಿದೆ. ನಗರದ ಬಸ್ ನಿಲ್ದಾಣದ ಅಶೋಕ ವೃತ್ತದಿಂದ ಪ್ರತಿಭಟನಾ ಜಾಥಾ ನಡೆಯಲಿದೆ.

ಬಿಜೆಪಿಯತ್ತ ಲಕ್ಷ್ಮಿ ಅಶ್ವಿನ್ ಗೌಡ

ಮುಂದಿನ ಚುನಾವಣೆ ಮಾತ್ರವಲ್ಲದೇ ಮಂಡ್ಯದಲ್ಲಿ ಬಿಜೆಪಿಗೆ ಭದ್ರ ಅಡಿಪಾಯ ಹಾಕಲು ತಯಾರಿ ನಡೆಸಿದ್ದು, ಮಾಜಿ IRS ಅಧಿಕಾರಿ ಹಾಗೂ ಮಾಜಿ ಸಚಿವರ ಪುತ್ರರ ಜೊತೆ ಮಾತುಕತೆ ಸಹ ನಡೆಸಿದೆ ಎನ್ನಲಾಗಿದೆ.

JDSನಲ್ಲಿ ಗುರುತಿಸಿಕೊಂಡಿದ್ದ ಲಕ್ಷ್ಮಿ ಅಶ್ವಿನ್ ಗೌಡ, ಮಾಜಿ ಸಚಿವ ಎಸ್.ಟಿ.ಜಯರಾಂ ಪುತ್ರ ಅಶೋಕ್ ಜಯರಾಂ ಜೊತೆಯಲ್ಲಿ ಬಿಜೆಪಿ ಈಗಾಗಲೇ ಒಂದು ಸುತ್ತಿನ  ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಅಶೋಕ್ ಜಯರಾಂ ಈಗಾಗಲೇ ಬಹಿರಂಗವಾಗಿಯೇ ಬಿಜೆಪಿ ನಾಯಕರ ಜೊತೆ ಗುರುತಿಸಿಕೊಳ್ಳಲು ಆರಂಭಿಸಿದ್ದಾರೆ. ಇತ್ತ ಲಕ್ಷ್ಮಿ ಅಶ್ವಿನ್ ಗೌಡ ಕೆಲವೇ ದಿನಗಳಲ್ಲಿ ಬಿಜೆಪಿ ಸೇರ್ಪಡೆ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Karnataka Assembly Election: ಅವಧಿಗೂ ಮೊದಲೇ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ? ಆಯೋಗದಿಂದ ಪೂರ್ವ ಸಿದ್ಧತೆಯ ಪ್ಲಾನ್ !

ಚುನಾವಣೆಗೆ ಸಿದ್ಧವಾಗುತ್ತಿರುವ ರಾಜಕೀಯ ಪಕ್ಷಗಳು

ರಾಜ್ಯದ ವಿಧಾನಸಭಾ ಚುನಾವಣೆಗೆ ಇನ್ನೂ ಸಮಯ ಇರೋವಾಗಲೇ ಮೂರು ಪಕ್ಷಗಳು ತಯಾರಿ ನಡೆಸಿವೆ. ಈಗಾಗಲೇ ಬೃಹತ್ ಸಮಾವೇಶ, ಪಕ್ಷದೊಳಗೆ ನಿರಂತರ ಸಭೆಗಳನ್ನು ನಡೆಸುತ್ತಿವೆ. ಕಾಂಗ್ರೆಸ್, ಬಿಜೆಪಿ ಚುನಾವಣಾ ಪೂರ್ವ ಸಮೀಕ್ಷೆಗಳನ್ನು ನಡೆಸುತ್ತಿದ್ದು, ವರದಿಗಾಗಿ ಕಾಯುತ್ತಿವೆ. ಇತ್ತ ಜೆಡಿಎಸ್ ಸಹ ಜಲಧಾರೆ ಯಾತ್ರೆ ಮೂಲಕ ಚುನಾವಣೆ ಪ್ರಚಾರ ನಡೆಸುತ್ತಿದೆ.

ಯಾತ್ರೆಯ ಹೆಸರಿನಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡರು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಕೆಲ ದಿನಗಳ ಹಿಂದೆ ರಾಜ್ಯದಲ್ಲಿ ಅವಧಿಗೂ ಮುನ್ನ ಚುನಾವಣೆ ನಡೆಯಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
Published by:Mahmadrafik K
First published: