Siddaramaiah: ಕನ್ನಡಿಗರಿಗೆ ಮೋಸ ಮಾಡಿ ರಾಜ್ಯಕ್ಕೆ ಯೋಗ ಮಾಡಲು ಬಂದ ಮೋದಿ

ಭಾರೀ ಪ್ರಮಾಣದ ಪ್ರವಾಹ ಬಂತು, ಆ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಬಂದು ಜನರಿಗೆ ಸಾಂತ್ವನ ಹೇಳಿಲ್ಲ, ವಿಶೇಷ ಅನುದಾನ ನೀಡುವ ಕೆಲಸ ಮಾಡಿಲ್ಲ. ಇದರ ಜೊತೆಗೆ ರಾಜ್ಯಕ್ಕೆ ಯಾವೆಲ್ಲಾ ಅನ್ಯಾಯ ಆಗಿದೆ, ಜನದ್ರೋಹ ಆಗಿದೆ ಎಂದು ಸಿದ್ದರಾಮಯ್ಯ ಮೋದಿ ವಿರುದ್ಧ ಕಿಡಿಕಾರಿದ್ದಾರೆ. 

ಸಿದ್ದರಾಮಯ್ಯ, ನರೇಂದ್ರ ಮೋದಿ

ಸಿದ್ದರಾಮಯ್ಯ, ನರೇಂದ್ರ ಮೋದಿ

  • Share this:
ಬೆಂಗಳೂರು (ಜೂ 20) : ಪ್ರಧಾನಿ ನರೇಂದ್ರ ಮೋದಿಯವರು (Narendra Modi) ರಾಜ್ಯ ಪ್ರವಾಸದಲ್ಲಿದ್ರೆ. ಇತ್ತ ಕಾಂಗ್ರೆಸ್​ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯನವರು ಸುದ್ದಿಗೋಷ್ಠಿಯನ್ನು ನಡೆಸಿ ನರೇಂದ್ರ ಮೋದಿ ಮತ್ತು ಬಿಜೆಪಿ ಕೇಂದ್ರ ಸರ್ಕಾರದಿಂದ (Central Government) ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ದ ಹರಿಹಾಯ್ದಿದ್ದಾರೆ.  2019 ಹಾಗೂ ನಂತರದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಭಾರಿ ಪ್ರಮಾಣದ ಪ್ರವಾಹ ಬಂತು, ಆ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ (State) ಬಂದು ಜನರಿಗೆ ಸಾಂತ್ವನ ಹೇಳಿಲ್ಲ, ವಿಶೇಷ ಅನುದಾನ ನೀಡುವ ಕೆಲಸ ಮಾಡಿಲ್ಲ. ಇದರ ಜೊತೆಗೆ ರಾಜ್ಯಕ್ಕೆ ಯಾವೆಲ್ಲಾ ಅನ್ಯಾಯ ಆಗಿದೆ, ಜನದ್ರೋಹ ಆಗಿದೆ ಎಂದು ತಮಗೆಲ್ಲ ಗೊತ್ತಿದೆ ಎಂದು ಸಿದ್ದರಾಮಯ್ಯ (Siddaramaiah) ಮೋದಿ ವಿರುದ್ಧ ಕಿಡಿಕಾರಿದ್ದಾರೆ. 

ಮೈಸೂರು ಬ್ಯಾಂಕ್‌ ಸ್ಥಾಪನೆ ಮಾಡಿದ್ದು 1913ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌ರವರು. ಇಂದು ಆ ಹೆಸರನ್ನೇ ಮೋದಿ ಅವರು ಅಳಿಸಿ ಹಾಕಿದ್ದಾರೆ. ಕರಾವಳಿಯಲ್ಲಿ 1906 ರಲ್ಲಿ ಕಾರ್ಪೋರೇಷನ್‌ ಬ್ಯಾಂಕ್‌ ಆರಂಭವಾಯಿತು. ಹಾಜಿ ಅಬ್ದುಲ್ಲ ಎಂಬುವವರು ಸ್ಥಾಪನೆ ಮಾಡಿದ್ದು, ಸಿಂಡಿಕೇಟ್‌ ಬ್ಯಾಂಕ್‌ ಟಿ.ಎಂ.ಎ ಪೈ ಅವರಿಂದ ಸ್ಥಾಪನೆಯಾಗಿದ್ದು, ವಿಜಯಾ ಬ್ಯಾಂಕ್‌ ನಮ್ಮ ರಾಜ್ಯದ್ದು.

ನಮ್ಮ ಬ್ಯಾಂಕ್​ಗಳನ್ನು ವಿಲೀನ ಮಾಡಿದ್ರು

ಈ 4 ಬ್ಯಾಂಕುಗಳನ್ನು ಬೇರೆ ಬ್ಯಾಂಕುಗಳ ಜೊತೆ ವಿಲೀನ ಮಾಡಿದ್ದು ಯಾರು? ಈ ಬ್ಯಾಂಕುಗಳ ಒಟ್ಟು ಆಸ್ತಿ ರೂ. 317 ಲಕ್ಷ ಕೋಟಿ ಇತ್ತು. 75,000 ಕ್ಕೂ ಹೆಚ್ಚು ಸಿಬ್ಬಂದಿ ಹೊಂದಿತ್ತು. ಈ 4 ಬ್ಯಾಂಕುಗಳು ಕನ್ನಡಿಗರಿಗೆ ಉದ್ಯೋಗ ನೀಡುತ್ತಿದ್ದವು. ಇವು ಬೇರೆ ಬ್ಯಾಂಕುಗಳೊಂದಿಗೆ ವಿಲೀನವಾದ ನಂತರ ಇವುಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗುತ್ತಿದೆಯಾ? ಇದು ಕನ್ನಡಿಗರಿಗೆ ಮಾಡಿದ ಮೋಸವಲ್ಲವೇ? ಬೇರೆ ಬ್ಯಾಂಕುಗಳು ದಿವಾಳಿಯಾಗಿವೆ ಎಂದು ವಿಲೀನ ಮಾಡಿದ್ದರಿಂದ ಕನ್ನಡಿಗರಿಗೆ ಕೆಲಸ ಸಿಗದಂತಾಗಿದೆ. ಇದು ನಮ್ಮ ರಾಜ್ಯಕ್ಕೆ ಮಾಡಿರುವ ದೊಡ್ಡ ಅವಮಾನ.

ಇದನ್ನೂ ಓದಿ: PM Modi: ಕಾಂಗ್ರೆಸ್ ಸಾಧನೆ ಹೇಳಿ ಪ್ರಧಾನಿಗಳನ್ನು ಸಿದ್ದರಾಮಯ್ಯ ಸ್ವಾಗತಿಸಿದ್ದು ಹೀಗೆ ನೋಡಿ

ಎಲ್ಲದಕ್ಕೂ ಕಾರಣ ನರೇಂದ್ರ ಮೋದಿ

ಕೊರೊನಾ ರೋಗ ಬಂದಾಗ ಆಮ್ಲಜನಕ ಕೊಡಲಿಲ್ಲ. ಆ ನಂತರ ಕರ್ನಾಟಕ ಹೈಕೋರ್ಟ್‌ ನವರು ರಾಜ್ಯಕ್ಕೆ ಆಮ್ಲಜನಕ ನೀಡುವಂತೆ ಆದೇಶ ಮಾಡಿದ ಮೇಲೆ ಹೈಕೋರ್ಟ್‌ ಹೇಳಿದಷ್ಟು ಆಮ್ಲಜನಕ ಪೂರೈಕೆ ಮಾಡಲು ಆಗಲ್ಲ ಎಂದು ಸುಪ್ರೀಂ ಕೋರ್ಟ್‌ ಗೆ ಕೇಂದ್ರ ಸರ್ಕಾರ ಮೇಲ್ಮನವಿ ಸಲ್ಲಿಸಿತು. ಆಮ್ಲಜನಕ ಸಿಗದೆ ರಾಜ್ಯದಲ್ಲಿ ಬಹಳ ಮಂದಿ ಸತ್ತು ಹೋದರು. ಇದಕ್ಕೆ ಚಾಮರಾಜನಗರ ಜಿಲ್ಲಾಸ್ಪತ್ರೆ ದುರಂತ ಒಂದು ಉದಾಹರಣೆ. ಕೇಂದ್ರ ಸಚಿವರು ಸಂಸತ್ತಿಗೆ ಉತ್ತರ ನೀಡುವಾಗ ಆಮ್ಲಜನಕ ಸಿಗದೆ ದೇಶದಲ್ಲಿ ಒಬ್ಬರು ಸತ್ತಿಲ್ಲ ಎಂದು ಸುಳ್ಳು ಹೇಳಿದರು. ಚಾಮರಾಜನಗರ ಆಸ್ಪತ್ರೆಯಲ್ಲೇ 36 ಜನ ಸತ್ತಿದ್ದಾರೆ. ಇದಕ್ಕೆ ಕಾರಣ ನರೇಂದ್ರ ಮೋದಿ ಅವರಲ್ಲವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಟ್ವೀಟ್​ ಮೂಲಕ ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಬಿಜೆಪಿ, ಪ್ರಧಾನಿಯವರನ್ನು ಸದಾ ಟೀಕೆ ಮಾಡುವ ವಿಪಕ್ಷ ನಾಯಕರು ಸಿದ್ದರಾಮಯ್ಯನವರು ಬೆಂಗಳೂರಿಗೆ ಆಗಮಿಸಿರುವ ಮೋದಿಯವರಿಗೆ ಸಾಲುಸಾಲು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.  ಬೆಂಗಳೂರು ಉಪನಗರ ರೈಲು ಯೋಜನೆ ನೆನೆಗುದಿಗೆ ಬೀಳಲು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಕಾರಣವೇ, ಹಿಂದಿ ಭಾಷೆಯನ್ನು ಹೇರಲು ಹೊರಟಿರುವ ಸಂದರ್ಭದಲ್ಲಿ ಕನ್ನಡದ ಅತ್ಮಿತೆ ಬಗ್ಗೆ ನಿಮ್ಮ ನಿಲುವೇನು, ಅಮಿತ್ ಶಾ ಅವರ ಹಿಂದಿ ಹೇರಿಕೆಗೆ ನಿಮ್ಮ ಮೌನವೇಕೆ?

ಇದನ್ನೂ ಓದಿ: Narendra Modi: ನಮೋಗೆ ರೇಷ್ಮೆ ನೂಲು, ಬನಾರಸ್ ಮುತ್ತುಗಳಿಂದ ಮಾಡಿದ ಮೈಸೂರು ಪೇಟ; ಸ್ವರ್ಣ ಲೇಪಿತ ಅಕ್ಷರದ ಫೋಟೋ ಗಿಫ್ಟ್

#AnswerModi

ಹಲವು ಪ್ರಶ್ನೆಗಳನ್ನು ಕೇಳಿದ ಸಿದ್ದರಾಮಯ್ಯ, #AnswerModi ಎಂದು ಹ್ಯಾಶ್ ಟಾಗ್ ಮಾಡಿ ಪೋಸ್ಟ್ ಮಾಡಿದ್ದಾರೆ.
Published by:Pavana HS
First published: